Shivam Dube 3 ಬಾರಿ ರನೌಟ್ ಆಗಿದ್ದು ಭಾರತ ಟಿ20 ವಿಶ್ವಕಪ್ ಗೆಲ್ಲುವುದರ ಸಂಕೇತವೆ? ಇಲ್ಲಿದೆ ಲೆಕ್ಕಾಚಾರ
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳು ಮುಂಬೈನ ವಾಂಖೆಡೆ ಅಂಗಳದಲ್ಲಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಭರ್ಜರಿ ಆಟದ ಪ್ರದರ್ಶನ ನೀಡಿದ ಟೀಮ್ ಇಂಡಿಯಾ 7 ರನ್‌ಗಳಿಂದ ಜಯ ಸಾಧಿಸಿದೆ. ಈ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಸೆಮಿಫೈನಲ್ ಪಂದ್ಯದಲ್ಲಿ 499 ರನ್‌ಗಳನ್ನು ದಾಖಲಾಗಿದೆ. ವಾಂಖೆಡೆ ಮೈದಾನದಲ್ಲಿ ಬ್ಯಾಟರ್‌ಗಳು ಆರ್ಭಟ ನಡೆಸಿದರು. ಭಾರತ ತಂಡದ ಬ್ಯಾಟರ್‌ಗಳು ಸಹ ಈ ಪಂದ್ಯದಲ್ಲಿ ಸೊಗಸಾದ ಪ್ರದರ್ಶನ ನೀಡಿದರು.
ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್ ಸಹಾಯದಿಂದ 89 ರನ್ ಸಿಡಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಶಿವಂ ದುಬೆ ಸಹ ಕ್ಲಾಸಿಕ್ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ಇವರು 25 ಎಸೆತಗಳಲ್ಲಿ 1 ಬೌಂಡರಿ, 4 ಸಿಕ್ಸರ್ ನೆರವಿನಿಂದ 43 ರನ್ ಬಾರಿಸಿ ರನ್ ಔಟ್ ಆದರು. ಟೀಮ್ ಇಂಡಿಯಾ ಬ್ಯಾಟರ್ ಶಿವಂ ದುಬೆ ರನ್‌ಔಟ್ ಆಗಿದ್ದು, ಟಿ20 ವಿಶ್ವಕಪ್ ಗೆಲ್ಲುವುದರ ಸಂಕೇತವೆ? ಎಂಬ ಲೆಕ್ಕಾಚಾರ ಶುರುವಾಗಿದೆ ಇದಕ್ಕೆ ಕಾರಣ ಏನು? ಇಲ್ಲಿದೆ ವರದಿ.

ಏನಿದು ಲೆಕ್ಕಾಚಾರ?
ಶಿವಂ ದುಬೆ ಈ ಟೂರ್ನಿಯಲ್ಲಿ ಮೂರನೇ ಬಾರಿಗೆ ರನೌಟ್ ಆದರು. ನಮೀಬಿಯಾ ವಿರುದ್ಧದ ಪಂದ್ಯದಲ್ಲೂ ಶಿವಂ ದುಬೆ 23 ರನ್ ಬಾರಿಸಿ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧವೂ ರನೌಟ್ ಆಗಿದ್ದರು. ಈಗ ಇಂಗ್ಲೆಂಡ್ ವಿರುದ್ಧವೂ ರನೌಟ್‌ಗೆ ಬಲಿಯಾದರು.
2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾಗ, ಧೋನಿ ಸಹ ಟೂರ್ನಿಯಲ್ಲಿ ಮೂರು ಬಾರಿ ಆಲೌಟ್ ಆಗಿದ್ದರು.
ತಮ್ಮ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿರುವ ಶಿವಂ ದುಬೆ, ಈ ಬಾರಿ ಮೂರು ಬಾರಿ ರನೌಟ್ ಆಗಿದ್ದರಿಂದ, ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ ಗೆಲ್ಲಬಹುದು ಎಂಬ ಲೆಕ್ಕಾಚಾರಕ್ಕೆ ಕಾರಣವಾಗಿದೆ.
ಭಾನುವಾರ ಫೈನಲ್
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾನುವಾರ ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಯಾರ ಪಾಲಾಗಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಆರಂಭವಾಗಿದ್ದು, ಪಂದ್ಯ ರೋಚಕತೆ ಹೆಚ್ಚಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications