ಸತತ ಎರಡನೇ ಶತಕ ಸಿಡಿಸಿ ಐಪಿಎಲ್ ಇತಿಹಾಸದಲ್ಲಿ ದಾಖಲೆ ಬರೆದ ಶಿಖರ್ ಧವನ್

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತೊಂದು ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ ಎರಡನೇ ಶತಕವನ್ನು ದಾಖಲಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದದ ಪಂದ್ಯದಲ್ಲಿ ಪೃಥ್ವಿ ಶಾ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದರು. 61 ಎಸೆತವನ್ನು ಎದುರಿಸಿದ ಧವನ್ 106 ರನ್ ಬಾರಿಸಿ ಅಜೇಯವಾಗುಳಿದರು. 173.77ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಧವನ್ 12 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದ್ದಾರೆ.

ಧವನ್ ಏಕಾಂಗಿ ಹೋರಾಟ
ಪಂಜಾಬ್ ವಿರುದ್ದದ ಪಂದ್ಯದಲ್ಲಿ ಶಿಖರ್ ದವನ್ ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮನ್‌ಗಳು ಯಾರೂ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ವಿಫಲರಾದರು. ಧವನ್ ಏಕಾಂಗಿ ಹೋರಾಟದ ಫಲವಾಗಿ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡ 164 ರನ್ ಗಳಿಸಿತು.

13ವರ್ಷಗಳ ನಂತರ ಸಿಡಿದ ಶತಕ
ಶಿಖರ್ ಧವನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಹಿಂದಿನ ಪಂದ್ಯದಲ್ಲೂ ಶತಕವನ್ನು ಸಿಡಿಸಿ ಮಿಂಚಿದ್ದರು. 2008ರ ಐಪಿಎಲ್ ಉದ್ಘಾಟನಾ ಆವೃತ್ತಿಯಿಂದ ಪಾಲ್ಗೊಳ್ಳುತ್ತಿರುವ ಧವನ್ ಸುದೀರ್ಘ ಕಾಲದ ನಂತರ ಐಪಿಎಲ್‌ನಲ್ಲಿ ಮೊದಲ ಶತಕವನ್ನು ಸಿಡಿಸಿ ಸಂಭ್ರಮಿಸಿದ್ದರು. ಆದರೆ ಅದಾದ ಮುಂದಿನ ಪಂದ್ಯದಲ್ಲೇ ಇದೀಗ ಮತ್ತೊಂದು ಶತಕವನ್ನು ಸಿಡಿಸಿ ಬೆರಗು ಮೂಡಿಸಿದ್ದಾರೆ.

ಆರಂಭಿಕನಾಗಿ ಮೈಲಿಗಲ್ಲು
ಇನ್ನು ಇದೇ ಪಂದ್ಯದಲ್ಲಿ ಶಿಖರ್ ಮತ್ತೊಂದು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದರು. ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಎಂಬ ದಾಖಲೆಯನ್ನೂ ಧವನ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟೀಕೆಗೆ ಗುರಿಯಾಗಿದ್ದ ಧವನ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಶಿಖರ್ ಧವನ್ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ನಲ್ಲಿ ಚುಟುಕು ಕ್ರಿಕೆಟ್‌ನಲ್ಲಿ ಧವನ್ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆಯೇ ಪ್ರಶ್ನೆಗಳು ಎದ್ದಿತ್ತು. ಆದರೆ ಎಲ್ಲದಕ್ಕೂ ಮೌನವಾಗಿಯೇ ಇದ್ದ ಧವನ್ ತಮ್ಮ ಬ್ಯಾಟಿಂಗ್ ಮೂಲಕವೇ ಉತ್ತರವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications