Shikhar Dhawan: ಚಾಂಪಿಯನ್ಸ್ ಟ್ರೋಫಿಯಿಂದ ಟೆಸ್ಟ್ ವರೆಗೆ "ಗಬ್ಬರ್" ಹೆಸರಿನಲ್ಲಿ 3 ಶ್ರೇಷ್ಠ ದಾಖಲೆಗಳು
ಟೀಮ್ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟರ್ ಶಿಖರ್ ಧವನ್ ಒಂದು ಕಾಲದಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕದ ಪ್ರಬಲ ಆಧಾರಸ್ತಂಭವಾಗಿದ್ದರು. ಆದರೆ ಕಾಲಾನಂತರದಲ್ಲಿ ಅವಕಾಶ ಸಿಗದೆ ಕಥೆ ಬದಲಾಗಿತ್ತು. ಹೀಗಾಗಿ ಶಿಖರ್ ಧವನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.
ಶಿಖರ್ ಧವನ್ ಭಾರತ ಪರ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಅಬ್ಬರಿಸಿದ್ದಾರೆ. ಅವರು ಕಳೆದ 2 ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. 2022ರಲ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಅವರು ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. 2018 ರಿಂದ ಟೆಸ್ಟ್ ಸ್ವರೂಪದಿಂದ ಹೊರಗುಳಿದಿದ್ದರು.

ಧವನ್ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ 10 ಸಾವಿರಕ್ಕೂ ಹೆಚ್ಚು ರನ್ ಹೊಡೆದಿದ್ದಾರೆ. ಇದರೊಂದಿಗೆ ತಮ್ಮ ಹೆಸರಿನಲ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ಪ್ರಮುಖವಾಗಿ ಅವರ ಮೂರು ದಾಖಲೆಗಳ ಬಗ್ಗೆ ಇಲ್ಲಿದೆ ಮಾಹಿತಿ ತಿಳಿಯಿರಿ. ಟೀಮ್ ಇಂಡಿಯಾದ ದಿಗ್ಗಜ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಅವರಿಂದಲ್ಲೂ ಧವನ್ ಮಾಡಿರುವ ದಾಖಲೆ ಮುರಿಯಲು ಸಾಧ್ಯವಾಗಿಲ್ಲ.
ಟೆಸ್ಟ್‌ನಲ್ಲಿ ಅತಿವೇಗದ ಶತಕ
ಸದಾ ದ್ವೀಪ ರಾಷ್ಟ್ರಗಳಲ್ಲಿ ಅಬ್ಬರಿಸುತ್ತಿದ್ದ ಧವನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಈ ದಾಖಲೆಯನ್ನು ಇದುವರೆಗೂ ಯಾರಿಂದಲ್ಲೂ ಬ್ರೇಕ್ ಮಾಡುವುದಕ್ಕೆ ಆಗಿಲ್ಲ. ಆಸ್ಟ್ರೇಲಿಯಾ ವಿರುದ್ಧದ ತಮ್ಮ ಪರ್ದಾಪಣೆ ಪಂದ್ಯದಲ್ಲಿ ಅವರು ಕೇವಲ 85 ಎಸೆತಗಳಲ್ಲಿ ಶತಕ ಗಳಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ಅವರು ಇಟ್ಟು 174 ಎಸೆತಗಳನ್ನು ಎದುರಿಸಿ 187 ರನ್ ಹೊಡೆದು ಭಾರತದ ಗೆಲುವಿಗೆ ಕಾರಣವಾಗಿದ್ದರು.
ಭಾರತದ ಪರ ಗರಿಷ್ಠ ರನ್
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ಆಟಗಾರ ಶಿಖರ್ ಧವನ್. ಈ ದಾಖಲೆಯನ್ನು ಮಾಡುವಲ್ಲಿ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಹಿಂದೆ ಬಿದ್ದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅವರು 3ನೇ ಸ್ಥಾನದಲ್ಲಿದ್ದಾರೆ.
ಧವನ್ ಒಟ್ಟು 10 ಪಂದ್ಯಗಳಲ್ಲಿ 701 ರನ್ ಗಳಿಸಿದ್ದಾರೆ. ಈ ಐಸಿಸಿ ಟೂರ್ನಿಯಲ್ಲಿ 700 ರನ್‌ಗಳ ಗಡಿಯನ್ನು ಮುಟ್ಟಿದ ಏಕೈಕ ಭಾರತೀಯ ಮತ್ತು ವಿಶ್ವದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಅತಿ ಹೆಚ್ಚು ಶತಕಗಳು
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿಹೆಚ್ಚು ರನ್ ಹೊಡೆಯುವುದರ ಜೊತೆಗೆ ಧವನ್ ಮೂರು ಶತಕಗಳನ್ನು ಬಾರಿಸಿದ್ದಾರೆ. ಈ ಟೂರ್ನಿಯಲ್ಲಿ ಅತಿಹೆಚ್ಚು ಶತಕಗಳನ್ನು ಗಳಿಸಿದ ಜಂಟಿ ಮೊದಲ ಬ್ಯಾಟರ್ ಆಗಿದ್ದಾರೆ. ವೆಸ್ಟ್ ಇಂಡೀಸ್ ದಿಗ್ಗಜ ಬ್ಯಾಟರ್ ಕ್ರಿಸ್ ಗೇಲ್, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ ಕೂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಮೂರು ಶತಕಗಳನ್ನು ಹೊಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications