IND vs NZ: ನ್ಯೂಜಿಲೆಂಡ್ ಗೆಲುವಿಗೆ 250 ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ
ಟೀಮ್ ಇಂಡಿಯಾದ ಭರವಸೆಯ ಮಿಡ್ಲ್ ಆರ್ಡರ್ ಬ್ಯಾಟರ್ ಶ್ರೇಯಸ್ ಅಯ್ಯರ್ (79 ರನ್) ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾವನ್ನು 249 ರನ್‌ಗಳಿಗೆ ಕಟ್ಟಿ ಹಾಕಿತು.
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ (15), ಶುಭಮನ್ ಗಿಲ್ (2) ರನ್ ಕಲೆ ಹಾಕುವಲ್ಲಿ ವಿಫಲರಾದರು. ಇನ್ನು ತಮ್ಮ ಏಕದಿನ ವೃತ್ತಿ ಜೀವನದ 300ನೇ ಏಕದಿನ ಪಂದ್ಯವನ್ನು ಸ್ಮೃರಣೀಯವಾಗಿಸು ಆಸೆಯನ್ನು ಹೊಂದಿದ್ದ ವಿರಾಟ್ ಕೊಹ್ಲಿ ಆಸೆ ಮಣ್ಣು ಪಾಲಾಯಿತು. ವಿರಾಟ್ 11 ರನ್‌ಗಳಿಗೆ ಔಟ್ ಆದರು.

30 ರನ್‌ಗಳಿಗೆ ಮೂರು ವಿಕೆಟ್ ಕಳೆದು ಕೊಂಡು ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಹಾಗೂ ಅಕ್ಷರ್ ಪಟೇಲ್ ಜೋಡಿ ಆಧಾರವಾಯಿತು. ಈ ಜೋಡಿಯನ್ನು ಕಟ್ಟಿ ಹಾಕಲು ನ್ಯೂಜಿಲೆಂಡ್ ಬ್ಯಾಟರ್‌ಗಳು ಹೆಣಗಾಟ ನಡೆಸಿದರು. ಈ ಜೋಡಿ ಮಿಡ್ಲ್ ಓವರ್‌ನಲ್ಲಿ ವಿಕೆಟ್ ಬೀಳದಂತೆ ಕಾಯ್ದುಕೊಂಡಿತು. ಈ ವೇಳೆ ಈ ಜೋಡಿ 136 ಎಸೆತಗಳಲ್ಲಿ 98 ರನ್ ಸೇರಿಸಿತು. ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಕ್ಷರ್ ಪಟೇಲ್ 42 ರನ್ ಬಾರಿಸಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು.
ಶ್ರೇಯಸ್ ಆಧಾರ
ಐದನೇ ವಿಕೆಟ್‌ಗೆ ಶ್ರೇಯಸ್ ಜೊತೆಗೂಡಿದ ಕೆಎಲ್ ರಾಹುಲ್ ಸಹ ಭರವಸೆಯನ್ನು ಮೂಡಿಸಿದರು. ಇವರು ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನೆರವಾದರು. ಈ ಜೋಡಿ ಐದನೇ ವಿಕೆಟ್‌ಗೆ 42 ಎಸೆತಗಳಲ್ಲಿ 44 ರನ್ ಬಾರಿಸಿತು. ಈ ವೇಳೆ ಕ್ಲಾಸ್ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಶ್ರೇಯಸ್ ಅಯ್ಯರ್ ತಾಳ್ಮೆ ಕಳೆದುಕೊಂಡರು. ಇವರು 98 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 79 ರನ್ ಸಿಡಿಸಿ ಇಲ್ಲದ ಶಾಟ್ ಹೊಡೆಯಲು ಹೋಗಿ ಔಟ್ ಆದರು. ರಾಹುಲ್ 23 ರನ್ ಬಾರಿಸಿದ್ದಾಗ ಪೆವಿಲಿಯನ್ ಸೇರಿದರು.
ರವೀಂದ್ರ ಜಡೇಜಾ (16) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಹಾರ್ದಿಕ್ ಪಾಂಡ್ಯ ಜವಾಬ್ದಾರಿ ಅರಿತು ಬ್ಯಾಟಿಂಗ್ ನಡೆಸಿದರು. 45 ಎಸೆತಗಳನ್ನು ಎದುರಿಸಿದ ಇವರು 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 45 ರನ್ ಸಿಡಿಸಿ ಮ್ಯಾಟ್ ಹೆನ್ರಿಗೆ ವಿಕೆಟ್ ಒಪ್ಪಿಸಿದರು.
ಹೆನ್ರಿ 5 ವಿಕೆಟ್
ನ್ಯೂಜಿಲೆಂಡ್ ತಂಡದ ಸ್ಟಾರ್ ಬೌಲರ್ ಮ್ಯಾಟ್ ಹೆನ್ರಿ ಮ್ಯಾಜಿಕ್ ನಡೆಸಿದರು. ಇವರು 8 ಓವರ್ ಬೌಲಿಂಗ್ ನಡೆಸಿ 42 ರನ್ ನೀಡಿ ಐದು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಉಳಿದಂತೆ ಕೈಲ್ ಜೇಮಿಸನ್, ವಿಲ್ ಓರುಕ್, ಮಿಚೆಲ್ ಸ್ಯಾಂಟ್ನರ್, ರಚಿನ್ ರವೀಂದ್ರ ತಲಾ ಒಂದು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications