For Quick Alerts
ALLOW NOTIFICATIONS  
For Daily Alerts
 

2022ರಲ್ಲಿ ವಿಶೇಷ ಸಾಧನೆ: ಸೂರ್ಯಕುಮಾರ್ ಹಿಂದಿಕ್ಕಿದ ಶ್ರೇಯಸ್ ಐಯ್ಯರ್

Shreyas Iyer overtake Suryakumar Yadav become Team Indias leading run-scorer all formats in 2022

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಟಗಾರ ಶ್ರೇಯಸ್ ಐಯ್ಯರ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ತಂಡ ಉತ್ತಮ ಮೊತ್ತಗಳಿಸಲು ಪ್ರಮುಖ ಕಾರಣವಾಗಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಐಯ್ಯರ್ 86 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಫಾರ್ಮ್ ಮುಂದುವರಿಸಿದ್ದಾರೆ. ಚೇತೇಶ್ವರ್ ಪೂಜಾರ, ಶ್ರೇಯಸ್ ಐಯ್ಯರ್ ಹಾಗೂ ಆರ್ ಅಶ್ವಿನ್ ಬ್ಯಾಟಿಂಗ್‌ನ ಕಾರಣದಿಂದಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 404 ರನ್‌ಗಳನ್ನು ಗಳಿಸಲುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ನೀಡಿರುವ ಅದ್ಭುತ ಪ್ರದರ್ಶನದ ಮೂಲಕ 2022ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಪರವಾಗಿ ವಿಶೇಷ ಸಾಧನೆ ಮಾಡಿದಂತಾಗಿದೆ. ವರ್ಷದ ಅಂತಿಮ ಹಂತದಲ್ಲಿ ಅದ್ಭುತ ಫಾರ್ಮ್‌ಗೆ ಮರಳಿರುವ ಶ್ರೇಯಸ್ ಐಯ್ಯರ್ ಈ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಪರವಾಗಿ ಎಲ್ಲಾ ಮಾದರಿಗಳಲ್ಲಿ ಒಟ್ಟಾರೆಯಾಗಿ ಅತೀ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಹಿಂದಿಕ್ಕಿ ಸಾಧನೆ

ಸೂರ್ಯಕುಮಾರ್ ಹಿಂದಿಕ್ಕಿ ಸಾಧನೆ

ಶ್ರೇಯಸ್ ಐಯ್ಯರ್ ಈ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾಮಾದರಿಯಲ್ಲಿಯೂ ಒಟ್ಟಾರೆಯಾಗಿ 38 ಇನ್ನಿಂಗ್ಸ್‌ಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 1489 ರನ್‌ಗಳನ್ನು ಗಳಿಸುವ ಮೂಲಕ ಐಯ್ಯರ್ ಸೂರ್ಯಕುಮಾರ್ ಅವರನ್ನು ಹಿಂದಕ್ಕೆ ತಳ್ಳಿದ್ದಾರೆ. ಐಯ್ಯರ್ ಏಕದಿನ ಮಾದರಿಯಲ್ಲಿ ಈ ವರ್ಷ ಉತ್ತಮ ಪ್ರದರ್ಶನ ನೀಡಿದ್ದು 15 ಇನ್ನಿಂಗ್ಸ್‌ಗಳಲ್ಲಿ 724 ರನ್‌ಗಳಿಸಿದ್ದಾರೆ. 91.52ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಅವರು ಆರು ಅರ್ಧ ಶತಕ ಹಾಗೂ ಇಂದು ಶತಕ ಸಿಡಿಸಿದ್ದಾರೆ.

ಟೆಸ್ಟ್ ತಂಡದಲ್ಲಿ ಸ್ಥಾನ ಭದ್ರ, ಟಿ20ಯಲ್ಲಿ ನಿರಾಸೆ

ಟೆಸ್ಟ್ ತಂಡದಲ್ಲಿ ಸ್ಥಾನ ಭದ್ರ, ಟಿ20ಯಲ್ಲಿ ನಿರಾಸೆ

ಇನ್ನು ಈ ವರ್ಷ ಶ್ರೇಯಸ್ ಐಯ್ಯರ್ ಟೆಸ್ಟ್ ಮಾದರಿಯಲ್ಲಿಯೂ ತಮ್ಮ ಸ್ಥಾನವನ್ನು ಭದ್ರಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಿಕ್ಕಿರುವ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿರುವ ಐಯ್ಯರ್ 6 ಇನ್ನಿಂಗ್ಸ್‌ಗಳಲ್ಲಿ 60.40ರ ಸರಾಸರಿಯಲ್ಲಿ 302 ರನ್‌ಗಳನ್ನು ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಈ ವರ್ಷ ಐಯ್ಯರ್ ಮೂರು ಅರ್ಧ ಶತಕ ಸಿಡಿಸಿದ್ದಾರೆ. ಆದರೆ ಚುಟುಕು ಮಾದರಿಯಲ್ಲಿ ಐಯ್ಯರ್ ಸ್ಥಾನವನ್ನು ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಈ ಕ್ಯಾಲೆಂಡರ್ ವರ್ಷದಲ್ಲಿ ಐಯ್ಯರ್ 17 ಟಿ20 ಇನ್ನಿಂಗ್ಸ್‌ಗಳಲ್ಲಿ ಕಣಕ್ಕಿಳಿದಿದ್ದು 35.61ರ ಸರಾಸರಿಯಲ್ಲಿ 463 ರನ್‌ಗಳಿಸಿದ್ದಾರೆ. 141.15ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿ ಗಮನಾರ್ಹವಾದ ಪ್ರದರ್ಶನವನ್ನೇ ನೀಡಿದ್ದಾರೆ. ಆದರೆ ಕಳೆದ ಏಷ್ಯಾ ಕಪ್‌ನಲ್ಲಿ ಹಾಗೂ ವಿಶ್ವಕಪ್ ತಂಡದಲ್ಲಿ ಅವರು ಸ್ಥಾನವನ್ನು ಪಡೆಯಲು ವಿಫಲವಾಗಿದ್ದರು.

ಚುಟುಕು ಮಾದರಿಯಲ್ಲಿ ಅಬ್ಬರಿಸಿದ ಸೂರ್ಯ

ಚುಟುಕು ಮಾದರಿಯಲ್ಲಿ ಅಬ್ಬರಿಸಿದ ಸೂರ್ಯ

ಇನ್ನು ಈ ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರವಾಗಿ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದು ಸೂರ್ಯಕುಮಾರ್ ಯಾದವ್. ಅದರಲ್ಲೂ ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ ಅಬ್ಬರದ ಹಾಗೂ ಸ್ಥಿರ ಪ್ರದರ್ಶನ ನೀಡುವ ಮೂಲಕ ಭಾರತ ತಂಡದ ಪ್ರಮುಖ ಅಸ್ತ್ರವಾಗಿ ಗುರುತಿಸಿಕೊಂಡಿದ್ದಾರೆ. 31 ಟಿ20 ಇನ್ನಿಂಗ್ಸ್‌ಗಳಲ್ಲಿ ಸೂರ್ಯ 1164 ರನ್‌ಗಳನ್ನು ಗಳಿಸಿದ್ದಾರೆ. ಆದರೆ ಇದೇ ಪ್ರದರ್ಶನವನ್ನು ಏಕದಿನ ಮಾದರಿಯಲ್ಲಿ ನೀಡಲು ವಿಫಲವಾದರು. ಏಕದಿನ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ 12 ಪಂದ್ಯಗಳಲ್ಲಿ 26ರ ಸರಾಸರಿಯಲ್ಲಿ 260 ರನ್‌ಗಳನ್ನು ಮಾತ್ರವೇ ಗಳಿಸಿದ್ದಾರೆ.

ಮೊದಲ ಟೆಸ್ಟ್‌ ಪಂದ್ಯ ಭಾರತದ ಹಿಡಿತದಲ್ಲಿ

ಮೊದಲ ಟೆಸ್ಟ್‌ ಪಂದ್ಯ ಭಾರತದ ಹಿಡಿತದಲ್ಲಿ

ಇನ್ನು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ 404 ರನ್‌ಗಳನ್ನು ಗಳಿಸಿದರೆ ಬಳಿಕ ಬೌಲಿಂಗ್‌ನಲ್ಲಿ ಅದ್ಭುತ ಯಶಸ್ಸು ಸಾಧಿಸಿದ್ದು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಬಹುತೇಕ ಯಶಸ್ವಿಯಾಗಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣ ನಿಯಂತ್ರಣ ಸಾಧಿಸುವಲ್ಲಿ ಯಶಸ್ಸು ಕಂಡಿದೆ.

Story first published: Thursday, December 15, 2022, 16:23 [IST]
Other articles published on Dec 15, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+