For Quick Alerts
ALLOW NOTIFICATIONS  
For Daily Alerts
 

ಭಾರತ ತಂಡದಲ್ಲಿ ಸ್ಥಾನ ಪಡೆದ ಕನ್ನಡತಿ ಶ್ರೇಯಾಂಕ

ಸದ್ಯ ಭಾರತದಲ್ಲಿ ಮಹಿಳಾ ಪ್ರೀಮಿಯರ್‌ ಲೀಗ್‌ ಪಂದ್ಯಗಳು ನಡೆಯುತ್ತಿವೆ. ಈ ಲೀಗ್‌ನಲ್ಲಿ ದೇಶ ಹಾಗೂ ವಿದೇಶದ ಆಟಗಾರರು ಭಾಗವಹಿಸುತ್ತಿದ್ದಾರೆ. ಈ ಲೀಗ್‌ನಲ್ಲಿ ಆರ್‌ಸಿಬಿ ಸಹ ಸ್ಥಿರ ಪ್ರದರ್ಶನ ನೀಡುತ್ತಿದೆ. ಸ್ಮೃತಿ ಪಡೆಯ ಪರ ಕಣಕ್ಕೆ ಇಳಿಯುವ ಸ್ಪಿನ್ ಬೌಲರ್‌ ಶ್ರೇಯಾಂಕ ಪಾಟೀಲ್ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದು, ಇದರ ಲಾಭವನ್ನು ಅವರು ಪಡೆದಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್ ಆದ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದಲ್ಲಿ ಭಾರತ ತಂಡ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಲಿದೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಹರ್ಮನ್ ಪ್ರೀತ್ ಕೌರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್‌ ಪಡೆ ಆಸ್ಟ್ರೇಲಿಯಾದಲ್ಲಿ ಸರಣಿ ಗೆಲುವಿನ ಕನಸು ಕಾಣುತ್ತಿದೆ.

Shreyanka Patil Recalled to India Squad for Australia Tour After Impressive WPL Performance

ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆದಿದ್ದ ಉಮಾ ಛೆಟ್ರಿ, ಯಸ್ತಿಕಾ ಭಾಟಿಯಾ ಮತ್ತು ಪ್ರತಿಕಾ ರಾವಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರ ಬದಲಿಗೆ ವೈಷ್ಣವಿ ಶರ್ಮಾ, ಜಿ ಕಮಲಿನಿ ಮತ್ತು ಕಾಶ್ವಿ ಗೌತಮ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಈ ಆಟಗಾರ್ತಿಯರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದರೆ.

ಶ್ರೇಯಾಂಕಗೆ ಸ್ಥಾನ

ಟಿ20 ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆರ್‌ಸಿಬಿ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಕನ್ನಡತಿ ಶ್ರೇಯಾಂಕ ಪಾಟೀಲ್‌ ಚುಟುಕು ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡಿದ್ದಾರೆ. ಇವರು ಗಾಯದಿಂದ ಚೇತರಿಸಿಕೊಂಡಿದ್ದು, ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಹರ್ಲಿನ್ ಡಿಯೋಲ್‌ ಬದಲಿಗೆ ಭಾರತಿ ಫುಲ್ಮಾಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫುಲ್ಮಾಲಿ 2019ರಲ್ಲಿ ಭಾರತದ ಪರ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಈಗ ಇವರು ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ.

Shreyanka Patil Recalled to India Squad for Australia Tour After Impressive WPL Performance

ಆಸ್ಟ್ರೇಲಿಯಾ ಪ್ರವಾಸದ ಆರಂಭದಲ್ಲಿ ಟೀಮ್ ಇಂಡಿಯಾದ ಮೊದಲು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಈ ಸರಣಿಯ ಬಳಿಕ ಫೆಬ್ರವರಿ 24 ರಂದು ಏಕದಿನ ಸರಣಿ ಆರಂಭವಾಗಲಿದೆ.

ಭಾರತದ ಟಿ20ಐ ತಂಡ: ಹರ್ಮನ್‌ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ್ ರಾಣಾ, ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ,ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ ಕಮಾಲಿನಿ, ಕಾಶವಿ ಗೌತಮ್, ಅಮನ್‌ಜೋತ್‌ ಕೌರ್,ಜೆಮಿಮಾ ರೊಡ್ರಿಗಸ್‌, ಹರ್ಲಿನ್ ಡಿಯೋಲ್‌, ರೇಣುಕಾ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ ರಾಣಾ,

Story first published: Sunday, January 18, 2026, 10:26 [IST]
Other articles published on Jan 18, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+