ಶ್ರೇಯಾಂಕ ಪಾಟೀಲ್‌ಗೆ ಗಂಭೀರವಾಗಿ ಗಾಯ; ಸ್ಟ್ರೆಚರ್‌ನಲ್ಲಿ ಮೈದಾನದಿಂದ ಹೊರ ನಡೆದ ಕನ್ನಡತಿ
ಟೀಮ್ ಇಂಡಿಯಾ ಮಹಿಳಾ ತಂಡ ಸದ್ಯ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿದೆ. ಈ ಬಾರಿಯ ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆಯುತ್ತಿದೆ. ಈ ಮೆಗಾ ಇವೆಂಟ್‌ನಲ್ಲಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಆಡಿರುವ ಆಡಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದೆ. ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಮಾಡುವಾಗ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಾಯಕ್ಕೆ ತುತ್ತಾಗಿದ್ದು ಸ್ಟ್ರೆಚರ್‌ನಲ್ಲಿ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ.
ನೆದರ್‌ಲ್ಯಾಂಡ್ ಮಹಿಳಾ ತಂಡದ ವಿರುದ್ಧದ ಪಂದ್ಯದಲ್ಲಿ, ಶ್ರೇಯಾಂಕಾ ಪಾಟೀಲ್ ಅವರನ್ನು ಆರನೇ ಓವರ್ ಬೌಲಿಂಗ್ ಮಾಡಲು ಸೂಚಿಸಲಾಯಿತು. ಮೊದಲ ಎಸೆತದಲ್ಲಿ, ಡಚ್ ಬ್ಯಾಟ್ಸ್‌ಮನ್ ಫೋಬೆ ಮಿಡ್‌ವಿಕೆಟ್ ಕಡೆಗೆ ಶಾಟ್ ಬಾರಿಸಿದರು. ಶ್ರೇಯಾಂಕಾ ಚೆಂಡನ್ನು ಫೀಲ್ಡಿಂಗ್ ಮಾಡಲು ಓಡಿಹೋದರು, ಆದರೆ ಅದನ್ನು ಹಿಡಿಯಲು ಪ್ರಯತ್ನಿಸುವಾಗ, ಅವರು ತಮ್ಮ ಪಾದ ತಿರುಚಿದ್ದರಿಂದ ಸಾಕಷ್ಟು ನೋವು ಅನುಭವಿಸಬೇಕಾಯಿತು.

ಶ್ರೇಯಾಂಕಾ ಪಾಟೀಲ್ ಗಾಯಕ್ಕೆ ತುತ್ತಾಗುತ್ತಿದ್ದಂತೆ ಎದ್ದು ನಿಲ್ಲದಷ್ಟು ಗಾಯ ಕಾಣಿಸಿಕೊಂಡಿತು. ಶ್ರೇಯಾಂಕಾ ಅವರ ಸ್ಥಿತಿಯನ್ನು ಪರಿಗಣಿಸಿ, ಅವರನ್ನು ಸ್ಟ್ರೆಚರ್‌ನಲ್ಲಿ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಶ್ರೇಯಾಂಕಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಬಿಸಿಸಿಐ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದೆ.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಪಾಕಿಸ್ತಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಮೋಘ ಡೈವಿಂಗ್ ಕ್ಯಾಚ್ ಹಿಡಿದು ಗಮನ ಸೆಳೆದಿದ್ದರು.
ಪಂದ್ಯದ ಫಲಿತಾಂಶ
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿ 5 ವಿಕೆಟ್ ನಷ್ಟಕ್ಕೆ 209 ರನ್ ಸೇರಿಸಿತು. ಈ ವೇಳೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಜೋಡಿ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು. ಶಫಾಲಿ 55 ರನ್ ಬಾರಿಸಿದರೆ, ಸ್ಮೃತಿ 74 ರನ್ ಸಿಡಿಸಿದರು. ಗುರಿಯನ್ನು ಬೆನ್ನಟ್ಟಿದ ನೆದರ್‌ಲ್ಯಾಂಡ್ಸ್ 17.3 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಸ್ಪಿನ್ ಬೌಲರ್ ಶ್ರೀ ಚರಣಿ 4, ಆಲ್‌ರೌಂಡರ್ ಶಫಾಲಿ ವರ್ಮಾ 3 ವಿಕೆಟ್ ಕಬಳಿಸಿದರು. ಟೀಮ್ ಇಂಡಿಯಾ ಪಂದ್ಯವನ್ನು 95 ರನ್‌ಗಳಿಂದ ಗೆದ್ದು ಬೀಗಿದೆ. ಟೀಮ್ ಇಂಡಿಯಾ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications