For Quick Alerts
ALLOW NOTIFICATIONS  
For Daily Alerts
 

IPL 2025 Orange Cap: ಆರೆಂಜ್‌ ಕ್ಯಾಪ್‌ ಮೇಲೆ ಈ ಮೂವರು ಭಾರತೀಯರ ಕಣ್ಣು

ಇಂಡಿಯನ್ ಪ್ರೀಮಿಯರ್ ಲೀಗ್‌ ದಿನ ಕಳೆದಂತೆ ರೋಚಕತೆ ಹುಟ್ಟಿಸಿದೆ. ಈ ವೇಳೆ ಸ್ಟಾರ್ ಆಟಗಾರರು ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಭರವಸೆಯ ಆಟಗಾರರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಆಡುತ್ತಿದ್ದಾರೆ. ಇನ್ನು ಸಿಕ್ಕ ಅವಕಾಶವನ್ನು ಬಳಸಿಕೊಂಡು ಯುವ ಆಟಗಾರರು ಸಹ ಅಬ್ಬರಿಸುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ಎಲ್ಲ ತಂಡಗಳು ತಲಾ ಕನಿಷ್ಠ 2 ಪಂದ್ಯಗಳನ್ನು ಆಡಿವೆ. ಈ ವೇಳೆ ಟೀಮ್ ಇಂಡಿಯಾದ ಆಟಗಾರರು ತಮ್ಮ ಘನತೆಗೆ ತಕ್ಕ ಆಟವನ್ನು ಆಡುತ್ತಿದ್ದಾರೆ. ಇದೇ ವೇಳೆ ವಿದೇಶಿ ಆಟಗಾರರು ಸಹ ತಮ್ಮ ಆರ್ಭಟ ನಡೆಸುತ್ತಿದ್ದಾರೆ. ಸದ್ಯ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ನಿಕೋಲಸ್‌ ಪೂರನ್‌ ಮುಂಚೂಣಿಯಲ್ಲಿ ನಿಂತು ಕೊಳ್ಳುತ್ತಾರೆ. ಈ ವೇಳೆ ಇವರು ಆಡಿದ ಮೂರು ಪಂದ್ಯಗಳಲ್ಲಿ 63ರ ಸರಾಸರಿಯಲ್ಲಿ 189 ರನ್‌ ಸಿಡಿಸಿದ್ದಾರೆ. ಈ ವೇಳೆ 2 ಅರ್ಧಶತಕಗಳು ಸಹ ಸೇರಿವೆ. ಅಲ್ಲದೆ ಟಾಪ್‌ ರನ್‌ ಸ್ಕೋರ್‌ರ ರೇಸ್‌ನಲ್ಲಿ ಮೂವರು ಭಾರತೀಯ ಆಟಗಾರರು ಕಾಣಿಸಿಕೊಳ್ಳುತ್ತಾರೆ. ಇದರಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಸೇರಿದಂತೆ ಸ್ಟಾರ್ ಆಟಗಾರ ಸ್ಥಾನ ಪಡೆದಿಲ್ಲ.

Shreyas Iyer Sai Sudharsan and Ruturaj Gaikwad Lead Indian Contenders for IPL 2025 Orange Cap

ಸಾಯಿ ಸುದರ್ಶನ್‌

ಮಾಜಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ಭರವಸೆಯ ಆಟಗಾರ ಸಾಯಿ ಸುದರ್ಶನ್ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ 62ರ ಸರಾಸರಿಯಲ್ಲಿ 186 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 2 ಅರ್ಧಶತಕಗಳು ಸೇರಿವೆ. ಅಲ್ಲದೆ 19 ಬೌಂಡರಿ, 9 ಸಿಕ್ಸರ್ ಬಾರಿಸಿದ್ದು, ಅತಿ ಹೆಚ್ಚು ರನ್ ಸಾಧಕರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು.

ಶ್ರೇಯಸ್ ಅಯ್ಯರ್

ಕಳೆದ ಬಾರಿ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡಿದ್ದ ಶ್ರೇಯಸ್ ಅಯ್ಯರ್‌ ಅವರು ಈ ಬಾರಿ ಪಂಜಾಬ್ ಕಿಂಗ್ಸ್ ಪರ ಬ್ಯಾಟ್ ಮಾಡುತ್ತಿದ್ದಾರೆ. ಅಲ್ಲದೆ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ವೇಳೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಜವಾಬ್ದಾರಿ ಹಾಗೂ ನಾಯಕತ್ವವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಇವರು ಆಡಿದ 2 ಪಂದ್ಯಗಳಲ್ಲಿ 206ರ ಸ್ಟ್ರೈಕ್‌ ರೇಟ್‌ನಲ್ಲಿ 149 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 2 ಅರ್ಧಶತಕಗಳು ಸೇರಿವೆ.

Shreyas Iyer Sai Sudharsan and Ruturaj Gaikwad Lead Indian Contenders for IPL 2025 Orange Cap

ರುತುರಾಜ್ ಗಾಯಕ್ವಾಡ್

ರುತುರಾಜ್ ಗಾಯಕ್ವಾಡ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ 116 ರನ್‌ ಸಿಡಿಸಿದ್ದಾರೆ. ಈ ವೇಳೆ 2 ಅರ್ಧಶತಕ ಬಾರಿಸಿದ್ದಾರೆ. ಈ ವೇಳೆ ಸಿಎಸ್‌ಕೆ ಪರ ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರುತುರಾಜ್‌ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

Story first published: Wednesday, April 2, 2025, 20:35 [IST]
Other articles published on Apr 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+