ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್

Shashank Manohar has stepped down as International Cricket Council Chairman

ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷ ಸ್ಥಾನದಿಂದ ಭಾರತದ ಶಶಾಂಕ್ ಮನೋಹರ್ ಕೆಳಗಿಳಿದಿದ್ದಾರೆ. ಈ ವರ್ಷ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿತ್ತು. ಆದರೆ, ಮನೋಹರ್ ಅವರು ಮರು ಆಯ್ಕೆ ಬಯಸದ ಕಾರಣ ತಮ್ಮ ಸ್ಥಾನ ಬಿಟ್ಟುಕೊಡಲಿದ್ದಾರೆ ಎಂದು ಆಡಳಿತ ಮಂಡಳಿ ಬುಧವಾರ(ಜುಲೈ 1) ತಿಳಿಸಿದೆ.

ಮುಂದಿನ ಐಸಿಸಿ ಸಭೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಚರ್ಚೆ ನಡೆಯಲಿದೆ. ಮಾಧ್ಯಮ ವರದಿಯೊಂದರ ಪ್ರಕಾರ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್‌ (ಇಸಿಬಿ) ಮುಖ್ಯಸ್ಥ ಕಾಲಿನ್ ಗ್ರೇವ್ಸ್ ತೆರವಾದ ಸ್ಥಾನ ತುಂಬಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ಉಪಾಧ್ಯಕ್ಷ ಇಮ್ರಾನ್ ಖ್ವಾಜಾ ಅವರು ಮನೋಹರ್ ಸ್ಥಾನವನ್ನು ತುಂಬಲಿದ್ದಾರೆ.

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧೆಯ ಬಗ್ಗೆ ಪಿಸಿಬಿ ಮುಖ್ಯಸ್ಥ ಇಹ್ಸಾನ್ ಮನಿ ಸ್ಪಷ್ಟನೆಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧೆಯ ಬಗ್ಗೆ ಪಿಸಿಬಿ ಮುಖ್ಯಸ್ಥ ಇಹ್ಸಾನ್ ಮನಿ ಸ್ಪಷ್ಟನೆ

'ಐಸಿಸಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಅಂತಿಮ ನಿರ್ಧಾರ ಸದ್ಯಕ್ಕೆ ತೆಗೆದುಕೊಂಡಿಲ್ಲ. ಈ ಬಗ್ಗೆ ಮುಂದಿನಐಸಿಸಿ ಬೋರ್ಡ್ ಮೀಟಿಂಗ್‌ನಲ್ಲಿ ಚರ್ಚಿಸಲಾಗುತ್ತದೆ, ಇಮ್ರಾನ್ ಅವರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ,' ಎಂದು ಐಸಿಸಿ ಟ್ವೀಟ್ ಮಾಡಿದೆ.

ಸದ್ಯ ಐಸಿಸಿ ಮುಖ್ಯಸ್ಥರಾಗಿರುವ ಶಶಾಂಕ್ ಮನೋಹರ್, ತಮ್ಮ ಅವಧಿ ಮುಗಿದ ಬಳಿಕ ತಾನು ಮರು ಆಯ್ಕೆಯತ್ತ ಆಸಕ್ತಿ ಹೊಂದಿಲ್ಲ ಎಂದು ಕಳೆದ ಡಿಸೆಂಬರ್‌ನಲ್ಲಿ ಹೇಳಿದ್ದರು. ಮನೋಹರ್ ಅವಧಿ ಮೇ ಅಂತ್ಯಕ್ಕೆ ಕೊನೆಗೊಂಡಿದೆ.

ಭಾರತೀಯ ಕ್ರಿಕೆಟ್ ಮಂಡಳಿ ( ಬಿಸಿಸಿಐ) ಅಧ್ಯಕ್ಷ ಸ್ಥಾನವನ್ನು ತೊರೆದ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನ ಚೇರ್ಮನ್ ಆಗಿ 2016 ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಹಿಂದೆ ವೈಯಕ್ತಿಕ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಶಶಾಂಕ್ ಮನೋಹರ್ ನಂತರ ತಮ್ಮ ನಿರ್ಧಾರ ಬದಲಾಯಿಸಿ, ಐಸಿಸಿಯಲ್ಲೇ ಮುಂದುವರೆದಿದ್ದರು. ಐಸಿಸಿ ಮೊದಲ ಸ್ವತಂತ್ರ ಮಹಿಳಾ ನಿರ್ದೇಶಕಿಯ ಆಯ್ಕೆ, ಅಂತಾರಾಷ್ಟ್ರೀಯ ಕ್ರಿಕೆಟ್ ಸ್ವರೂಪದಲ್ಲೂ ಬದಲಾವಣೆ ತಂದು ಕ್ರೀಡಾರಂಗದ ಬೆಳವಣಿಗೆಗೆ ದಾರಿ ಮಾಡಿದ್ದರು.

Story first published: Thursday, July 2, 2020, 9:44 [IST]
Other articles published on Jul 2, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X