ಐಪಿಎಲ್ ಟೂರ್ನಿಯಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಧವನ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು ಟೂರ್ನಿಯ ಎರಡನೇ ಪಂದ್ಯ ಶನಿವಾರ (ಏಪ್ರಿಲ್ 10) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್‍ಗಳ ನಷ್ಟಕ್ಕೆ 188 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಸುಲಭವಾಗಿ ಗುರಿಯನ್ನು ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಮುಟ್ಟಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರರಾಗಿ ಬಂದ ಶಿಖರ್ ಧವನ್ ಮತ್ತು ಪೃಥ್ವಿ ಶಾ ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು.
ಶಿಖರ್ ಧವನ್ 54 ಎಸೆತಗಳಲ್ಲಿ 85 ರನ್ ಬಾರಿಸಿದರು. ಧವನ್ ಅವರ ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 2 ಸಿಕ್ಸರ್ ಕೂಡ ಸೇರಿದ್ದವು. ಧವನ್ ತಮ್ಮ ಈ ಇನ್ನಿಂಗ್ಸ್‌ನಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ. 600 ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ದಾಖಲೆಯನ್ನು ಶಿಖರ್ ಧವನ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಶಿಖರ್ ಧವನ್ ಹೊರತುಪಡಿಸಿ ಬೇರೆ ಯಾವುದೇ ಆಟಗಾರನೂ ಸಹ ಐಪಿಎಲ್ ಟೂರ್ನಿಯಲ್ಲಿ 600 ಬೌಂಡರಿಗಳನ್ನು ಬಾರಿಸಿಲ್ಲ.
176 ಇನ್ನಿಂಗ್ಸ್ ಆಡಿರುವ ಧವನ್ ಒಟ್ಟು 601 ಬೌಂಡರಿಗಳನ್ನು ಬಾರಿಸಿದ್ದಾರೆ. ಧವನ್ ಹೊರತುಪಡಿಸಿ ಡೇವಿಡ್ ವಾರ್ನರ್ 510 ಬೌಂಡರಿ, ವಿರಾಟ್ ಕೊಹ್ಲಿ 507 ಬೌಂಡರಿ, ಸುರೇಶ್ ರೈನಾ 496 ಬೌಂಡರಿ ಮತ್ತು ಗೌತಮ್ ಗಂಭೀರ್ 491 ಬೌಂಡರಿಗಳನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications