ಟೀಮ್ ಇಂಡಿಯಾ ಮಾಜಿ ಸ್ಪೋಟಕ ಆರಂಭಿಕ ಬ್ಯಾಟರ್ ಶಿಖರ್ ಧವನ್ ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರದಿಂದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಅವರು ಹಲವು ದಿನಗಳಿಂದ ಟೀಮ್ ಇಂಡಿಯಾಗೆ ಮರಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಕೂಡ ವಿಫಲರಾಗಿದ್ದರು.
ಈಗ ಶಿಖರ್ ಧವನ್ ಮತ್ತೊಮ್ಮೆ ಬ್ಯಾಟ್ ಕೈಗೆತ್ತಿಕೊಂಡಿದ್ದಾರೆ. ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜು ಪ್ರಕ್ರಿಯೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಧವನ್ ಅದಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಅದಕ್ಕೂ ಮುನ್ನ ಗಬ್ಬರ್ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಲೀಗ್‌ಗಾಗಿ ಶಿಖರ್ ಧವನ್ ನೆಟ್ಸ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಧವನ್ ಅವರ ಬ್ಯಾಟಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಶಿಖರ್ ಫ್ಯಾನ್ಸ್ ಸಂತಸಗೊಂಡಿದ್ದಾರೆ.
ಈ ವೀಡಿಯೋದಲ್ಲಿ ಧವನ್ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಧವನ್ 360 ಡಿಗ್ರಿಯಲ್ಲಿ ಶಾಟ್ ಹೊಡೆದಿರುವುದು ಎಲ್ಲರನ್ನು ಅಚ್ಚರಿಗೊಳಿಸಿದೆ. ರಿವರ್ಸ್ ಶಾಟ್ ಅನ್ನು ಅವರು ಅದ್ಭುತವಾಗಿ ಹೊಡೆದಿದ್ದಾರೆ. ಈ ಮೂಲಕ ಅವರು ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ 'ಮಿಸ್ಟರ್ 360' ಬ್ಯಾಟರ್ ಆಗುವ ಸಾಧ್ಯತೆಯಿದೆ.
ಮತ್ತೊಂದೆಡೆ ಐಪಿಎಲ್ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಧವನ್ ಅವರನ್ನು ಉಳಿಸಿಕೊಳ್ಳಬಹುದೇ? ಅಥವಾ ಬೇರೆ ಯಾವುದಾದರೂ ತಂಡದ ಜೆರ್ಸಿಯಲ್ಲಿ ಗಬ್ಬರ್ ಲುಕ್ ನೋಡಬಹುದೇ ಎಂಬುದನ್ನು ಕಾದು ನೋಡಬೇಕಾಗಿದೆ.
ಸೆಪ್ಟೆಂಬರ್ 20 ರಿಂದ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ವಿಶ್ವ ಕ್ರಿಕೆಟ್‌ನ ಅನೇಕ ದಿಗ್ಗಜ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಈಗ ಆ ಸ್ಟಾರ್ ಆಟಗಾರರ ಜೊತೆ ಶಿಖರ್ ಧವನ್ ಕೂಡ ಅಬ್ಬರಿಸಲು ಸಜ್ಜಾಗಿದ್ದಾರೆ. ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಮತ್ತು ಜಹೀರ್ ಖಾನ್ ಸೇರಿದಂತೆ ಹಲವು ಟೀಮ್ ಇಂಡಿಯಾ ಆಟಗಾರರನ್ನು ಈ ಟೂರ್ನಿಯಲ್ಲಿ ಕಾಣಬಹುದಾಗಿದ್ದು, ಧವನ್ ಅವರು ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.