Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shubman Gill Records : ಶುಬ್ಮನ್ ಗಿಲ್ ದ್ವಿಶತಕ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗಿಲ್ ಮುರಿದ 5 ಪ್ರಮುಖ ದಾಖಲೆಗಳು

Shubman Gill Double Century: 5 records broken during Shubman Gills double century against New Zealand

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾ ಪರವಾಗಿ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ಪಾರಮ್ಯ ಮೆರೆದಿದ್ದು ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್. ಅಮೋಘ ಫಾರಮ್‌ನಲ್ಲಿರುವ ಗಿಲ್ ಈ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಬರೊಬ್ಬರಿ 350 ರನ್‌ಗಳ ಗುರಿ ನೀಡಿದೆ.

ಈ ಪಂದ್ಯದಲ್ಲಿ ಶುಬ್ಮನ್ ಗಿಲ್ 149 ಎಸೆತಗಳನ್ನು ಎದುರಿಸಿ ಬರೊಬ್ಬರಿ 208 ರನ್‌ಗಳನ್ನು ಗಳಿಸಿ ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ಈ ಭರ್ಜರಿ ಇನ್ನಿಂಗ್ಸ್‌ 19 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಈ ಮೂಲಕ ಚೊಚ್ಚಲ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಭರ್ಜರಿ ಇನ್ನಿಂಗ್ಸ್‌ನ ಜೊತೆಗೆ ಶುಬ್ಮನ್ ಗಿಲ್ ಹಲವು ದಾಖಲೆಗಳನ್ನು ಕೂಡ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ದಾಖಲೆಯ ದ್ವಿಶತಕದ ಸಂದರ್ಭದಲ್ಲಿ ಶುಬ್ಮನ್ ಗಿಲ್ ಮುರಿದ ಐದು ದಾಖಲೆಗಳ ಮಾಹಿತಿ ಇಲ್ಲಿದೆ.

ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ

ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ

ಕೆಲವೇ ವಾರಗಳ ಹಿಂದೆ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಇಶಾನ್ ಕಿಶನ್ ದ್ವಿಶತಕ ಸಿಡಿಸಿ ಈ ಸಾಧನೆ ಮಾಡಿದ ಕಿರಿಯ ಆಟಗಾರ ಎನಿಸಿಕೊಂಡಿದ್ದರು. 24 ವರ್ಷ 145 ದಿನಗಳಲ್ಲಿ ಇಶಾನ್ ಈ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಈ ಪಂದ್ಯದಲ್ಲಿ ಶುಬ್ಮನ್ ಗಿಲ್ ಮುರಿದಿದ್ದಾರೆ. ತಮ್ಮ 23 ವರ್ಷ 132ನೇ ದಿನದಲ್ಲಿ ಶುಬ್ಮನ್ ಗಿಲ್ ದ್ವಿಶತಕ ಸಿಡಿಸಿ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಸಚಿನ್ ದಾಖಲೆ ಮುರಿದ ಗಿಲ್

ಸಚಿನ್ ದಾಖಲೆ ಮುರಿದ ಗಿಲ್

ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆ ಶುಬ್ಮನ್ ಗಿಲ್ ಹೆಸರಿಗೆ ವರ್ಗಾವಣೆಯಾಗಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಸಚಿನ್ ಹೊಂದಿದ್ದರು. 2009ರಲ್ಲಿ ಸಚಿನ್ ತೆಂಡೂಲ್ಕರ್ 175 ರನ್‌ಗಳನ್ನು ಗಳಸಿದ್ದರು. ಇದೀಗ ಶುಬ್ಮನ್ ಗಿಲ್ ಈ ಕ್ರೀಡಾಂಗಣದಲ್ಲಿ 209ರನ್ ಬಾರಿಸಿ ಈ ದಾಖಲೆ ಮುರಿದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ವೇಗದ 1000 ರನ್

ಏಕದಿನ ಕ್ರಿಕೆಟ್‌ನಲ್ಲಿ ವೇಗದ 1000 ರನ್

ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರವಾಗಿ ಅತ್ಯಂತ ವೇಗವಾಗಿ 1000 ರನ್‌ಗಳಿಸಿದ ಆಟಗಾರ ಎಂಬ ದಾಖಲೆ ಕೂಡ ಶುಬ್ಮನ್ ಗಿಲ್ ಪಾಲಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ 24 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿ ಭಾರತದ ಪರವಾಗಿ ದಾಖಲೆ ಬರೆದಿದ್ದರು. ಶುಬ್ಮನ್ ಗಿಲ್ ಈ ಮೈಲಿಗಲ್ಲನ್ನು 19 ಇನ್ನಿಂಗ್ಸ್‌ಗಳಲ್ಲಿ ಸಾಧಿಸಿದ್ದಾರೆ. ಇನ್ನು ಒಟ್ಟಾರೆಯಾಗಿಯೂ ಈ ಪಟ್ಟಿಯಲ್ಲಿ ಗಿಲ್ 2ನೇ ಸ್ಥಾನವ್ನು ಪಡೆದುಕೊಂಡಿದ್ದು ಪಾಕಿಸ್ತಾನದ ಫಕರ್ ಜಮಾನ್ (18 ಇನ್ನಿಂಗ್ಸ್‌) ಮಾತ್ರವೇ ಮುಂದಿದ್ದಾರೆ.

ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಭಗ್ನ

ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಭಗ್ನ

ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಅಬ್ಬರದ ದ್ವಿಶತಕದೊಂದಿಗೆ ಶುಬ್ಮನ್ ಗಿಲ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ಪ್ರಮುಖ ದಾಖಲೆಯನ್ನು ಮುರಿದಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಮಾದರಿಯಲ್ಲಿ ಅತೀ ಹೆಚ್ಚು ರನ್‌ಗಳಿಸಿದ ದಾಖಲೆ ಕೂಡ ಈವರೆಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2003ರಲ್ಲಿ ಸಚಿನ್ ತೆಂಡೂಲ್ಕರ್ 186 ರನ್‌ಗಳಿಸಿ ಈ ದಾಖಲೆ ಹೊಂದಿದ್ದರು. ಆದರೆ ಹೈದರಾಬಾದ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಕಿವೀಸ್ ವಿರುದ್ಧ ಗಿಲ್ 208 ರನ್‌ಗಳನ್ನು ಗಳಿಸಿ ಈ ದಾಖಲೆ ಮುರಿದಿದ್ದಾರೆ.

ರೋಹಿತ್ ಶರ್ಮಾ ದಾಖಲೆ ಕೂಡ ಧ್ವಂಸ

ರೋಹಿತ್ ಶರ್ಮಾ ದಾಖಲೆ ಕೂಡ ಧ್ವಂಸ

ಇನ್ನು ತವರಿನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಈವರೆಗೆ ಟೀಮ್ ಇಂಡಿಯಾದ ಹಾಲಿ ನಾಯಕ ರೋಹಿತ್ ಶರ್ಮಾ ಹೊಂದಿದ್ದರು. ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಶರ್ಮಾ 26 ವರ್ಷ 186ನೇ ದಿನದಲ್ಲಿ ಈ ಸಾಧನೆ ಮಾಡಿದ್ದರು. ಈ ದಾಖಲೆಯನ್ನು ಶುಬ್ಮನ್ ಗಿಲ್ ಮುರಿದಿದ್ದು ಈಗಾಗಲೇ ತಿಳಿಸಿರುವಂತೆ ಗಿಲ್ 23 ವರ್ಷ 132 ದಿನದಲ್ಲಿ ಈ ಸಾಧನೆ ಮಾಡಿದ್ದಾರೆ.

Story first published: Wednesday, January 18, 2023, 19:07 [IST]
Other articles published on Jan 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+