ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ
ಟೀಮ್ ಇಂಡಿಯಾ ಸದ್ಯ ಏಷ್ಯಾ ಕಪ್ ಟಿ20 ಟೂರ್ನಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಭಾರತ ತಂಡ ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಮಧ್ಯೆ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧ ಭಾರತ "ಎ" ತಂಡ ಕಾದಾಟ ನಡೆಸಲಿದೆ. ಈ ಸರಣಿಗಾಗಿ ಭಾರತೀಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ "ಎ" ವಿರುದ್ಧ 2 ಅನಧಿಕೃತ ಏಕದಿನ ಪಂದ್ಯ ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಅಭಿಷೇಕ್ ಶರ್ಮಾ ಅವರಿಗೆ ಭಾರತ "ಎ" ತಂಡದಲ್ಲಿ ಸ್ಥಾನ ನೀಡಲಾಗಿದೆ. ಉಳಿದಂತೆ ತಿಲಕ್ ವರ್ಮಾ ಮತ್ತು ಅರ್ಷದೀಪ್ ಸಿಂಗ್ ಅವರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಭಾರತ "ಎ" ತಂಡದಲ್ಲಿ ರಿಯಾನ್ ಪರಾಗ್, ಆಯುಷ್ ಬಡೋನಿ, ರವಿ ಬಿಷ್ಣೋಯ್ ಮತ್ತು ಅಭಿಷೇಕ್ ಪೊರೆಲ್ ಅವರನ್ನು ಸಹ ಸೇರಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯಾ ಎ ವಿರುದ್ಧದ ಮೂರನೇ ಏಕದಿನ ಪಂದ್ಯ ಅ.3 ಹಾಗೂ ನಾಲ್ಕನೇ ಪಂದ್ಯ ಅ.5 ರಂದು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿವೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಅವರು ತಂಡಕ್ಕೆ ಮರಳಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇವರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರಿಗೆ ಭಾರತ "ಎ" ತಂಡದ ನಾಯಕರನ್ನಾಗಿ ಮಾಡಲಾಗಿದೆ.
ಆಸ್ಟ್ರೇಲಿಯಾ ಎ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತೀಯ ಎ ತಂಡ:
ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬಡೋನಿ, ಸೂರ್ಯಾಂಶ್ ಶೆಡ್ಜ್, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್ನೀತ್ ಸಿಂಗ್, ಯುಧ್ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಸಿಮರ್ಜೀತ್ ಸಿಂಗ್.
ಆಸ್ಟ್ರೇಲಿಯಾ ಎ ವಿರುದ್ಧದ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಕ್ಕೆ ಭಾರತ ಎ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರರಾಜ್ ನಿಗಮ್, ನಿಶಾಂತ್ ಸಿಂಧು, ರವಿಶ್ದ್ಪಂತ್ ಸಿಂಗ್, ಗುರ್ಜದ್ ಪಂಥ್ ಸಿಂಗ್ ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications