ಶ್ರೇಯಸ್ ಅಯ್ಯರ್‌ಗೆ ಪಟ್ಟ, ತಿಲಕ್ ವರ್ಮಾ ಉಪನಾಯಕ; ವೈಭವ್ ಸೂರ್ಯವಂಶಿಗೆ ಅವಕಾಶ
ಐರ್ಲೆಂಡ್ ಹಾಗೂ ಇಂಗ್ಲೆಡ್ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಚಾಂಪಿಯನ್ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಕೈ ಬಿಡಲಾಗಿದ್ದು, ಇವರ ಅನುಪಸ್ಥಿತಿಯಲ್ಲಿ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಇನ್ನು ಭರವಸೆಯ ಮಧ್ಯಮ ಕ್ರಮಾಂಕದ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್‌ನಿಂದಾಗಿ ನಾಯಕತ್ವ ಹಾಗೂ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇವರು ಐಪಿಎಲ್‌ನಲ್ಲೂ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಇವರ ಸ್ಥಾನದ ಮೇಲೆ ಪ್ರಶ್ನೆಗಳು ಎದ್ದಿದ್ದವು. ಈಗ ಇವರ ಸ್ಥಾನವನ್ನು ಭರವಸೆಯ ಬ್ಯಾಟರ್ ಶ್ರೇಯಸ್ ಅಯ್ಯರ್ ತುಂಬಲಿದ್ದಾರೆ. ಇವರು ಭಾರತ ತಂಡವನ್ನು ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಮುನ್ನಡೆಸಲಿದ್ದಾರೆ.

ವೈಭವ್‌ಗೆ ಅವಕಾಶ
19ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಬ್ಬರಿಸಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ತಂಡದಲ್ಲಿ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ವೈಭವ್ ಸೂರ್ಯವಂಶಿ ಹಿರಿಯರ ತಂಡಕ್ಕೆ ಆಯ್ಕೆ ಆಗಿದ್ದಾರೆ. ಇವರು ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕಣಕ್ಕೆ ಇಳಿದು ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಈ ವೇಳೆ ಇವರು 16 ಪಂದ್ಯಗಳಲ್ಲಿ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಗಳಿಸಿದರು. ಈ ಅದ್ಭುತ ಪ್ರದರ್ಶನವು ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ತಂದುಕೊಟ್ಟಿದೆ.
ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.
ಏಷ್ಯನ್ ಗೇಮ್ಸ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾಗೆ ಸ್ಥಾನ
2026 ರ ಏಷ್ಯನ್ ಕ್ರೀಡಾಕೂಟಕ್ಕೆ ಟೀಮ್ ಇಂಡಿಯಾ ತಂಡವನ್ನು ಸಹ ಘೋಷಿಸಲಾಗಿದೆ. ಈ ವೇಳೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಆಯ್ಕೆದಾರರು ಆ ಪಂದ್ಯಾವಳಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ.
ಏಷ್ಯನ್ ಕ್ರೀಡಾಕೂಟ ಭಾರತ ತಂಡ: ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications