Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shreyas Iyer: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಶ್ರೇಯಸ್‌ ಅಯ್ಯರ್‌

ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ತಮ್ಮ ಗಾಯದ ಬಗ್ಗೆ ಸ್ವತಃ ತಾವೇ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಸಾಮಾಜಿಕ ತಾಣದಲ್ಲಿ ಒಂದು ಪೋಸ್ಟ್‌ ಮಾಡಿರುವ ಶ್ರೇಯಸ್ ಅಯ್ಯರ್‌ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಶ್ರೇಯಸ್‌ ಗುರುವಾರ ಮಾಡಿದ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಸ್ಥಿತಿಯ ಬಗ್ಗೆಯೂ ಹೇಳಿದ್ದಾರೆ. ಶ್ರೇಯಸ್‌ ಅಯ್ಯರ್ ಸದ್ಯ ಸಿಡ್ನಿ ಆಸ್ಪತ್ರೆಯಲ್ಲಿ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಶ್ರೇಯಸ್‌ ಅಯ್ಯರ್ ಮಾಡಿದ ಪೋಸ್ಟ್‌ನಲ್ಲಿ, "ನಾನು ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿರುವೆ. ಅಭಿಮಾನಿಗಳು ನೀಡಿದ ಪ್ರೀತಿ ಹಾಗೂ ಪ್ರಾರ್ಥನೆಗೆ ಧನ್ಯವಾದಗಳು. ಅಭಿಮಾನಿಗಳ ನನ್ನ ಮೇಲೆ ಇಟ್ಟ ಪ್ರೀತಿ ನನಗೆ ಹೆಚ್ಚಿನದ್ದಾಗಿದೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದಿದ್ದಾರೆ.

Shreyas Iyer Shares Health Update After Injury Indian Vice-Captain Thanks Fans

ಸಿಡ್ನಿ ಮೈದಾನದಲ್ಲಿ ಅಕ್ಟೋಬರ್ 28 ರಂದು ನಡೆದಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯದಲ್ಲಿ ಶ್ರೇಯಸ್‌ ಗಾಯಕ್ಕೆ ತುತ್ತಾಗಿದ್ದರು. ಇವರು ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್‌ ಕ್ಯಾರಿ ನೀಡಿದ ಕ್ಯಾಚ್‌ ಪಡೆದು ಗಾಯಕ್ಕೆ ತುತ್ತಾಗಿದ್ದರು. ತಕ್ಷಣವೇ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆಗ ಅವರನ್ನು ಸ್ಕ್ಯಾನ್‌ಗೆ ಒಳಪಡಿಸಿದಾಗ ದೇಹದಲ್ಲಿ ಆಂತರಿಕ ರಕ್ತ ಸ್ರಾವ ಆದ ಬಗ್ಗೆ ಮಾಹಿತಿ ಸಿಕ್ಕಿತ್ತು. ಇವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಯಿತು.

ಮೈದಾನಕ್ಕೆ ಇಳಿಯುವುದು ಯಾವಾಗ?

ಸಿಡ್ನಿಯಲ್ಲಿ ಇವರಿಗೆ ಶಸ್ತ್ರ ಚಿಕಿತ್ಸೆ ಸಹ ನಡೆಸಲಾಯಿತು. ಅಲ್ಲದೆ ಬಿಸಿಸಿಐ ವೈದ್ಯಕಿಯ ತಂಡ ಇವರ ಆರೋಗ್ಯದ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದೆ. ಇನ್ನು ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕೆ ಮರಳಲು ದಿನಗಳೇ ಬೇಕಾಗುತ್ತವೆ. ಇವರು ಯಾವಾಗ ಮೈದಾನಕ್ಕೆ ಇಳಿಯಬಹುದು ಎಂದು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ಶ್ರೇಯಸ್ (31) ಕನಿಷ್ಠ ಒಂದು ವಾರ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ.

ಶ್ರೇಯಸ್ ಅಯ್ಯರ್‌ ಇನ್ನು ಕೆಲವು ದಿನಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಇರಲಿದ್ದಾರೆ. ಸ್ಕ್ಯಾನಿಂಗ್‌ನಲ್ಲಿ ಅವರ ದೇಹದಲ್ಲಿ ಆಂತರಿಕ ಗಾಯವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಬಿಸಿಸಿಐ ಸೋಮವಾರ ಮಾಹಿತಿಯನ್ನು ನೀಡಿತ್ತು. ಇನ್ನು ಬಿಸಿಸಿಐ ವೈದ್ಯಕೀಯ ತಂಡ, ಸಿಡ್ನಿ ತಜ್ಞ ವೈದ್ಯರೊಂದಿಗೆ ಸಮಾಲೋಚಿಸಿ ನಡೆಸುತ್ತಿದೆ. ಶ್ರೇಯಸ್ ಅಯ್ಯರ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಡೌಟ್.

Story first published: Thursday, October 30, 2025, 14:03 [IST]
Other articles published on Oct 30, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+