ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಇತಿಹಾಸ ನಿರ್ಮಾಣ
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಶಿವಂ ದುಬೆ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಬ್ಯಾಟ್ ಮಾಡಿದ ಶಿವಂ ಆರ್ಭಟಿಸಿದರು. ನೆರೆದ ಅಭಿಮಾನಿಗಳಿಗೆ ರಸದೌತಣ ನೀಡಿದ ಶಿವಂ ದುಬೆ ಎಲ್ಲರ ಗಮನ ಸೆಳೆದರು. ಟಿ20 ವಿಶ್ವಕಪ್‌ಗೂ ಮುನ್ನ ಶಿವಂ ದುಬೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೋರಿಸಿದರು.
ನ್ಯೂಜಿಲೆಂಡ್ ಬೌಲರ್‌ಗಳ ಸವಾಲನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಶಿವಂ ದುಬೆ, ಟೀಮ್ ಇಂಡಿಯಾದ ಪರ ಗೆಲುವಿನ ಆಸೆಯನ್ನು ಚಿಗುರಿಸಿದರು. ಇವರು ಕ್ಲಾಸ್ ಬ್ಯಾಟಿಂಗ್ ನಡೆಸಿ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ವೇಗದ ಅರ್ಧಶತಕ ಬಾರಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆ ಶಿವಂ ದುಬೆ ಅವರದ್ದಾಯಿತು.

ಭಾರತ ನಾಲ್ಕನೇ ಟಿ20 ಪಂದ್ಯದಲ್ಲಿ ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಿತು. ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಒಬ್ಬ ಬ್ಯಾಟರ್ ಕಡಿಮೆಯಿಂದ ಕಣಕ್ಕೆ ಇಳಿಯಿತು. ಈ ವೇಳೆ ಬ್ಯಾಟರ್‌ಗಳ ಮೇಲೆ ಒತ್ತಡ ಬಿದ್ದಿತು. ಈ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ಬ್ಯಾಟರ್‌ಗಳು ವಿಫಲರಾದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಶಿವಂ ದುಬೆ ತಮ್ಮ ಕ್ಲಾಸಿಕ್ ಆಟವಾಡಿದರು. ಆದರೂ ಸಹ ಭಾರತಕ್ಕೆ ಗೆಲುವಿನ ಮಾಲೆ ತೊಡಿಸಲಿಲ್ಲ.
ಶಿವಂ ದುಬೆ ವೇಗದ ಅರ್ಧಶತಕ
ಟೀಮ್ ಇಂಡಿಯಾದ ಭರವಸೆಯ ಆಲ್‌ರೌಂಡರ್ ಶಿವಂ ದುಬೆ ಆರ್ಭಟಿಸಿದರು. ಇವರು 15 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶಿವಂ ದುಬೆ ವೇಗದ ಅರ್ಧಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. ಇವರು ಬುಧವಾರ ನಡೆದ ಪಂದ್ಯದಲ್ಲಿ ತಮ್ಮ ನೈಜ ಆಟವನ್ನು ಆಡಿ ರನ್ ಮಹಲ್ ಕಟ್ಟಿದರು. ಅಲ್ಲದೆ ಟಾಪ್ ಆರ್ಡರ್ ಬ್ಯಾಟರ್‌ಗಳಿಂದ ದೊಡ್ಡ ಆಟ ಬಾರದೆ ನಿರಾಸೆಯಲ್ಲಿದ್ದ ಅಭಿಮಾನಿಗಳನ್ನು ರಂಜಿಸಿದರು. ಶಿವಂ ದುಬೆ ಅಂತಿಮವಾಗಿ 23 ಎಸೆತಗಳಲ್ಲಿ 3 ಬೌಂಡರಿ, 7 ಸಿಕ್ಸರ್ ಸಹಾಯದಿಂದ 65 ರನ್ ಬಾರಿಸಿ ರನ್‌ಔಟ್ ಆದರು.
ಯುವಿಗೆ ಅಗ್ರ ಸ್ಥಾನ
ಟೀಮ್ ಇಂಡಿಯಾದ ಪರ ಟಿ20 ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಹೆಗ್ಗಳಿಕೆ ಯುವರಾಜ್ ಸಿಂಗ್ ಅವರದ್ದಾಗಿದೆ. ಯುವಿ ಡರ್ಬನ್‌ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮೊದಲ ಸ್ಥಾನದಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಇದ್ದು, ಇವರು 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಈಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಶಿವಂ ದುಬೆ ಇದ್ದಾರೆ. ವಿಶೇಷ ಅಂದರೆ ಈ ಪಟ್ಟಿಯಲ್ಲಿ ಇರುವ ಮೂರು ಬ್ಯಾಟರ್‌ಗಳ ಎಡಗೈ ಆಟಗಾರರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications