ಟೀಮ್ ಇಂಡಿಯಾ ಮತ್ತೊಂದು ಏಕದಿನ ಸರಣಿಗೆ ಸಿದ್ಧತೆ ನಡೆಸಿದೆ. ಈ ಸರಣಿಗೂ ಮುನ್ನ ದೇಶೀಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಟಾರ್ ಅಟಗಾರರು ಸ್ಥಿರ ಪ್ರದರ್ಶನ ನೀಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಸೇರಲು ಸ್ಟಾರ್ ಆಟಗಾರರು ಸಿದ್ಧರಾಗಿದ್ದಾರೆ. ಇದೇ ಸರಣಿಯ ಮೂಲಕ ಭಾರತ ತಂಡಕ್ಕೆ ಕಂ ಬ್ಯಾಕ್ ಮಾಡಲು ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಗಾಯಕ್ಕೆ ತುತ್ತಾಗಿದ್ದರು. ಇವರು ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವಲ್ಲಿ ಸಫಲರಾಗಿದ್ದರು. ಇದೇ ವೇಳೆ ಇವರಿಗೆ ಗಾಯವಾಗಿದ್ದು, ಅವರು ತಕ್ಷಣ ಮೈದಾನದಿಂದ ಹೊರ ನಡೆದರು. ಇವರನ್ನು ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಆಗ ಇವರ ದೇಹದಲ್ಲಿ ಆಂತರಿಕ ರಕ್ತಸ್ರಾವ ಆಗಿದ್ದರಿಂದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ.

ಶ್ರೇಯಸ್ ಅಯ್ಯರ್ ಗಾಯಕ್ಕೆ ತುತ್ತಾಗಿದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರ ಗುಳಿದಿದ್ದರು. ಆದರೆ ಈಗ ಅವರು ಗಾಯದಿಂದ ಚೇತರಿಸಿಕೊಂಡಿದ್ದು, ಮೈದಾನಕ್ಕೆ ಮರಳಲು ಪ್ಲ್ಯಾನ್ ಶನಿವಾರ ಮಹಾರಾಷ್ಟ್ರ ವಿರುದ್ಧ ಮುಂಬೈನಲ್ಲಿ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಅವರು ಲಭ್ಯರಾಗುವ ಸಾಧ್ಯತೆ ಇದ್ದು, ನಂತರ ಅವರ ಫಿಟ್ನೆಸ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ. ಮುಂದಿನ ಎರಡು ದಿನಗಳಲ್ಲಿ ಅವರು ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ಗೆ ತಮ್ಮ ಯೋಜನೆಗಳನ್ನು ತಿಳಿಸುವ ನಿರೀಕ್ಷೆಯಿದೆ.
ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಜನವರಿ 4 ಹಾಗೂ 5 ರಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿಯ ವೇಳೆ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ. ಇದಕ್ಕೂ ಮೊದಲು ನಡೆಯಲಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕೆ ಇಳಿದು ಅಬ್ಬರಿಸಲು ಶ್ರೇಯಸ್ ಅಯ್ಯರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಬೆಂಗಳೂರಿನ ಹೊರ ವಲಯದಲ್ಲಿರುವ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಶ್ರೇಯಸ್ ಅಯ್ಯರ್ ಈಗಾಗಲೇ ಅಭ್ಯಾಸ ನಡೆಸಿದ್ದಾರೆ. ಇವರು ಪುನರಾಗಮನಕ್ಕೆ ಬೇಕಾಗಿರುವ ತಯಾರಿಗಳನ್ನು ಇದೇ ವೇಳೆ ಮಾಡಿಕೊಳ್ಳುತ್ತಿದ್ದಾರೆ. ಇವರು ಭಾರತ ತಂಡವನ್ನು ಏಕದಿನ ಸರಣಿಯಲ್ಲಿ ಸೇರಿಕೊಳ್ಳುವ ಮುನ್ನ ಮುಂಬೈ ಪರ ಜ.3 ಹಾಗೂ ಜ.6 ರಂದು ವಿಜಯ್ ಹಜಾರೆ ಟ್ರೋಫಿಯ ಪಂದ್ಯಗಳನ್ನು ಆಡಲಿದ್ದಾರೆ. ಇವರು ಏಕದಿನ ಸರಣಿಯನ್ನು ಆಡಲು ಫಿಟ್ ಆಗಿದ್ದಾರಾ ಎಂಬುದನ್ನು ಇದೇ ವೇಳೆ ಪರಿಶೀಲನೆ ನಡೆಸಲಾಗುತ್ತದೆ.