Shreyas Iyer: ಐಪಿಎಲ್‌ನಲ್ಲಿ ಧೋನಿ-ರೋಹಿತ್ ಕ್ಲಬ್‌ಗೆ ಶ್ರೇಯಸ್ ಅಯ್ಯರ್ ಸೇರ್ಪಡೆ
ಐಪಿಎಲ್ 2025 ರಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಸ್ಥಿರ ಪ್ರದರ್ಶನ ನೀಡುತ್ತಿದೆ. ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ 8 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 2ನೆ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಗೆಲುವಿನ ಬಳಿಕ ಪಂಜಾಬ್ ಕಿಂಗ್ಸ್ ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ವಿಶೇಷ ಸ್ಥಾನವನ್ನು ಪಡೆದಿದ್ದಾರೆ. ಐಪಿಎಲ್ ದಿಗ್ಗಜ ನಾಯಕರ ಕ್ಲಬ್‌ಗೆ ಸೇರಿಕೊಂಡಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಐದನೇ ನಾಯಕ ಎಂಬ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್ ಪಾತ್ರರಾಗಿದ್ದಾರೆ. ಅವರು ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿ ಎಂಎಸ್ ಧೋನಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಅವರ ಕ್ಲಬ್‌ಗೆ ಸೇರಿದ್ದಾರೆ.

ಶ್ರೇಯಸ್ ಅಯ್ಯರ್ 72 ಐಪಿಎಲ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, 42 ಐಪಿಎಲ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಅವರು ನಾಯಕನಾಗಿ 83 ಪಂದ್ಯಗಳಲ್ಲಿ 40 ಗೆಲುವುಗಳನ್ನು ಸಾಧಿಸಿರುವ ಡೇವಿಡ್ ವಾರ್ನರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಎಂಎಸ್ ಧೋನಿ 226 ಪಂದ್ಯಗಳಲ್ಲಿ ನಾಯಕತ್ವ ವಹಿಸಿ 133 ಪಂದ್ಯಗಳನ್ನು ಗೆದ್ದಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ 158 ಪಂದ್ಯಗಳಲ್ಲಿ 89 ಪಂದ್ಯಗಳನ್ನು ಗೆದ್ದಿದ್ದಾರೆ. ಗೌತಮ್ ಗಂಭೀರ್ ನಾಯಕರಾಗಿ 129 ಪಂದ್ಯಗಳಲ್ಲಿ 71 ಗೆಲುವುಗಳನ್ನು ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ 68 ಪಂದ್ಯಗಳಲ್ಲಿ ಜಯ ಕಂಡಿದ್ದಾರೆ.
ಐಪಿಎಲ್‌ನಲ್ಲಿ ನಾಯಕನಾಗಿ ಹೆಚ್ಚು ಗೆಲುವು ಸಾಧಿಸಿದವರು
- ಎಂಎಸ್ ಧೋನಿ - 133 ಗೆಲುವು
- ರೋಹಿತ್ ಶರ್ಮಾ - 89 ಗೆಲುವು
- ಗೌತಮ್ ಗಂಭೀರ್ - 71 ಗೆಲುವು
- ವಿರಾಟ್ ಕೊಹ್ಲಿ - 68 ಗೆಲುವು
- ಶ್ರೇಯಸ್ ಅಯ್ಯರ್ - 42 ಗೆಲುವು
- ಡೇವಿಡ್ ವಾರ್ನರ್ - 40 ಗೆಲುವು
ಐಪಿಎಲ್ 2025 ರ 13 ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಪಂಜಾಬ್ ಕಿಂಗ್ಸ್ 172 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ, ಪಂಜಾಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ 34 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 69 ರನ್ ಗಳಿಸಿದರು. ನಾಯಕ ಶ್ರೇಯಸ್ ಅಯ್ಯರ್ ಕೇವಲ 30 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿ ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications