ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್: ಶ್ರೇಯಸ್ ಇಷ್ಟು ಸಮಯ ಮೈದಾನದಿಂದ ದೂರ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯ ಸಿಡ್ನಿ ಮೈದಾನದಲ್ಲಿ ಶನಿವಾರ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈ ವೇಳೆ ಭರವಸೆಯ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಗೆಲುವಿನಲ್ಲಿ ಮಿಂಚಿದ್ದು, ಅಭಿಮಾನಿಗಳು ಕುಣಿದು ಕುಪ್ಪಳಿಸುವಂತೆ ಮಾಡಿದೆ. ಇನ್ನು ಗೆಲುವಿನ ಜೋಶ್ ನಡುವೆ, ಟೀಮ್ ಇಂಡಿಯಾ ಕ್ಯಾಂಪ್‌ನಿಂದ ಬರುತ್ತಿರುವ ಸುದ್ದಿಯೊಂದು ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಮೊದಲೇ ಆಸ್ಟ್ರೇಲಿಯಾ ಗೆದ್ದು ಕೊಂಡಿತ್ತು. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪುಟಿದೇಳುವ ಅನಿವಾರ್ಯತೆ ಇತ್ತು. ಮಹತ್ವದ ಪಂದ್ಯದಲ್ಲಿ ತಮ್ಮ ಕ್ಲಾಸ್ ಆಟವನ್ನು ತೋರಿಸಿದ ವಿರಾಟ್, ರೋಹಿತ್ ಸಿಡ್ನಿ ಅಂಗಳದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸೀಸ್ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ಆಲೌಟ್ ಆಯಿತು. ಇದೇ ವೇಳೆ ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಬ್ಯಾಟ್ ಫೀಲ್ಡ್ ಮಾಡುವಾಗ ಉತ್ತಮ ಕ್ಯಾಚ್ ಪಡೆದು ಗಾಯಕ್ಕೆ ತುತ್ತಾಗಿದ್ದಾರೆ. ಆತಿಥೇಯ ತಂಡದ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಪಡೆದ ಶ್ರೇಯಸ್ ಗಂಭೀರ ಗಾಯಕ್ಕೆ ತುತ್ತಾದರು. ಬಳಿಕ ಅವರು ಮೈದಾನದಿಂದ ದೂರ ನಡೆದರು.

ಶ್ರೇಯಸ್ ಅಯ್ಯರ್ ಗಾಯಗೊಂಡ ನಂತರ ಬಿಸಿಸಿಐ ಅವರ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದ್ದು ಸ್ಕ್ಯಾನ್‌ಗೆ ಒಳಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಹೆಸರು ಬಹಿರಂಗ ಪಡಿಸದ ಬಿಸಿಸಿಐ ಮೂಲವೊಂದು, ಪಕ್ಕೆಲುಬಿನ ಗಾಯದ ಬಳಿಕ ಇವರು ತಂಡಕ್ಕೆ ಹಿಂತಿರುಗಲು 3 ವಾರ ಬೇಕಾಗುತ್ತದೆ ಎಂದು ತಿಳಿದು ಬಂದರು. ಸೆಂಟರ್ ಆಫ್ ಎಕ್ಸಲೆನ್ಸಿಯಲ್ಲಿ ವರದಿ ಮಾಡಿಕೊಳ್ಳಬೇಕಾಗುತ್ತದೆ. ಇವರು ಎಷ್ಟು ದಿನ ಮೈದಾನದಿಂದ ಹೊರಗುಳಿಯುತ್ತಾರೆ ಎಂಬುದನ್ನು ನಿರ್ಧರಿಸಲು ಇನ್ನು ಅವರು ಕೆಲವು ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ ಎಂದು ತಿಳಿದು ಬಂದಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಆಡ್ತಾರಾ?
ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟಿ20 ಸರಣಿಯನ್ನು ಆಡಲಿದೆ. ಈ ವೇಳೆ ಶ್ರೇಯಸ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಇವರು ಫಿಟ್ ಆಗುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಈಗ ಮುಂಚಿತವಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಶ್ರೇಯಸ್ ಅಯ್ಯರ್ ಮೊದಲ ಪಂದ್ಯದಲ್ಲಿ 11, ಆಡಿಲೇಡ್‌ನಲ್ಲಿ 61 ರನ್ ಸಿಡಿಸಿ ತಂಡಕ್ಕೆ ಆಧಾರವಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications