Shikhar Dhawan: ಹೊಸ ಗರ್ಲ್ ಫ್ರೆಂಡ್ ರಿವೀಲ್ ಮಾಡಿದ ಶಿಖರ್ ಧವನ್
ಟೀಮ್ ಇಂಡಿಯಾದ ಮಾಜಿ ಅನುಭವಿ ಬ್ಯಾಟರ್ ಶಿಖರ್ ಧವನ್ ಎಲ್ಲಾ ಮಾದರಿ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು, ಆದರೆ ಅವರು ಇನ್ನೂ ಸುದ್ದಿಗಳಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚೆಗಳು ಜೋರಾಗಿವೆ. ಅವರು ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ವರದಿಗಳಾಗಿವೆ.
ಐಸಿಸಿ 2025ರ ಚಾಂಪಿಯನ್ ಟ್ರೋಫಿ ಟೂರ್ನಿ ವೇಳೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಧವನ್ ಓರ್ವ ಮಹಿಳೆ ಜೊತೆ ಕಾಣಿಸಿಕೊಂಡಿದ್ದರು. ಈ ಇಬ್ಬರೂ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದ್ದರು.

ಧವನ್ ಜೊತೆಗಿದ್ದ ಮಹಿಳೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದಾದ ಬಳಿಕ ಆಕೆ ಐರ್ಲೆಂಡ್‌ನ ಸೋಫಿ ಶೈನ್ ಎಂದು ತಿಳಿದುಬಂದಿತು. ಈಗ ಧವನ್ ತಮ್ಮ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ಶಿಖರ್ ಧವನ್ ಮತ್ತು ಸೋಫಿ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಬ್ಬರೂ ಪರಸ್ಪರ ಮಾತನಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿತು. ಈಗ, ಈ ಚರ್ಚೆಗಳ ನಡುವೆ, ಧವನ್ ಅವರ ತಮಾಷೆಯ ರೀಲ್ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ.
ಶಿಖರ್ ಧವನ್ ಮತ್ತು ಸೋಫಿ ಈ ರೀಲ್ ಅನ್ನು ಒಟ್ಟಿಗೆ ಪೋಸ್ಟ್ ಮಾಡಿದ್ದಾರೆ. ಇಬ್ಬರೂ ರೀಲ್‌ನಲ್ಲಿ ನಟಿಸಿದ್ದಾರೆ. ಸೋಫಿ ಧವನ್‌ಗೆ, "ಗುರೂಜಿ, ನನಗೆ ಇಲ್ಲಿಂದ ಹೋಗಲು ಮನಸ್ಸಿಲ್ಲ, ನಾನು ನಿಮ್ಮೊಂದಿಗೆ ಇರಲು ಬಯಸುತ್ತೇನೆ' ಎಂದು ಹೇಳಿದ್ದಾರೆ. ನಂತರ ಶಿಖರ್ ಧವನ್, "ತಾಯಿ ಮನೆಯಲ್ಲಿ ಕೆಲಸ ಮಾಡುತ್ತಿರಬೇಕು' ಎಂದು ಹೇಳುತ್ತಾರೆ. ಈ ವಿಡಿಯೋ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.
ಮಾಜಿ ಕಿಕ್ ಬಾಕ್ಸರ್ ಆಯೇಷಾ ಮುಖರ್ಜಿ ಅವರೊಂದಿಗೆ ಶಿಖರ್ ಧವನ್ 2008 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಾದ ನಾಲ್ಕು ವರ್ಷಗಳ ಬಳಿಕ ಅಂದರೆ 2012 ರಲ್ಲಿ, ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆಯೇಷಾ ಮುಖರ್ಜಿ ವಯಸ್ಸಿನಲ್ಲಿ ಧವನ್ ಗಿಂತ 12 ವರ್ಷ ದೊಡ್ಡವರು. ಈ ಇಬ್ಬರನ್ನೂ ಪರಸ್ಪರ ಪರಿಚಯಿಸಿದ್ದು, ಬೇರೆ ಯಾರು ಅಲ್ಲ, ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್. ಆದರೆ, ಆಯೇಷಾ ಮುಖರ್ಜಿ ಮತ್ತು ಶಿಖರ್ ಧವನ್ ನಡುವಿನ ದಾಂಪತ್ಯ ಜೀವನ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರೂ ಅಕ್ಟೋಬರ್ 5, 2023 ರಂದು ವಿಚ್ಛೇದನ ಪಡೆದು ಪತ್ಯೇಕವಾಗಿ ವಾಸ ಮಾಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications