ಟೀಂ ಇಂಡಿಯಾದಲ್ಲಿ ಇನ್ನುಮುಂದೆ ಈ ಆಟಗಾರನಿಗೆ ಅವಕಾಶ ಸಿಗೋದು ಅನುಮಾನ!

ಭಾರತದ ಅನುಭವಿ ಬ್ಯಾಟರ್ ಶಿಖರ್ ಧವನ್ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ನಾಯಕರಾಗಿದ್ದರೂ, ಅವರು ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಆದರೂ, ಅವರನ್ನು ಬಾಂಗ್ಲಾದೇಶದ ಸರಣಿಗೆ ಆಯ್ಕೆ ಮಾಡಲಾಗಿತ್ತು.
ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಕೂಡ ಶಿಖರ್ ಧವನ್ ವಿಫಲವಾಗುವ ಮೂಲಕ ನಿರಾಸೆ ಮೂಡಿಸಿದರು. ಸರಣಿಯ ಕೊನೆಯ ಪಂದ್ಯದಲ್ಲಿ ಶಿಖರ್ ಧವನ್ 8 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟಾದರು. ಇದು ಸರಣಿಯಲ್ಲಿ ಎರಡನೇ ಬಾರಿಗೆ ಆಫ್ ಸ್ಪಿನ್ನರ್ ಮೆಹಿದಿ ಹಸನ್ ಬೌಲಿಂಗ್‌ನಲ್ಲಿ ಔಟಾದರು.
ಸರಣಿಯ ಮೂರು ಪಂದ್ಯಗಳಿಂದ ಶಿಖರ್ ಧವನ್ 35 ಎಸೆತಗಳಲ್ಲಿ 18 ರನ್ ಗಳಿಸಿದರು. ಮೂರು ಪಂದ್ಯಗಳಲ್ಲಿ ಅವರು ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾದರು. ಶಿಖರ್ ಧವನ್ ಸತತ ವೈಫಲ್ಯ ಅನುಭವಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಅವರು ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ.
ಯುವ ಕ್ರಿಕೆಟಿಗರು ಒಂದೆಡೆ ಉತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆದಾರರ ಗಮನ ಸೆಳೆಯುತ್ತಿದ್ದು, ಶಿಖರ್ ಧವನ್‌ಗೆ ಪೈಪೋಟಿ ನೀಡುತ್ತಿದ್ದಾರೆ. ಧವನ್‌ಗೆ ಪೈಪೋಟಿ ನೀಡುತ್ತಿರುವ ಪ್ರಮುಖ ಕ್ರಿಕೆಟಿಗರು ಇವರು.

ಉತ್ತಮ ಪ್ರದರ್ಶನ ನೀಡುತ್ತಿರುವ ಇಶಾನ್
ಬಾಂಗ್ಲಾದೇಶದ ವಿರುದ್ಧದ ಸರಣಿಯ 3ನೇ ಪಂದ್ಯದಲ್ಲಿ ವೇಗದ ದ್ವಿಶತಕ ಬಾರಿಸುವ ಮೂಲಕ ಇಶಾನ್ ಕಿಶನ್ ದಾಖಲೆ ನಿರ್ಮಿಸಿದ್ದಾರೆ. ಕೇವಲ 126 ಎಸೆತಗಳಲ್ಲಿ ಅವರು ದ್ವಿಶತಕ ಸಿಡಿಸಿದರು. ರೋಹಿತ್ ಶರ್ಮಾ ಗಾಯಗೊಂಡಿದ್ದರಿಂದ, ತಂಡದಲ್ಲಿ ಸ್ಥಾನ ಪಡೆದ ಇಶಾನ್ ಕಿಶನ್ ಆಕ್ರಮಣಕಾರಿ ಆಟದ ಮೂಲಕ ಬಾಂಗ್ಲಾದೇಶದ ಬೌಲಿಂಗ್ ಅನ್ನು ಧೂಳೀಪಟ ಮಾಡಿದರು.
ಎಡಗೈ ಬ್ಯಾಟರ್ ಆಗಿರುವ ಇಶಾನ್ ಕಿಶನ್, ಉತ್ತಮ ರನ್ ಗಳಿಸುವ ಸಾಮರ್ಥ್ಯ ಹೊಂದಿರುವ ಆಟಗಾರ. ನಾಯಕ ರೋಹಿತ್ ಶರ್ಮಾ ಬಲಗೈ ಬ್ಯಾಟರ್ ಆಗಿದ್ದು, ಇಶಾನ್ ಕಿಶನ್ ಎಡಗೈ ಬ್ಯಾಟರ್ ಆಗಿರುವುದರಿಂದ, ಧವನ್ ಬದಲಿಗೆ ಮುಂದಿನ ದಿನಗಳಲ್ಲಿ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದರೂ ಅಚ್ಚರಿ ಪಡಬೇಕಿಲ್ಲ.
72ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿ ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಧವನ್ ಬದಲಿಗೆ ಶುಭಮನ್ ಗಿಲ್
ಶುಭಮನ್ ಗಿಲ್ ಕೂಡ ಆರಂಭಿಕ ಸ್ಥಾನಕ್ಕೆ ಭಾರಿ ಪೈಪೋಟಿ ನೀಡುತ್ತಿದ್ದಾರೆ. ತಮಗೆ ದೊರೆತ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದರು. ವೆಸ್ಟ್ ಇಂಡೀಸ್, ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ವಿರುದ್ಧವೂ ಸ್ಥಿರ ಪ್ರದರ್ಶನ ನೀಡಿದರು.
ಈವರೆಗೂ 15 ಏಕದಿನ ಪಂದ್ಯಗಳನ್ನು ಆಡಿರುವ ಶುಭಮನ್ ಗಿಲ್, 57.25 ಸರಾಸರಿಮತ್ತು 99.13 ಸ್ಟ್ರೈಕ್‌ರೇಟ್‌ನಲ್ಲಿ 687 ರನ್ ಗಳಿಸಿದ್ದಾರೆ. ಆರಂಭಿಕ ಆಟಗಾರನಿಗೆ ಯಶಸ್ವಿಯಾಗಿರುವ ಶುಭಮನ್ ಗಿಲ್, ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ಶಿಖರ್ ಧವನ್‌ಗೆ ಬದಲಿಯಾಗಿ ಗಿಲ್ ಕೂಡ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಬದಲಾವಣೆ
ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿ ನಂತರ ಭಾರತ ತನ್ನ ಮುಂದಿನ ಏಕದಿನ ಸರಣಿಯನ್ನು ಶ್ರೀಲಂಕಾ ವಿರುದ್ಧ ತವರಿನಲ್ಲಿ ಆಡಲಿದೆ. ಡಿಸೆಂಬರ್ ತಿಂಗಳ 15 ನೇ ತಾರೀಖಿನ ವೇಳೆಗೆ ಬಿಸಿಸಿಐ ಹೊಸ ಆಯ್ಕೆ ಸಮಿತಿ ಅಸ್ತಿತ್ವಕ್ಕೆ ಬರಲಿದ್ದು, ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಿದ್ದಾರೆ.
ಶಿಖರ್ ಧವನ್ ಅನುಭವಿ ಬ್ಯಾಟರ್ ಆಗಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸುತ್ತದೆ ಎನ್ನುವ ಸಾಧ್ಯತೆ ಇದ್ದರೂ, 2023ರ ಏಕದಿನ ವಿಶ್ವಕಪ್ ತಯಾರಿಗಾಗಿ ತಂಡವನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಒಂದು ವೇಳೆ ಶ್ರೀಲಂಕಾ ವಿರುದ್ಧದ ಸರಣಿಗೆ ಧವನ್ ಆಯ್ಕೆಯಾದರೆ, ಅದು ಅವರಿಗೆ ಸಿಗುವ ಕೊನೆಯ ಅವಕಾಶ ಆಗಿರುತ್ತದೆ ಎನ್ನುವುದಂತೂ ಸ್ಪಷ್ಟ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications