ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ ಶುಭ್ಮನ್ ಗಿಲ್‌: ಭಾರತದ ಪ್ರಯೋಗ ಫಲ ನೀಡುತ್ತಾ?

ಗುರುವಾರ (ನ.23) ಆರಂಭಗೊಳ್ಳಲಿರುವ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಯುವ ಭರವಸೆಯ ಆಟಗಾರ ಶುಭ್ಮನ್ ಗಿಲ್‌ಗೆ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ನೀಡಲಾಗುತ್ತದೆ ಎಂದು ವರದಿಯಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಗಿಲ್‌ರನ್ನ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ಟೀಂ ಇಂಡಿಯಾ ಆಡಳಿತ ಮಂಡಳಿ ಮುಂದಾಗುವ ಸಾಧ್ಯತೆ ಹೆಚ್ಚಿದೆ.

ಮೊದಲೆರಡು ಪಂದ್ಯಗಳಲ್ಲಿ ಮೊದಲ ಪಂದ್ಯವು ನ.23ರಿಂದ ನ.29 ರವರೆಗೆ ಕಾನ್ಪುರದಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯವು ಡಿಸೆಂಬರ್ 3ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್‌ನಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಕಣಕ್ಕಿಳಿಯುವ ಶುಭ್ಮನ್ ಗಿಲ್‌ ಆಕ್ರಮಣಾಕಾರಿ ಬ್ಯಾಟಿಂಗ್ ಪ್ರದರ್ಶಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಟೆಸ್ಟ್‌ನಲ್ಲಿ ಇವರನ್ನ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಸುವ ಯೋಜನೆ ನಡೆಯುತ್ತಿದೆ. ಏಕೆಂದರೆ ಈಗಾಗಲೇ ಆರಂಭಿಕರಾಗಿ ಅನೇಕ ಆಯ್ಕೆಗಳಿದ್ದು, ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಕಠಿಣ ಸ್ಪರ್ಧೆ ಎದುರಿಸುತ್ತಿದ್ದಾರೆ.

ಕೊಹ್ಲಿ ಅನುಪಸ್ಥಿತಿ, ರಹಾನೆ ಹೆಗಲೇರಿದ ಜವಾಬ್ದಾರಿ

ಕೊಹ್ಲಿ ಅನುಪಸ್ಥಿತಿ, ರಹಾನೆ ಹೆಗಲೇರಿದ ಜವಾಬ್ದಾರಿ

ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದಲೂ ಹೊರಗುಳಿದಿರುವ ವಿರಾಟ್ ಕೊಹ್ಲಿ ಮೊದಲ ಟೆಸ್ಟ್‌ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಹೆಗಲೇರಿದೆ. ಸದ್ಯ ರಹಾನೆ ವೈಯಕ್ತಿಕ ಫಾರ್ಮ್ ಕೊರತೆ ಎದುರಿಸುತ್ತಿದ್ದು, ಉಪನಾಯಕ ಎಂಬ ಹೆಸರಿನಲ್ಲಿ ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಸ್ಥಾನ ಪಡೆಯುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ.

ಕನ್ನಡಿಗರಿಬ್ಬರಿಂದ ಇನ್ನಿಂಗ್ಸ್‌ ಶುರು?

ಕನ್ನಡಿಗರಿಬ್ಬರಿಂದ ಇನ್ನಿಂಗ್ಸ್‌ ಶುರು?

ಟಿ20 ಸರಣಿಯಲ್ಲಿ ಕಿವೀಸ್ ತಂಡವನ್ನ ವೈಟ್ ವಾಶ್ ಮಾಡಿದ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಬಯಸಿದ್ದಾರೆ. ಹೀಗಾಗಿ ಅವರು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯುವುದಿಲ್ಲ, ದಕ್ಷಿಣ ಆಫ್ರಿಕಾ ವಿರುದ್ಧದ ಪ್ರವಾಸಕ್ಕೆ ತಂಡವನ್ನ ಸೇರಿಕೊಳ್ಳಲಿದ್ದಾರೆ.

ಹೀಗಾಗಿ ಕೆ.ಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯುವ ಜೊತೆಗೆ ಮಯಾಂಕ್ ಅಗರ್ವಾಲ್ ಕೂಡ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಈ ಮೂಲಕ ಕನ್ನಡಿಗರಿಬ್ಬರು ಬಹಳ ಕಾಲದ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಶುರು ಮಾಡಲಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಮೊದಲನೇ ಟೆಸ್ಟ್‌ನಲ್ಲಿ ಸ್ಥಾನ ಪಡೆಯಲು ಈ ಇಬ್ಬರ ನಡುವೆ ಪೈಪೋಟಿ

ಶುಭ್ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡುವುದಕ್ಕೆ ಅಪಸ್ವರ?

ಶುಭ್ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡುವುದಕ್ಕೆ ಅಪಸ್ವರ?

ಆಕ್ರಮಣಾಕಾರಿ ಓಪನಿಂಗ್ ಬ್ಯಾಟ್ಸ್‌ಮನ್ ಆದ ಯುವ ಆಟಗಾರ ಶುಭ್ಮನ್ ಗಿಲ್ ದ್ರಾವಿಡ್‌ ಗರಡಿಯಿಂದ ಬಂದಂತಹ ಪ್ರತಿಭೆ. ಅಂಡರ್-19 ತಂಡದ ಮೂಲಕ ತಮ್ಮ ಚಾಪನ್ನ ಮೂಡಿಸಿ ಐಪಿಎಲ್‌ಗೆ ಕಾಲಿಟ್ಟ ಗಿಲ್‌ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.

ಆದರೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆತನನ್ನ ಮಧ್ಯಮ ಕ್ರಮಾಂಕದಲ್ಲಿ ಆಡುವಂತೆ ಮನವೊಲಿಸಲಾಗಿದ್ದು, ಇದು ಉತ್ತಮ ಆಯ್ಕೆಯಾಗಿಲ್ಲ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಗಿಲ್‌ರನ್ನ ಆಡಿಸುವುದು ಕೆಟ್ಟ ಯೋಚನೆಯಲ್ಲ ಎಂದು ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ಜತಿನ್ ಪರಾಂಜಪೆ ಹೇಳಿದ್ದಾರೆ.

''ತಂಡದ ಆಯ್ಕೆಯಲ್ಲಿ ಯಾವಾಗಲೂ ಒಂದೇ ರೀತಿಯಲ್ಲಿ ಇರುವುದು ಸಹಾಯ ಮಾಡುವುದಿಲ್ಲ ಎಂದು ನಾನು ಯಾವಾಗಲೂ ನಂಬುತ್ತೇನೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಶುಭ್‌ಮಾನ್ ಆಡುವುದು ತಂಡಕ್ಕೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ನಿರ್ದಿಷ್ಟ ಪ್ರಮಾಣದ ಫ್ಲೆಕ್ಸಿಬಲಿಟಿ ಯಾವಾಗಲೂ ಸಹಾಯ ಮಾಡುತ್ತದೆ'' ಎಂದು ಪರಾಂಜಪೆ ಹೇಳಿದ್ದಾರೆ.

ಭಾರತ ತಂಡದಲ್ಲಿ ಆತ ಇನ್ನೂ ಇರುವುದು ಆತನ ಅದೃಷ್ಟ ಎಂದ ಗೌತಮ್ ಗಂಭೀರ್

ಆಡಮ್ ಝಂಪಾ ತಮ್ಮ ಹ್ಯಾಟ್ರಿಕ್ ತಪ್ಪಿಸಿದ್ದಕ್ಕೆ ಕಾಲೆಳದದ್ದು ಹೀಗೆ | Oneindia Kannada
ಪ್ರಮುಖ ಆಟಗಾರರಿಗೆ ವಿಶ್ರಾಂತಿ ಸಿಕ್ಕಿದೆ!

ಪ್ರಮುಖ ಆಟಗಾರರಿಗೆ ವಿಶ್ರಾಂತಿ ಸಿಕ್ಕಿದೆ!

ಭಾರತದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಶಾರ್ದೂಲ್ ಠಾಕೂರ್ ವಿಶ್ರಾಂತಿಗಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರ ಸ್ಥಾನವನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಯಾರು ತುಂಬಲಿದ್ದಾರೆ ಎಂಬ ಕುತೂಹಲವು ಎದುರಿಗಿದೆ. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಹೇಗೆ ಬ್ಯಾಟ್ ಬೀಸಬಲ್ಲರು ಎಂಬ ಪ್ರಶ್ನೆಯು ಮೂಡಿದೆ.

Story first published: Tuesday, November 23, 2021, 12:56 [IST]
Other articles published on Nov 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X