Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shreyas Iyer: ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಶ್ರೇಯಸ್‌ ಅಯ್ಯರ್

ಇಂದು ಅಹಮದಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್‌ ನಡುವೆ ಐಪಿಎಲ್‌ ಫೈನಲ್‌ ಫೈಟ್ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ನಿಶ್ಚಿತವಾಗಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಲಿದೆ. 18ನೇ ಆವೃತ್ತಿ ನೂತನ ಚಾಂಪಿಯನ್‌ ಉದಯಕ್ಕೆ ಕಾರಣವಾಗಲಿದೆ. ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳು ಈ ನಿಟ್ಟಿನಲ್ಲಿ ಬೆವರು ಹರಿಸುತ್ತಿವೆ. ಈ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ನಾಯಕ ಅಂಗಳಕ್ಕೆ ಪ್ರವೇಶಿಸುತ್ತಿದ್ದಂತೆ ನವ ಇತಿಹಾಸ ನಿರ್ಮಿಸಲಿದ್ದಾರೆ.

ಪಂಜಾಬ್‌ ಕಿಂಗ್ಸ್ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಐಪಿಎಲ್‌ ಇತಿಹಾಸದಲ್ಲಿ ಯಾವೊಬ್ಬ ನಾಯಕ ಮಾಡದ ಸಾಧನೆಯನ್ನು ಮಾಡಲಿದ್ದಾರೆ. ಐಪಿಎಲ್‌ ಯಶಸ್ವಿ ತಂಡಗಳ ನಾಯಕರಾದ ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಅವರು ಸಹ ಈ ಸಾಧನೆಯನ್ನು ಮಾಡಿಲ್ಲ. ಶ್ರೇಯಸ್‌ ಅಯ್ಯರ್‌ ಮೈದಾನಕ್ಕೆ ಇಳಿಯುತ್ತಿದ್ದಂತೆ ದಾಖಲೆಯನ್ನು ನಿರ್ಮಿಸಲಿದ್ದಾರೆ. ಹಾಗಿದ್ದಾರೆ ಶ್ರೇಯಸ್‌ ಅಯ್ಯರ್ ನಿರ್ಮಿಸಲಿರುವ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Shreyas Iyer Creates IPL History as He Leads Third Franchise to Final in 2025 Showdown vs RCB

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ಆರ್‌ಸಿಬಿ ಹಾಗೂ ಪಂಜಾಬ್‌ ಫೈಟ್‌ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಲಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್‌ ಟಾಸ್‌ಗೆ ಅಂಗಳಕ್ಕೆ ಇಳಿಯುತ್ತಿದ್ದಂತೆ ಐಪಿಎಲ್‌ನಲ್ಲಿ ಮೂರನೇ ಬಾರಿಗೆ ಬೇರೆ ಬೇರೆ ತಂಡಗಳ ನಾಯಕತ್ವವನ್ನು ವಹಿಸಿದ ಹಿರಿಮೆಯನ್ನು ತಮ್ಮದಾಸಿಕೊಳ್ಳಲಿದ್ದಾರೆ. ಈ ಮೊದಲು ಈ ಸಾಧನೆಯನ್ನು ಯಾವೊಬ್ಬ ಆಟಗಾರ ಮಾಡಿರಲಿಲ್ಲ. ಹೀಗಾಗಿ ಇವರ ಮೇಲೆ ಈಗ ಭರವಸೆ ಹೆಚ್ಚಿದೆ.

ಶ್ರೇಯಸ್‌ ಅಯ್ಯರ್ ಸಾಧನೆ

ಶ್ರೇಯಸ್ ಅಯ್ಯರ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಇವರು ಮುಂದಾಳತ್ವದಲ್ಲಿ ಡೆಲ್ಲಿ 2020ರಲ್ಲಿ ಫೈನಲ್‌ಗೆ ಪ್ರವೇಶಿಸಿತ್ತು. ಈ ವೇಳೆ ಡೆಲ್ಲಿ ಮುಂಬೈ ವಿರುದ್ಧ 5 ವಿಕೆಟ್‌ಗಳಿಂದ ಸೋತಿತ್ತು. ಇದೇ ಮೊದಲ ಬಾರಿಗೆ ಶ್ರೇಯಸ್ ಅಯ್ಯರ್‌ ನಾಯಕರಾಗಿ ಒಂದು ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದರು. ಇನ್ನು ಕಳೆದ ಅವೃತ್ತಿಯಲ್ಲಿ ಕೆಕೆಆರ್‌ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್‌ ತಂಡಕ್ಕೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ್ದರು. ಇವರ ಮುಂದಾಳತ್ವದಲ್ಲಿ ಕೆಕೆಆರ್‌ ಮತ್ತೊಮ್ಮೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಇನ್ನು ಈಗ 2025ರಲ್ಲಿ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಕಿಂಗ್ಸ್ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದಾರೆ. ಈ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

Shreyas Iyer Creates IPL History as He Leads Third Franchise to Final in 2025 Showdown vs RCB

ಶ್ರೇಯಸ್‌ ಅಯ್ಯರ್‌ ಮುಂದಾಳತ್ವದಲ್ಲಿ ಪಂಜಾಬ್ ಕಿಂಗ್ಸ್ ತಂಡ ಅಮೋಘ ಪ್ರದರ್ಶನ ನೀಡಿದೆ. ಲೀಗ್‌ ಹಂತದಲ್ಲಿ ಆಡಿದ 9 ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆಯುವುದರ ಜೊತೆಗೆ ಮೊದಲ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿತ್ತು. ಇನ್ನು ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ಪಂಜಾಬ್‌, ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ 17 ವರ್ಷದ ಪ್ರಶಸ್ತಿ ಎತ್ತದ ಬರವನ್ನು ಈಡೇರಿಸಿಕೊಳ್ಳುವ ಇರಾದೆಯನ್ನು ಹೊಂದಿದೆ.

Story first published: Tuesday, June 3, 2025, 12:20 [IST]
Other articles published on Jun 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+