ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಶಿಖರ್ ಧವನ್ ನಾಯಕ

ನವದೆಹಲಿ: ಭಾರತದ ಶ್ರೀಲಂಕಾ ಪ್ರವಾಸಕ್ಕೆ ತಂಡ ಪ್ರಕಟವಾಗಿದೆ. ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ತಂಡದ ಉಪನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗಳಿಗಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಶುಕ್ರವಾರ (ಜೂನ್ 10) ತಂಡ ಪ್ರಕಟಿಸಿದೆ.
ಭಾರತ-ಶ್ರೀಲಂಕಾ ಸರಣಿ ಮೂರು ಏಕದಿನ ಪಂದ್ಯಗಳು ಮತ್ತು ಮೂರು ಟಿ20ಐ ಪಂದ್ಯಗಳನ್ನು ಒಳಗೊಂಡಿರಲಿದೆ. ಜುಲೈ 13ಕ್ಕೆ ಪ್ರಾರಂಭಗೊಳ್ಳುವ ಪ್ರವಾಸ ಜುಲೈ 25ಕ್ಕೆ ಕೊನೆಗೊಳ್ಳಲಿದೆ. ಎಲ್ಲಾ ಪಂದ್ಯಗಳು ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ.

ರಾಹುಲ್ ದ್ರಾವಿಡ್ ಕೋಚ್
ಯುವ ಉದಯೋನ್ಮುಖ ಆಟಗಾರರಾದ ಪೃಥ್ವಿ ಶಾ, ಸಂಜು ಸ್ಯಾಮ್ಸನ್ ನಂತ ಪ್ರತಿಭಾನ್ವಿತರು ಬೆಳೆಯಲು ಪ್ರಮುಖ ಕಾರಣರಾದ ಟೀಮ್ ಇಂಡಿಯಾದ ಮಾಜಿ ನಾಯಕ, ಕನ್ನಡಿಗ, ಈಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ತಂಡಕ್ಕೆ ಕೋಚ್ ಆಗಿರಲಿದ್ದಾರೆ.

ವಿಕೆಟ್ ಕೀಪರ್‌ಗಳು
ಯುವ ಬ್ಯಾಟ್ಸ್‌ಮನ್‌ಗಳಾದ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಶ್ರೀಲಂಕಾ ಪ್ರವಾಸ ತಂಡದಲ್ಲಿ ವಿಕೆಟ್ ಕೀಪರ್‌ಗಳಾಗಿ ಹೆಸರಿಸಲ್ಪಟ್ಟಿದ್ದಾರೆ. ದೇವದತ್ ಪಡಿಕ್ಕಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮನೀಶ್ ಪಾಂಡೆ ಮೊದಲಾದವರೆಲ್ಲ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕೆ ಭಾರತೀಯ ತಂಡ
ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್) ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕರಿಯಾ.
ನೆಟ್ ಬೌಲರ್‌ಗಳು: ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್‌ದೀಪ್ ಸಿಂಗ್, ಸಾಯಿ ಕಿಶೋರ್, ಸಿಮಾರ್ಜೀತ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications