ಗಾಯದ ಬಗ್ಗೆ ಮಾಹಿತಿ ನೀಡಿದ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಶ್ರೇಯಸ್ ಐಯ್ಯರ್

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭುಜದ ನೋವಿಗೆ ಒಳಗಾಗಿದ್ದ ಶ್ರೇಯಸ್ ಐಯ್ಯರ್ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದಲೇ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಇದೀಗ ಶ್ರೇಯಸ್ ಐಯ್ಯರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ.
ಗುರುವಾರ ಹಂಚಿಕೊಂಡ ವಿಡಿಯೋದಲ್ಲಿ ಶ್ರೇಯಸ್ ವರ್ಕ್‌ಔಟ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಫಿಟ್‌ನೆಸ್‌ಅನ್ನು ಮರಳಿ ಪಡೆಯುವ ಹಾದಿಯಲ್ಲಿರುವುದಾಗಿ ಶ್ರೇಯಸ್ ಐಯ್ಯರ್ ಹೇಳಿಕೊಂಡಿದ್ದಾರೆ. "ಕೆಲಸ ಜಾರಿಯಲ್ಲಿದೆ. ಈ ಸ್ಥಳವನ್ನೊಮ್ಮೆ ನೋಡಿ" ಎಂದು ಶ್ರೇಯಸ್ ಐಯ್ಯರ್ ಬರೆದುಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಫೀಲ್ಡಿಂಗ್ ನಡೆಸುತ್ತಿದ್ದ ವೇಳೆ ಶ್ರೇಯಸ್ ಐಯ್ಯರ್ ಅವರ ಭುಜದ ಮೂಳೆ ಸ್ಥಾನಪಲ್ಲಟವಾಗಿತ್ತು. ಹೀಗಾಗಿ ಅವರು ಬಳಿಕ ನಡೆದ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿಯಬೇಕಾಗಿತ್ತು. ಶ್ರೇಯಸ್ ಐಯ್ಯರ್ ಅಲಭ್ಯತೆಯಲ್ಲ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಸದ್ಯ ಕೊರೊನಾ ವೈರಸ್‌ನ ಕಾರಣದಿಂದಾಗಿ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ.
ಈಗ ಶ್ರೇಯಸ್ ಐಯ್ಯರ್ ಮುಂಬರುವ ಜುಲೈ ತಿಂಗಳಿನಲ್ಲಿ ಶ್ಋಈಲ ಕಾ ವಿರರುದ್ಧ ನಡೆಯುವ ಸೀಮಿತ ಓವರ್‌ಗಳ ಸರಣಿಗೆ ಫಿಟ್ ಆಗುತ್ತಾರೆಯೇ ಎಂಬುದು ಪ್ರಶ್ನೆಯಾಗಿದೆ. ಶ್ರೇಯಸ್ ಐಯ್ಯರ್ ಈ ಪ್ರವಾಸಕ್ಕೆ ಆಯ್ಕೆಯಾಗಲು ಸಮರ್ಥರಾಗಿದ್ದರೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿಯೂ ಅವರ ಹೆಗಲಿಗೆ ಬೀಳುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications