Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಕದಿನ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ Shubman Gill

ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ ನಡುವಣ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ, ಜಯದಲ್ಲಿ ಮಿಂಚಿದರು. ಅಲ್ಲದೆ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಧರ್ಮಶಾಲಾದಲ್ಲಿ ನಡೆದ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತು. ಪರಿಣಾಮ ಓವರ್‌ಗಳಿಗೆ ಕತ್ತರಿ ಬಿದ್ದಿತು. 50 ಓವರ್‌ಗಳ ಪಂದ್ಯವನ್ನು 25 ಓವರ್‌ಗಳಿಗೆ ಇಳಿಸಲಾಯಿತು. ಅಫ್ಘಾನಿಸ್ತಾನ ನೀಡಿದ್ದ 195 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾ 22.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಮುಟ್ಟಿ ಬೀಗಿತು. ಈ ಪಂದ್ಯದಲ್ಲಿ, ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಅಜೇಯ 84 ರನ್‌ಗಳನ್ನು ಬಾರಿಸಿ ಮಿಂಚಿದರು. ಈ ಜವಾಬ್ದಾರಿಯುತ ಆಟಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಹ ನೀಡಲಾಯಿತು. ಇದೇ ವೇಳೆ ಶುಭಮನ್‌ ಗಿಲ್ ದಾಖಲೆಯನ್ನು ಬರೆದರು.

Shubman Gill

ಟೀಮ್ ಇಂಡಿಯಾ ನಾಯಕ ಶುಭಮನ್‌ ಗಿಲ್ ಏಕದಿನ ಕ್ರಿಕೆಟ್‌ನಲ್ಲ 3000 ರನ್‌ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದರು. ಕಡಿಮೆ ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಗಿಲ್ ಪಾಲಾಯಿತು.

ಕಡಿಮೆ ಇನಿಂಗ್ಸ್‌ನಲ್ಲಿ 3 ಸಾವಿರ ರನ್

ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ನೀಡಿದ ಅಮೋಘ ಪ್ರದರ್ಶನವನ್ನು ಗಿಲ್‌, ಏಕದಿನ ಪಂದ್ಯಗಳಲ್ಲೂ ಮುಂದುವರೆಸಿದರು. ಇವರು ಮೊದಲ ಪಂದ್ಯದಲ್ಲಿ 66 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 84 ರನ್ ಗಳಿಸಿದರು. ಈ ಪಂದ್ಯದಲ್ಲಿ ಗಿಲ್‌ 47 ರನ್‌ ಬಾರಿಸುತ್ತಿದ್ದಂತೆ ಏಕದಿನ ಕ್ರಿಕೆಟ್‌ನಲ್ಲಿ 3000 ರನ್‌ ಪೂರೈಸಿದ ದಾಖಲೆಯನ್ನು ಬರೆದರು. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಕಡಿಮೆ ಇನಿಂಗ್ಸ್‌ನಲ್ಲಿ 3000 ರನ್ ಪೂರೈಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

ಏಕದಿನ ಫಾರ್ಮೆಟ್‌ನಲ್ಲಿ ಕಡಿಮೆ ಇನಿಂಗ್ಸ್‌ನಲ್ಲಿ 3 ಸಾವಿರ ರನ್‌ ಕಲೆ ಹಾಕಿದ ಹೆಗ್ಗಳಿಕೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಶಿಮ್ ಆಮ್ಲಾ ಅವರಿಗೆ ಸಲ್ಲುತ್ತದೆ. ಇವರು ಕೇವಲ 57 ಇನ್ನಿಂಗ್ಸ್‌ಗಳಲ್ಲಿ 3000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 3,000 ರನ್‌ ಬಾರಿಸಿದ ಆಟಗಾರರು

ಹಶೀಮ್ ಆಮ್ಲಾ (ದಕ್ಷಿಣ ಆಫ್ರಿಕಾ), ಇನ್ನಿಂಗ್ಸ್‌
ಶುಭಮನ್ ಗಿಲ್ (ಭಾರತ), 62 ಇನ್ನಿಂಗ್ಸ್‌
ಶೈ ಹೋಪ್, (ವೆಸ್ಟ್‌ ಇಂಡೀಸ್), 67 ಇನ್ನಿಂಗ್ಸ್‌
ಫಖರ್ ಜಮಾನ್, (ಪಾಕಿಸ್ತಾನ), 67 ಇನ್ನಿಂಗ್ಸ್‌
ಇಮಾಮ್-ಉಲ್-ಹಕ್(ಪಾಕಿಸ್ತಾನ), 67 ಇನ್ನಿಂಗ್ಸ್‌

Story first published: Sunday, June 14, 2026, 5:40 [IST]
Other articles published on Jun 14, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+