ಭಾರತ vs ವಿಂಡೀಸ್ ಸರಣಿ; ಏಕದಿನ ಸರಣಿಯಿಂದಲೂ ಧವನ್ ಔಟ್?

ಗಾಯದ ಕಾರಣದಿಂದ ಆರಂಭಿಕ ಆಟಗಾರ ಶಿಖರ್ ಧವನ್ ತಂಡದಿಂದ ಹೊರಗುಳಿದಿದ್ದಾರೆ. ಆರಂಭದಲ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದ ಧವನ್ ಬಳಿಕ ಅವರನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಇದೀಗ ಏಕದಿನ ಸರಣಿಯಿಂದಲೂ ಧವನ್ ಹೊರಗುಳಿಯುವ ಸಾಧ್ಯತೆಯಿದೆ.
ಸೈಯ್ಯದ್ ಮುಷ್ತಾಕ್ ಅಲಿ ಸರಣಿಯ ಸಂದರ್ಭದಲ್ಲಿ ಮಹಾರಾಷ್ಟ್ರದ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಬಳಿಕ ವಿಂಡಿಸ್ ವಿರುದ್ಧದ ಮೂರೂ ಪಂದ್ಯಗಳಿಂದ ಧವನ್ ಹೊರಗುಳಿದಿದ್ದರು. ಇದೀಗ ಮೂಲಗಳಿಂದ ಬರುತ್ತಿರುವ ವರದಿಯ ಪ್ರಕಾರ ಧವನ್ ಗಾಯದಿಂದ ಸಂಪೂರ್ಣ ಹೊರಬರಲು ಇನ್ನಷ್ಟು ಸಮಯಗಳು ಬೇಕಾಗಿದೆ ಎನ್ನಲಾಗ್ತಿದೆ.
ಈ ಕಾರಣದಿಂದಾಗಿ ಧವನ್ ವಿಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಗುಳಿಯೋದು ಬಹುತೇಕ ಪಕ್ಕಾ ಆಗಿದೆ. ಟಿ20ಯಲ್ಲಿ ಧವನ್ ಸ್ಥಾನಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ಏಕದಿನ ಸರಣಿಗೂ ಆಯ್ಕೆಯಾಗಿವ ಸಾಧ್ಯತೆಯಿದೆ. ಸಂಜು ಸ್ಯಾಮ್ಸನ್ ಹೊರತುಪಡಿಸಿದರೆ ಧವನ್ ಸ್ಥಾನವನ್ನು ತುಂಬಲು ಶುಬ್ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಸಂಜು ಸ್ಯಾಮ್ಸನ್ ಟಿ20 ಸರಣಿಯ ಎರಡೂ ಪಂದ್ಯಗಳಲ್ಲಿ ಆಯ್ಕೆಯಾಗದೆ ಆಡುವ 11ರ ಬಳಗದಲ್ಲಿ ಆಡುವ ಅವಕಾಶವನ್ನು ಪಡೆಯಲು ವಿಫಲರಾಗಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಾದರೂ ಅವಕಾಶ ದೊರೆಯಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ.
ಏಕದಿನ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ಸ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಬ್ ಪಂತ್(ವಿಕೆಟ್ ಕೀಪರ್) ಶಿವಂ ದುಬೆ, ಕೇದಾರ್ ಜಾದವ್, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ದೀಪಕ್ ಚಾಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications