ವೇಗದ ಸಾವಿರ ರನ್ ಸಿಡಿಸಿ ಸಚಿನ್ ದಾಖಲೆ ಮುರಿದ ಶಿಖರ್ ಧವನ್
ಲಂಡನ್, ಜೂನ್ 12 : ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಮತ್ತೊಂದು ದಾಖಲೆ ನಿರ್ಮಿಸಿದರು.
ಓವಲ್ ಮೈದಾನದಲ್ಲಿ ನಿನ್ನೆ (ಸೋಮವಾರ) ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಧವನ್ 78 ರನ್ ಗಳಿಸಿ ಪ್ರಸಕ್ತ ಸಾಲಿನಲ್ಲಿ ಆಡಿರುವ 16 ಅಂತಾರಾಷ್ಟ್ರೀಯ ಇನಿಂಗ್ಸ್‌ನಲ್ಲಿ ವೇಗದ 1000 ರನ್ ಗಳಿಸಿದರು. ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.

ಭಾರತದ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ 18 ಇನಿಂಗ್ಸ್‌ನಲ್ಲಿ 1000 ರನ್ ಗಳಿಸಿದ ದಾಖಲೆ ಹೊಂದಿದ್ದರು. ಜತೆಗೆ ಸೌರವ್ ಗಂಗೂಲಿ ಹಾಗೂ 20 ಇನಿಂಗ್ಸ್‌ನಲ್ಲಿ 1000 ರನ್ ಗಳಿಸಿದ್ದರು. ಇದೀಗ ಶಿಖರ್ ಧವನ್ 16 ಇನಿಂಗ್ಸ್‌ನಲ್ಲಿ ಸಾವಿರ ರನ್ ಸಿಡಿಸಿ ಸಚಿನ್ ಅವರ ದಾಖಲೆಯನ್ನು ಹಿಂದಿಕ್ಕಿದರು.
2017 ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಶಿಖರ್ ಧವನ್ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಟೂರ್ನಿಯ ಸತತ ಮೂರು ಪಂದ್ಯಗಳಲ್ಲಿ ಧವನ್ ಕ್ರಮವಾಗಿ 68, 125 ಹಾಗೂ 78 ರನ್ ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications