KKR vs GT IPL 2025: ಗುಜರಾತ್ ಗೆಲುವಿನಲ್ಲಿ ಮಿಂಚಿದ ಗಿಲ್, ಕನ್ನಡಿಗ ಪ್ರಸಿದ್ಧ ಕೃಷ್ಣ: ಕೆಕೆಆರ್‌ಗೆ 39 ರನ್ ಸೋಲು
ಭರವಸೆಯ ಬೌಲರ್ ಪ್ರಸಿದ್ಧ ಕೃಷ್ಣಾ ಬಿಗುವಿನ ದಾಳಿ ಹಾಗೂ ನಾಯಕ ಶುಭಮನ್ ಗಿಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ತಂಡ 18ನೇ ಆವೃತ್ತಿಯ ಐಪಿಎಲ್‌ನ 39ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 39 ರನ್‌ಗಳಿಂದ ಮಣಿಸಿ ಅಬ್ಬರಿಸಿತು. ಅಲ್ಲದೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾವನ್ನು ಭದ್ರ ಪಡಿಸಿಕೊಂಡಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 159 ರನ್ ಸೇರಿಸಿ ಸೋಲು ಕಂಡಿತು. ಈ ಸೋಲಿನೊಂದಿಗೆ ಕೆಕೆಆರ್ ಟೂರ್ನಿಯಲ್ಲಿ 5ನೇ ಸೋಲು ಕಂಡಿತು. ಗುಜರಾತ್ ಆಡಿದ 8 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿ, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ.

ಕಳಪೆ ಆರಂಭ
ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭ ಕಳಪೆಯಾಗಿತ್ತು. ಈ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಆಡುವ ಅವಕಾಶವನ್ನು ಪಡೆದ ರಹಮತುಲ್ಲಾ ಗುರ್ಬಾಜ್ ನಿರಾಸೆ ಅನುಭವಿಸಿದರು. ಇವರಾದ ಬಳಿಕ ಆರಂಭಿಕ ಸುನಿಲ್ ನರೈನ್, ನಾಯಕ ಅಜಿಂಕ್ಯ ರಹಾನೆ ಜೊತೆಗೂಡಿ ಉತ್ತಮ ಜೊತೆಯಾಟದ ಕಾಣಿಕೆ ಸೂಚನೆ ನೀಡಿದರು. ಆದರೆ ಇವರ ಆಟ 17 ರನ್‌ಗಳಿಗೆ ಔಟ್ ಆದರು. ಅಂತಿಮವಾಗಿ ಪವರ್ ಪ್ಲೇನಲ್‌ನಲ್ಲಿ ಕೆಕೆಅರ್ 2 ವಿಕೆಟ್ ನಷ್ಟಕ್ಕೆ 45 ರನ್ ಸಿಡಿಸಿತು.
ವೆಂಕಟೇಶ್ ಅಯ್ಯರ್ ಅವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ವಿರುದ್ಧವಾಗಿ ಬ್ಯಾಟ್ ಮಾಡಿದರು. ಒತ್ತಡದಲ್ಲಿದ್ದ ತಂಡವನ್ನು ನಡವಿನಲ್ಲಿ ಬಿಟ್ಟು ಇವರು 14 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಏಕಾಂಗಿ ಹೋರಾಟ ನಡೆಸಿದ್ದ ಅಜಿಂಕ್ಯ ರಹಾನೆ 36 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ನೆರವಿನಿಂದ 50 ರನ್ ಸಿಡಿಸಿ ಔಟ್ ಆದರು. ಆಂಡ್ರೆ ರಸೆಲ್ 21 ಹಾಗೂ ರಮಣದೀಪ್ ಸಿಂಗ್ 1 ರನ್ ಬಾರಿಸಿ ಔಟ್ ಆದರು.

ಕೋಲ್ಕತ್ತಾ ತಂಡದ ಸ್ಟಾರ್ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ತವರಿನಲ್ಲಿ ಕೆಕೆಆರ್ ಮತ್ತೊಂದು ಸೋಲು ಕಂಡಿತು. ಗುಜರಾತ್ ಟೈಟನ್ಸ್ ಪರ ಪ್ರಸಿದ್ಧ ಕೃಷ್ಣ ಹಾಗೂ ರಶೀದ್ ಖಾನ್ ತಲಾ ಎರಡು ವಿಕೆಟ್ ಪಡೆದು ಗೆಲುವಿನಲ್ಲಿ ಮಿಂಚಿದರು.
ಆರಂಭಿಕರಿಂದ ಶತಕದ ಜೊತೆಯಾಟ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಶುಭ್‌ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಕೆಕೆಆರ್ ಬೌಲರ್‌ಗಳನ್ನು ಕಾಡಿದರು, ಈ ಜೋಡಿ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿತು. ಕೆಕೆಆರ್ ಇನಿಂಗ್ಸ್‌ನ 13ನೇ ಓವರ್‌ನಲ್ಲಿ ಮೊದಲ ಯಶ ಕಂಡಿತು. ಆದರೆ ಆಗ ಜಿಟಿ ತಂಡ 114 ರನ್ ಸೇರಿಸಿತ್ತು.

ಆರಂಭಿಕರಾದ ಸಾಯಿ ಸುದರ್ಶನ್ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದರು. ಇವರು 36 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ ಸಹಾಯದಿಂದ 52 ರನ್ ಸಿಡಿಸಿ ಔಟ್ ಆದರು. ಇನ್ನು ಎರಡನೇ ವಿಕೆಟ್‌ಗೆ ಗಿಲ್ ಹಾಗೂ ಜೋಸ್ ಬಟ್ಲರ್ ಸಹ ಅರ್ಧಶತಕದ ಜೊತೆಯಾಟವನ್ನು ನೀಡಿತು. ಇನ್ನು ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕಲು ವೈಭವ್ ಆರೋರ್ ಯಶಸ್ವಿಯಾದರು. ಶುಭಮನ್ ಗಿಲ್ 55 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸರ್ ಸಹಾಯದಿಂದ 90 ರನ್ ಸಿಡಿಸಿ ಔಟ್ ಆದರು.
ರಾಹುಲ್ ತೆವಾಟಿಯಾ ನಿರಾಸೆ ಅನುಭವಿಸಿದರು. ಜೋಸ್ ಬಟ್ಲರ್ 23 ಎಸೆತಗಳಲ್ಲಿ 41 ರನ್ ಸಿಡಿಸಿದರೆ, ಶಾರುಖ್ ಖಾನ್ ಅಜೇಯ 11 ರನ್ ಸಿಡಿಸಿ ತಂಡದ ಮೊತ್ತ ಹಿಗ್ಗಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications