Shreyas Iyer: ಚಾಂಪಿಯನ್ಸ್ ಟ್ರೋಫಿಗೆ ನಾಲ್ಕನೇ ಮನೆ ನಂದು!
1-0 ಮುನ್ನಡೆ ಸಾಧಿಸಿತು. ಮೊದಲ ಏಕದಿನ ಪಂದ್ಯದ ಗೆಲುವಿನ ನಂತರ ಟೀಮ್ ಇಂಡಿಯಾದಲ್ಲಿ ಸಂತಸ ಮನೆ ಮಾಡಿದೆ. ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರುವ ಕ್ಲಾಸಿಕ್ ಬ್ಯಾಟರ್ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ ದಾಖಲೆಯ ಅರ್ಧಶತಕ ಬಾರಿಸುವ ಮೂಲಕ ಟೀಕಾಕಾರರಿಗೆ ಅಯ್ಯರ್ ತಿರುಗೇಟು ನೀಡಿದ್ದಾರೆ.
ಶ್ರೇಯಸ್ ಅಯ್ಯರ್ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಇಂಗ್ಲೆಂಡ್ ತಂಡದ ಬೌಲರ್‌ಗಳನ್ನು ಕಾಡಿದರು. ಇಂಗ್ಲೆಂಡ್ ನೀಡಿದ 249 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾಕ್ಕೆ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕ ಸಿಡಿಸಿ ನೆರವಾದರು. ಇದರೊಂದಿಗೆ ಅಯ್ಯರ್ ಅವರು ಇಂಗ್ಲೆಂಡ್ ತಂಡದ ಗೆಲುವಿನ ಆಸೆಗೆ ಮೂಳೆ ಹೊಡೆದರು.

ನಾಗ್ಪುರ ಏಕದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಅವರು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಕೆಲವೇ ನಿಮಿಷಗಳಲ್ಲಿ ರೋಹಿತ್ ವಿಕೆಟ್ ಕಳೆದಕೊಂಡ ಟೀಮ್ ಇಂಡಿಯಾದ ದುಃಖವನ್ನು ಕೊನೆಗೊಳಿಸಿದರು. ಅವರು 163.89 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದು, ಕೇವಲ 36 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 59 ರನ್ ಗಳಿಸಿ ಔಟಾದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ನಾಲ್ಕನೇ ಮನೆ ನಂದು ಎಂದು ಅಯ್ಯರ್ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ತಿಳಿಸಿದ್ದಾರೆ.
ನಾಲ್ಕನೇ ಮನೆ ನಂದು
ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಿತ್ತಿದೆ. ಇದಾದ ನಂತರ ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಲು ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಸಜ್ಜಾಗಿದೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ ನಡುವೆ ಭಾರೀ ಪೈಪೋಟಿ ಇತ್ತು.
ಇದೀಗ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಅಯ್ಯರ್ ಪಡೆಯಬಹುದು ಎಂಬುದು ಸ್ಪಷ್ಟವಾಗಿದೆ. ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಅತಿವೇಗದ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಅಲ್ಲದೆ, ಟೀಮ್ ಇಂಡಿಯಾ ಪರ ನಾಲ್ಕನೇ ಸ್ಥಾನದಲ್ಲಿ ಆಡುವ ಎಲ್ಲಾ ಸಾಮರ್ಥ್ಯಗಳು ತಮ್ಮಲ್ಲಿವೆ ಎಂದು ಅಯ್ಯರ್ ತಮ್ಮ ಬ್ಯಾಟ್‌ನಿಂದಲೇ ಉತ್ತರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications