ವೆಸ್ಟ್ ಇಂಡೀಸ್ ತಂಡದ ಆಟಗಾರರಿಗೆ ಭಾರತದಲ್ಲಿ ಆಡಿದ ಅನುಭವ ಹೆಚ್ಚಿದೆ. ಇಲ್ಲಿ ಈ ದೇಶದ ಆಟಗಾರರು ಐಪಿಎಲ್‌ನಲ್ಲೂ ಭಾಗವಹಿಸುತ್ತಾರೆ. ಈ ತಂಡದ ಪರ ಆಡುವ ಸ್ಫೋಟಕ ಬ್ಯಾಟರ್ ಶಿಮ್ರೊನ್ ಹೆಟ್ಮೆಯರ್ ದೊಡ್ಡ ದಾಖಲೆ ಬರೆದಿದ್ದಾರೆ. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ಶಿಮ್ರೋನ್ ಹೆಟ್ಮೈಯರ್ ತಮ್ಮದೇ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಸೂಪರ್ 8 ಹಂತದ ಪಂದ್ಯದಲ್ಲಿ ಜಿಂಬಾಬ್ವೆ ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಈ ವೇಳೆ ವಿಂಡೀಸ್ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್ ಮೂರನೇ ಓವರ್‌ನಲ್ಲಿ ಪೆವಿಲಿಯನ್‌ಗೆ ಮರಳಿದರು. ಇವರು ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಶಿಮ್ರೋನ್ ಹೆಟ್ಮೆಯರ್ ಅಬ್ಬರದ ಬ್ಯಾಟಿಂಗ್ ನಡೆಸಿದರು. ಇವರು ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್‌ನಲ್ಲಿ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇವರು ತಮ್ಮ ಅರ್ಧಶತಕದಲ್ಲಿ 4 ಬೌಂಡರಿ, 5 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಈ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ, ಶಿಮ್ರೋನ್ ಹೆಟ್ಮೈಯರ್ 2026 ರ ಟಿ20 ವಿಶ್ವಕಪ್‌ನಲ್ಲಿ ವೇಗದ ಅರ್ಧಶತಕದ ದಾಖಲೆಯನ್ನು ಸರಿಗಟ್ಟಿದರು. ಇದಕ್ಕೂ ಮೊದಲು ಈ ಸಾಧನೆಯನ್ನು ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಮಾಡಿದ್ದರು. ಇವರು 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಓಮನ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ನಾಯಕ ಶನಕ ಕೂಡ 19 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಭಾರತದ ಆರಂಭಿಕ ಆಟಗಾರ ಇಶಾನ್ ಕಿಶನ್ ನಮೀಬಿಯಾ ವಿರುದ್ಧ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.
ಶಿಮ್ರೋನ್ ಹೆಟ್ಮೆಯರ್ ವೆಸ್ಟ್ ಇಂಡೀಸ್ ಪರ ಟಿ20 ವಿಶ್ವಕಪ್ ಇತಿಹಾಸದಲ್ಲಿ ಶಿಮ್ರೋನ್ ಹೆಟ್ಮೈಯರ್ ಅತಿ ವೇಗದ ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಇದೇ ವಿಶ್ವಕಪ್‌ನಲ್ಲಿ ಹೆಟ್ಮೆಯರ್ ಲೀಗ್ ಹಂತದ ಪಂದ್ಯದಲ್ಲಿ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಕ್ರಿಸ್ ಗೇಲ್ 2009ರ ಟಿ20 ವಿಶ್ವಕಪ್‌ನಲ್ಲಿ 23 ಎಸೆತಗಳಲ್ಲಿ 50 ರನ್‌ಗಳನ್ನು ಬಾರಿಸಿದ್ದರು. ಇನ್ನು ಭರವಸೆಯ ಬ್ಯಾಟರ್ ಶಾಯ್ ಹೋಪ್ 2024ರಲ್ಲಿ ಯುಎಸ್‌ಎ ವಿರುದ್ಧ 26 ಎಸೆತಗಳಲ್ಲಿ 50 ರನ್ ಗಳಿಸಿದರು ಮತ್ತು ಕ್ರಿಸ್ ಗೇಲ್ 2012 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 26 ಎಸೆತಗಳಲ್ಲಿ 50 ರನ್ ಗಳಿಸಿದರು.
ಸೋಮವಾರ ನಡೆದ ಸೂಪರ್ 8 ಹಂತದ ಪಂದ್ಯದಲ್ಲಿ ಶಿಮ್ರೋನ್ ಹೆಟ್ಮೆಯರ್ 34 ಎಸೆತಗಳಲ್ಲಿ 85 ರನ್ ಸಿಡಿಸಿದರು. ಇದರಲ್ಲಿ 7 ಬೌಂಡರಿ, 7 ಸಿಕ್ಸರ್‌ಗಳು ಸೇರಿವೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 250 ಆಗಿತ್ತು. ಇವರ ಅಬ್ಬರದ ಆಟದ ನೆರವಿನಿಂದ ವಿಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆ ಹಾಕಿತು.