Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shreyas Iyer: ಫೈನಲ್‌ ಪಂದ್ಯದಲ್ಲಿ ಶ್ರೇಯಸ್ 10 ರನ್‌ ಬಾರಿಸುತ್ತಿದ್ದಂತೆ ವಿಶೇಷ ದಾಖಲೆ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯ ಭಾನುವಾರ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ. ನ್ಯೂಜಿಲೆಂಡ್ ಸಹ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ. ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು, ರಣ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಸ್ಟಾರ್ ಆಟಗಾರರು ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.

ಟೀಮ್ ಇಂಡಿಯಾದ ಪರ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ದಾಖಲೆಯ ಪುಟಕ್ಕೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಹಾಗಿ ಮಿಡ್ಲ್ ಆರ್ಡರ್ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಸಹ ಮತ್ತೊಂದು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರೆ, ಎಲೈಟ್‌ ಕ್ಲಬ್‌ ಸೇರಬಹುದಾಗಿದೆ. ಹಾಗಿದ್ದರೆ ಶ್ರೇಯಸ್‌ ಅಯ್ಯರ್‌ ಸೇರಲಿರುವ ಆ ಎಲೈಟ್‌ ಕ್ಲಬ್ ಯಾವುದು ಎಂಬ ಬಗ್ಗೆ ವರದಿ ಇಲ್ಲಿದೆ.

Shreyas Iyer Eyes Historic 1 000-Run Milestone Against New Zealand in Champions Trophy Final


ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೇಯಸ್ ಅಯ್ಯರ್‌ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಸಮಯಕ್ಕೆ ತಕ್ಕಂತೆ ಬ್ಯಾಟ್ ಮಾಡುವ ಶ್ರೇಯಸ್‌ ಅಯ್ಯರ್‌, ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿರುವ ಶ್ರೇಯಸ್‌ ತಮ್ಮ ಸ್ಥಾನಕ್ಕೆ ನ್ಯಾಯ ಒದಗಿಸಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 15 ರನ್‌ ಬಾರಿಸಿದ್ದು ಬಿಟ್ಟರೆ, ಉಳಿದಂತೆ ಪಾಕಿಸ್ತಾನ ವಿರುದ್ಧ 56 , ನ್ಯೂಜಿಲೆಂಡ್ ವಿರುದ್ಧ 79, ಆಸ್ಟ್ರೇಲಿಯಾ ವಿರುದ್ಧ 45 ರನ್‌ಗಳ ಇನಿಂಗ್ಸ್‌ ಕಟ್ಟಿ ತಂಡಕ್ಕೆ ಆಧಾರವಾಗಿದ್ದಾರೆ. ಈಗ ಫೈನಲ್‌ ಪಂದ್ಯದಲ್ಲಿ ಮತ್ತೊಂದು ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.
Take a Poll

10 ರನ್ ಬಾರಿಸುತ್ತಿದ್ದಂತೆ ದಾಖಲೆ

ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್‌ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರು ಕಿವೀಸ್‌ ವಿರುದ್ಧ ಮೂರು ಫಾರ್ಮೆಟ್‌ಗಳಲ್ಲಿ 24 ಪಂದ್ಯಗಳ 23 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿ 47.14 ಸರಾಸರಿಯಲ್ಲಿ 990 ರನ್ ಗಳಿಸಿದ್ದಾರೆ. ಈ ವೇಳೆ ಮೂರು ಶತಕ ಹಾಗೂ ಆರು ಅರ್ಧಶತಕಗಳು ಸೇರಿವೆ. ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ 10 ರನ್‌ ಬಾರಿಸುವಲ್ಲಿ ಸಫಲರಾದರೆ, ನ್ಯೂಜಿಲೆಂಡ್ ವಿರುದ್ಧ ಒಂದು ಸಾವಿರ ರನ್‌ ಕಲೆ ಹಾಕಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಶ್ರೇಯಸ್ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಿದ 4 ಪಂದ್ಯಗಳಲ್ಲಿ, 48.75 ಸರಾಸರಿಯಲ್ಲಿ 195 ರನ್ ಗಳಿಸಿದ್ದಾರೆ.

Shreyas Iyer Eyes Historic 1 000-Run Milestone Against New Zealand in Champions Trophy Final

ಇನ್ನು ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸಹ ನ್ಯೂಜಿಲೆಂಡ್‌ ವಿರುದ್ಧ ಏಕದಿನ ಪಂದ್ಯಗಳಲ್ಲಿ ಸಾವಿರ ರನ್‌ಗಳ ಗಡಿ ದಾಟಲು ಇನ್ನು ಮೂರು ರನ್‌ ಅವಶ್ಯಕತೆ ಇದೆ. ಮಿಡ್ಲ್‌ ಅರ್ಡರ್‌ನಲ್ಲಿ ಕೆಎಲ್ ರಾಹುಲ್ ಸಹ ಫೈನಲ್‌ ಪಂದ್ಯದಲ್ಲಿ 81 ರನ್ ಗಳಿಸಿದರೆ, ಐಸಿಸಿ ಏಕದಿನ ಟೂರ್ನಿಯಲ್ಲಿ 1000 ರನ್ ಗಳಿಸುವ ಸಾಧನೆ ಮಾಡುತ್ತಾರೆ.

Story first published: Sunday, March 9, 2025, 9:07 [IST]
Other articles published on Mar 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+