2 ವರ್ಷದ ಬಳಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದ ಸ್ಟಾರ್ ಆಲ್‌ರೌಂಡರ್
ಟೀಮ್ ಇಂಡಿಯಾ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ವೇಳೆ ಭಾರತ ತಂಡ ಮೊದಲು ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಉಭಯ ತಂಡಗಳು ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿಗಾಗಿ ಈಗಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ವೇಳೆ ತಂಡದಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಲಾಗಿದೆ.
ಇಂಗ್ಲೆಂಡ್ ಪ್ರವಾಸದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರ ಬದಲಿಗೆ, ಆಲ್‌ರೌಂಡರ್ ಶಿವಂ ದುಬೆ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಶಿವಂ ದುಬೆ ಅವರು ಸದ್ಯ ಇಂಗ್ಲೆಂಡ್ ವಿರುದ್ಧದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಇನ್ನು ಗಾಯದಿಂದ ಚೇತರಿಸಿಕೊಳ್ಳದ ಕಾರಣ ಇವರನ್ನು ಕೈ ಬಿಡಲಾಗಿದೆ.

ಚೆನ್ನೈನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದಿದ್ದ ಮೂರನೇ ಏಕದಿನ ಪಂದ್ಯದ ಸಮಯದಲ್ಲಿ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಕ್ಕೆ ತುತ್ತಾಗಿದ್ದರು. ಗಾಯದಿಂದ ಗುಣಮುಖರಾಗದ ಇವರನ್ನು ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಜಿಂಬಾಬ್ವೆ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇವರ ಬದಲಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತೀಯ ತಂಡದಲ್ಲಿ ಶಿವಂ ದುಬೆ ಅವರನ್ನು ಆಯ್ಕೆ ಮಾಡಿದೆ ಎಂದು ದೇವ್ಜಿತ್ ಸೈಕಿಯಾ ಹೇಳಿದರು.
ಶಿವಂ ದುಬೆ ಸಾಧನೆ
ಟೀಮ್ ಇಂಡಿಯಾ ಟಿ20 ತಂಡದ ಖಾಯಂ ಸದಸ್ಯರಾಗಿರುವ ಶಿವಂ ದುಬೆ ಕೇವಲ 4 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಇವರು 43 ರನ್ ಬಾರಿಸಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ. ಇವರು 68 ಟಿ20 ಪಂದ್ಯಗಳಲ್ಲಿ ಆರು ಅರ್ಧಶತಕಗಳೊಂದಿಗೆ 1,083 ರನ್ ಗಳಿಸಿದ್ದಾರೆ ಮತ್ತು 34 ವಿಕೆಟ್‌ಗಳನ್ನು ಪಡೆದಿದ್ದಾರೆ. ದುಬೆ ಅವರ ಕೊನೆಯ ಏಕದಿನ ಪಂದ್ಯವನ್ನು ಆಗಸ್ಟ್ 2024 ರಲ್ಲಿ ಶ್ರೀಲಂಕಾ ವಿರುದ್ಧ ಆಡಿದ್ದರು.

ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ, ಎರಡನೇ ಪಂದ್ಯ ಜುಲೈ 16 ರಂದು ಕಾರ್ಡಿಫ್‌ನಲ್ಲಿ, ಮೂರನೇ ಪಂದ್ಯ ಜುಲೈ 19 ರಂದು ಲಂಡನ್‌ನಲ್ಲಿ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications