Shubman Gill: ಧೋನಿ, ವಿರಾಟ್ ಕೊಹ್ಲಿ ದಾಖಲೆ ಅಳಿಸಿದ ಶುಭಮನ್ ಗಿಲ್
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಜೂನ್ 6 ರಂದು ನ್ಯೂ ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ಮೊದಲ ದಿನದ ಅಂತ್ಯದ ವೇಳೆಗೆ ಮೂರು ವಿಕೆಟ್ ನಷ್ಟಕ್ಕೆ 368 ರನ್ ಗಳಿಸಿದೆ. ಈ ವೇಳೆ ಭಾರತದ ನಾಯಕ ಶುಭಮನ್ ಗಿಲ್ ಅಜೇಯರಾಗಿ ಶತಕ ಸಿಡಿಸಿದ್ದಾರೆ. ಈ ಶತಕದ ಮೂಲಕ ಶುಭಮನ್ ಗಿಲ್ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.
ಶುಭಮನ್ ಗಿಲ್ ಈಗ ನಾಯಕನಾಗಿ ಕಡಿಮೆ ಸಮಯದಲ್ಲಿ 1,000 ಟೆಸ್ಟ್ ರನ್‌ಗಳನ್ನು ತಲುಪಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಕೇವಲ 15 ಇನಿಂಗ್ಸ್‌ಗಳಲ್ಲಿ ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಗಿಲ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ವಿರಾಟ್ ನಾಯಕರಾಗಿ 18 ಇನಿಂಗ್ಸ್‌ಗಳಲ್ಲಿ ಸಾವಿರ ರನ್ ಪೂರೈಸಿದ್ದರು. ನಾಯಕರಾಗಿ ವೇಗವಾಗಿ ಸಾವಿರ ರನ್ ಪೂರೈಸಿದ ಹೆಗ್ಗಳಿಕೆ ಸುನಿಲ್ ಗವಾಸ್ಕರ್ ಅವರಿಗೆ ಸಲ್ಲುತ್ತದೆ. ಇವರು 14 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ.

ಶುಭಮನ್ ಗಿಲ್ ಈಗ ಭಾರತ ತಂಡದ ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಗಳಿಸಿದ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಶುಭಮನ್ ಗಿಲ್ ನಾಯಕರಾಗಿ ಆರನೇ ಶತಕ ಸಿಡಿಸಿದರು. ಎಂಎಸ್ ಧೋನಿ, ಸೌರವ್ ಗಂಗೂಲಿ ಮತ್ತು ನವಾಬ್ ಪಟೌಡಿ ನಾಯಕರಾಗಿ ಐದು ಶತಕ ಬಾರಿಸಿದ್ದರು. ಈಗ ಗಿಲ್ ಇವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ನಾಯಕರಾಗಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ಯಾರು?
ನಾಯಕರಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರಿಗೆ ಸಲ್ಲುತ್ತದೆ. ಇವರು 20 ಶತಕಗಳನ್ನು ಸಿಡಿಸಿದ್ದರು. ಸುನಿಲ್ ಗವಾಸ್ಕರ್ (11) ಎರಡನೇ ಸ್ಥಾನ, ಮೊಹಮ್ಮದ್ ಅಜರುದ್ದೀನ್ (9), ಮೂರನೇ ಸ್ಥಾನ, ಸಚಿನ್ ತೆಂಡೂಲ್ಕರ್ (7) ನಾಲ್ಕನೇ ಸ್ಥಾನ, ಶುಭಮನ್ ಗಿಲ್ (6) ಐದನೇ ಸ್ಥಾನದಲ್ಲಿದ್ದಾರೆ.
ಮೊದಲ ದಿನದ ಚಿತ್ರಣ
ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ಮೊದಲ ದಿನದ ಗೌರವಕ್ಕೆ ಪಾತ್ರವಾಗಿದೆ. ಆರಂಭಿಕ ಯಶಸ್ವಿ ಜೈಸ್ವಾಲ್ (24) ರನ್ ಕಲೆ ಹಾಕುವಲ್ಲಿ ವಿಫಲರಾದರು. ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ 11 ಬೌಂಡರಿ ಸಹಿತ ಶತಕ ಬಾರಿಸಿ ಮಿಂಚಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ 13 ಬೌಂಡರಿ ಸೇರಿಸಿದ್ದರಿಂದ 81 ರನ್ ಸಿಡಿಸಿದರು. ನಾಯಕ ಶುಭಮನ್ ಗಿಲ್ 11 ಬೌಂಡರಿ, 1 ಸಿಕ್ಸರ್ ಸೇರಿದಂತೆ ಅಜೇಯ 103 ರನ್ ಬಾರಿಸಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 2 ಬೌಂಡರಿ, 3 ಸಿಕ್ಸರ್ ಒಳಗೊಂಡಂತೆ ಅಜೇಯ 50 ರನ್ ಸಿಡಿಸಿದ್ದಾರೆ. ಅಂತಿಮವಾಗಿ ಭಾರತದ ದಿನದಾಟದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 368 ರನ್ ಕಲೆ ಹಾಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications