
ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ತಂಡಕ್ಕೆ ನಾಯಕ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ಉತ್ತಮ ಜೊತೆಯಾಟದ ಮೂಲಕ ನೆರವಾದರು.
ಕೊನೆಯ ಓವರ್‌ವರೆಗೂ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ 50 ಎಸೆತಗಳಲ್ಲಿ 65 ರನ್ ಬಾರಿಸಿದ್ದಾರೆ. ಇದರಲ್ಲಿ 6 ಬೌಂಡರಿ ಮತ್ತು 2 ಸಿಕ್ಸ್ ಕೂಡ ಸೇರಿದೆ.
ಈ ಮೂಲಕ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಅರ್ಧ ಶತಕ ಬಾರಿಸಿದ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಇದಕ್ಕೂ ಮುಂಚೆ ಐಪಿಎಲ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ರೋಹಿತ್ ಶರ್ಮಾ ಮತ್ತು ಡೇವಿಡ್ ವಾರ್ನರ್ 50ಕ್ಕೂ ಹೆಚ್ಚು ರನ್ ಬಾರಿಸಿದ್ದಾರೆ. ಈಗ ಶ್ರೇಯಸ್ ಅಯ್ಯರ್ ಮೂರನೇ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
2015ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಫೈನಲ್‌ನಲ್ಲಿ ರೋಹಿತ್ ಶರ್ಮಾ 50 ರನ್ ಕಲೆ ಹಾಕಿದ್ದರು. ಈ ಪಂದ್ಯ ಮುಂಬೈ ಇಂಡಿಯನ್ಸ್ ಗೆದ್ದಿತ್ತು. 2016ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ನಾಯಕ ಡೇವಿಡ್ ವಾರ್ನರ್ 69 ರನ್ ಬಾರಿಸಿದ್ದರು.