Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shivam Dube: ವಿರಾಟ್‌, ರೋಹಿತ್‌ ವಿಶೇಷ ಕ್ಲಬ್‌ ಸೇರುವ ಕನಸಿನಲ್ಲಿ ಶಿವಂ ದುಬೆ

ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿರುವ ಟೀಮ್ ಇಂಡಿಯಾದ ಯಂಗ್ ಪ್ಲೇಯರ್ ಶಿವಂ ದುಬೆ ಭರ್ಜರಿ ಫಾರ್ಮ್‌ ನಲ್ಲಿದ್ದಾರೆ. ಬೆಂಗಳೂರಿನ ಪಂದ್ಯದಲ್ಲಿ ಶಿವಂ ದುಬೆ ಇತಿಹಾಸದ ಪುಟ ಸೇರುವ ಅವಕಾಶವನ್ನು ಹೊಂದಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಮೊದಲೆರಡು ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾದ ಯಂಗ್ ಪ್ಲೇಯರ್‌, ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಶಿವಂ ದುಬೆ ಟೀಂ ಇಂಡಿಯಾ ಗೆಲುವಿನ ಹೀರೋ ಆಗಿದ್ದಾರೆ.

Shivam Dube close to creating history, big chance to join this special club of Virat-Rohit

ಬ್ಯಾಟ್ ಜೊತೆಗೆ ಬೌಲಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿರುವ ಅವರು ಸ್ಟಾರ್ ಆಗಿ ಮಿಂಚಿದ್ದಾರೆ. ಇದೀಗ ಬುಧವಾರ ನಡೆಯುವ ಪಂದ್ಯದಲ್ಲಿ ಶಿವಂ ದುಬೆ ವಿಶೇಷ ಕ್ಲಬ್‌ನಲ್ಲಿ ಸ್ಥಾನ ಪಡೆಯುವ ಅವಕಾಶ ಹೊಂದಿದ್ದಾರೆ. ಈ ಕ್ಲಬ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಅನುಭವಿ ಆಟಗಾರರು ಇದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಶಿವಂ ದುಬೆ ಅರ್ಧಶತಕಗಳನ್ನು ಬಾರಿಸಿದ್ದಾರೆ. ಸರಣಿಯ ಕೊನೆಯ ಪಂದ್ಯದಲ್ಲೂ ಅವರು ಈ ಸಾಧನೆ ಮಾಡಿದರೆ, ಸತತ ಮೂರು ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಭಾರತ ಪರ ಟಿ20ಯಲ್ಲಿ ಸತತ 3 ಅರ್ಧಶತಕ ಸಿಡಿಸಿದ ಆಟಗಾರರ ಪಟ್ಟಿಗೆ ಸೇರಲಿದ್ದಾರೆ.

ಭಾರತದ ಪರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಮಾತ್ರ ಸತತ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದಾರೆ. ವಿರಾಟ್ ಮೂರು ಬಾರಿ ಸತತವಾಗಿ ಮೂರು ಟಿ20 ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

Shivam Dube close to creating history, big chance to join this special club of Virat-Rohit

ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಶಿವಂ ದುಬೆ 2 ಓವರ್ ಬೌಲ್ ಮಾಡಿ ಕೇವಲ 9 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಇದಾದ ಬಳಿಕ ಬ್ಯಾಟ್‌ನಿಂದ ಉತ್ತಮ ಇನ್ನಿಂಗ್ಸ್‌ ಕಟ್ಟಿದ್ದರು. ಅವರು 40 ಎಸೆತಗಳಲ್ಲಿ ಅಜೇಯ 60 ರನ್ ಗಳಿಸಿದ್ದರು.

ಆದರೆ, ಎರಡನೇ ಟಿ20 ಪಂದ್ಯದಲ್ಲಿ ಶಿವಂ ದುಬೆ 3 ಓವರ್‌ಗಳಲ್ಲಿ 36 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಇದಾದ ನಂತರ ಅವರು 32 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಕಟ್ಟಿದ್ದರು. ಮೂರನೇ ಪಂದ್ಯದಲ್ಲೂ ಸ್ಥಿರ ಪ್ರದರ್ಶನ ನೀಡಿ ವಿಶೇಷ ಕ್ಲಬ್‌ ಸೇರುವ ಕನಸಿನಲ್ಲಿದ್ದಾರೆ ಶಿವಂ ದುಬೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸತತ ಮೂರು ಅರ್ಧಶತಕ ಗಳಿಸಿದ ಭಾರತೀಯ

  • ವಿರಾಟ್ ಕೊಹ್ಲಿ - 3 ಬಾರಿ
  • ಕೆಎಲ್ ರಾಹುಲ್ - 2 ಬಾರಿ
  • ಸೂರ್ಯಕುಮಾರ್ ಯಾದವ್ - 2 ಬಾರಿ
  • ರೋಹಿತ್ ಶರ್ಮಾ - 1 ಬಾರಿ
  • ಶ್ರೇಯಸ್ ಅಯ್ಯರ್ - 1 ಬಾರಿ

Story first published: Tuesday, January 16, 2024, 18:08 [IST]
Other articles published on Jan 16, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+