Shreyas Iyer: ಶ್ರೇಯಸ್ ಅಯ್ಯರ್‌ಗೆ ಐಸಿಸಿಯಿಂದ ದೊಡ್ಡ ಗೌರವ?
ಶ್ರೇಯಸ್ ಅಯ್ಯರ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಈ ವೇಳೆ ಮಂಗಳವಾರ ಎರಡನೇ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸುತ್ತಾ ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸವಾಲು ಎಸೆಯಲಿದ್ದಾರೆ. ಈ ಪ್ರಸಕ್ತ ಐಪಿಎಲ್‌ನಲ್ಲಿ ಪಂಜಾಬ್ ಅಮೋಘ ಪ್ರದರ್ಶನ ನೀಡುತ್ತಿದೆ. ಇವರ ಮುಖದಲ್ಲಿ ಮಂದಹಾಸ ಮೂಡಿಸುವ ಸುದ್ದಿಯೊಂದು ಬಂದಿದೆ. ಇವರ ಹೆಸರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ದೊಡ್ಡ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿದೆ. ಈ ವೇಳೆ ಈ ರೇಸ್‌ನಲ್ಲಿ ಇನ್ನೊಬ್ಬ ಸ್ಟಾರ್ ಆಟಗಾರ ಇದ್ದಾರೆ. ಆಶರ್ಯ ಎಂದರೆ ಆ ಸ್ಟಾರ್ ಆಟಗಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕೆ ಇಳಿಯುತ್ತಿದ್ದಾರೆ.
ಟೀಮ್ ಇಂಡಿಯಾ ಈ ವರ್ಷ ಪಾಕಿಸ್ತಾನ ಆಯೋಜಿತ ಚಾಂಪಿಯನ್ಸ್ ಟ್ರೋಫಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ದುಬೈನಲ್ಲಿ ನಡೆದಿದ್ದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾರತ, ಕಿವೀಸ್ ತಂಡವನ್ನು ಮಣಿಸಿ ಆರ್ಭಟಿಸಿತ್ತು. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಮಿಡ್ಲ್ ಆರ್ಡರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬಿಗ್ ಇನಿಂಗ್ಸ್ ಆಡಿ ಸೈ ಎನಿಸಿಕೊಂಡಿದ್ದರು. ಇವರು ಐಸಿಸಿಯ ಬಿಗ್ ಟೂರ್ನಿಯಲ್ಲಿ 172 ರನ್ ಸಿಡಿಸಿ ಭರವಸೆ ಮೂಡಿಸಿದ್ದರು. ಈ ವೇಳೆ ಇವರ ಸರಾಸರಿ 57.33 ಆಗಿತ್ತು. ಈ ಟೂರ್ನಿಯಲ್ಲಿ ಭಾರತ ಒಂದೇ ಒಂದು ಪಂದ್ಯ ಸೋತಿಲ್ಲ ಎಂದರೆ, ಇದರಲ್ಲಿ ಶ್ರೇಯಸ್ ಪಾತ್ರ ದೊಡ್ಡದರು. ಇದೇ ಕಾರಣಕ್ಕಾಗಿ ಐಸಿಸಿ ಶ್ರೇಯಸ್ ಅಯ್ಯರ್ ಅವರನ್ನು ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.

ನ್ಯೂಜಿಲೆಂಡ್ ಆಟಗಾರರು ರೇಸ್‌ನಲ್ಲಿ
ಇನ್ನು ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಎರಡನೇ ಆಟಗಾರ ನ್ಯೂಜಿಲೆಂಡ್ ತಂಡದ ರಚಿನ್ ರವೀಂದ್ರ. ಇವರು ಸದ್ಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ. ಇವರು ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಇವರ ಅದ್ಭುತ ಆಲ್‌ರೌಂಡರ್ ಪ್ರದರ್ಶನದ ಬಲದಿಂದ ಕಿವೀಸ್ ಪ್ರಶಸ್ತಿ ಸುತ್ತು ಪ್ರವೇಶಿಸುವಲ್ಲಿ ಸಫಲವಾಗಿತ್ತು. ಇವರು ಮಾರ್ಚ್ ತಿಂಗಳನಲ್ಲಿ 151 ರನ್ ಗಳಿಸಿದ್ದಾರೆ. ಈ ವೇಳೆ ಇವರ ಸರಾಸರಿ 50.33 ಆಗಿದೆ. ಇಷ್ಟೇ ಅಲ್ಲದೆ ಇವರ ಬುಟ್ಟಿಯಲ್ಲಿ ಮೂರು ವಿಕೆಟ್ ಸಹ ಇದೆ.

ಇನ್ನು ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಇನ್ನೊಬ್ಬ ಆಟಗಾರ ನ್ಯೂಜಿಲೆಂಡ್‌ನ ಜಾಕೋಬ್ ಡಫಿ. ಇವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿರಲಿಲ್ಲ. ಆದರೆ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು. ಐದು ಪಂದ್ಯಗಳ ಸರಣಿಯಲ್ಲಿ ಕಿವೀಸ್ 4-1 ರಿಂದ ಸರಣಿ ಗೆಲ್ಲುವಲ್ಲಿ ಇವರ ಪಾತ್ರ ದೊಡ್ಡದು. ಒಟ್ಟಾರೆ ಟೂರ್ನಿಯಲ್ಲಿ ನ್ಯೂಜಿಲೆಂಡ್‌ನ ಜಾಕೋಬ್ ಡಫಿಯನ್ನು13 ವಿಕೆಟ್ ಕಬಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications