Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shubman Gill: ಆಡಿಲೇಡ್‌ ಟೆಸ್ಟ್‌ನಲ್ಲೂ ಶುಭಮನ್‌ ಗಿಲ್ ಆಡುವುದು ಡೌಟ್? ಇಲ್ಲಿದೆ ಬಿಗ್ ಅಪ್‌ಡೇಟ್‌

ಬಾರ್ಡರ್‌ ಗವಾಸ್ಕರ್‌ ಸರಣಿಯ ಮೊದಲ ಪಂದ್ಯ ಪರ್ತ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಈ ವೇಳೆ ತಂಡದ ಸಂಘಟಿತ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಪಂದ್ಯದ ವೇಳೆ ತಂಡದಿಂದ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್‌ ಗಿಲ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ಇವರಿಬ್ಬರೂ ಎರಡನೇ ಟೆಸ್ಟ್‌ನಲ್ಲಿ ತಂಡವನ್ನು ಸೇರಿಕೊಳ್ಳಬಹುದು ಎಂದು ಅಂದಾಜಿಲಾಗಿತ್ತು.

ಆಡಿಲೇಡ್‌ನಲ್ಲಿ ಎರಡನೇ ಟೆಸ್ಟ್ ಡಿಸೆಂಬರ್‌ 6 ರಿಂದ 10ರ ವರೆಗೆ ನಡೆಯಲಿದೆ. ಈ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತೆ ತಂಡವನ್ನು ಸೇರಲಿದ್ದಾರೆ. ಆದರೆ ಶುಭಮನ್‌ ಗಿಲ್‌ ಇನ್ನು ಚೇತರಿಕೆ ಕಂಡಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಇವರು ಎರಡನೇ ಟೆಸ್ಟ್‌ ಪಂದ್ಯಕ್ಕೂ ಅಲಭ್ಯ ರಾಗುವ ಸಾಧ್ಯತೆ ಹೆಚ್ಚಾಗಿದೆ.

Shubman Gill Doubtful for Adelaide Test Rohit Sharma Returns to Lead India

ಗಿಲ್‌ ಗಾಯದ ಅಪ್‌ಡೇಟ್‌

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಶುಭಮನ್‌ ಗಿಲ್‌ ಗಾಯದಿಂದ ಚೇತರಿಸಿಕೊಳ್ಳಲು ಇನ್ನು ಅವರಿಗೆ ಎರಡು ವಾರಗಳ ವಿಶ್ರಾಂತಿಯ ಅವಶ್ಯಕತೆ ಇದೆ. ಇವರು ಅಭ್ಯಾಸದ ಪಂದ್ಯದ ವೇಳೆ ಹೆಬ್ಬರೆಳಿಗೆ ಗಾಯವನ್ನು ಮಾಡಿಕೊಂಡಿದ್ದರು. ಈ ಬಗ್ಗೆ ಮೊದಲ ಟೆಸ್ಟ್‌ಗೂ ಮುನ್ನ ಮಾತನಾಡಿದ್ದ ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ಅವರ ಗಾಯ ಸುಧಾರಿಸಿದರೆ ಮೊದಲ ಟೆಸ್ಟ್‌ನಲ್ಲಿ ಆಡಬಹುದು ಎಂದು ಸೂಚಿಸಿದ್ದರು. ಆದರೆ, ಗಾಯ ಗಂಭೀರವಾಗಿದ್ದರಿಂದ ಇವರು ಮೈದಾನ ಪ್ರವೇಶಿಸಿರಲಿಲ್ಲ.

ಇನ್ನು ಇದೇ 31 ರಿಂದ ಕ್ಯಾನ್‌ಬೆರಾದಲ್ಲಿ ನಡೆಯಲಿರುವ ಮನುಕಾ ಓವಲ್‌ ವಿರುದ್ಧದ ಡೇ ಆಂಡ್ ನೈಟ್ ಅಭ್ಯಾಸ ಪಂದ್ಯದಲ್ಲೂ ಶುಭಮನ್‌ ಗಿಲ್‌ ಆಡುವುದಿಲ್ಲ ಎಂದು ತಿಳಿದು ಬಂದಿದೆ. ಆಡಿಲೇಡ್‌ನಲ್ಲಿ ನಡೆಯಲಿರುವ ಪಿಂಕ್‌ ಬಾಲ್‌ ಟೆಸ್ಟ್‌ಗೆ ಪೂರಕವಾಗಿ ಈ ಅಭ್ಯಾಸ ಪಂದ್ಯವನ್ನು ಏರ್ಪಡಿಸಲಾಗಿದ್ದು, ಮಹತ್ವ ಪಡೆದಿದೆ. ಗಿಲ್ ಅವರಿಗೆ ವೈದ್ಯರು 10 ರಿಂದ 14 ದಿನಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಅವರು ಅಭ್ಯಾಸ ಪಂದ್ಯದಲ್ಲಿ ಆಡುವುದಿಲ್ಲ ಮತ್ತು ಅಡಿಲೇಡ್ ಟೆಸ್ಟ್‌ನಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

Shubman Gill Doubtful for Adelaide Test Rohit Sharma Returns to Lead India

ಗಿಲ್‌ ಸ್ಥಾನ ತುಂಬುವುದು ಯಾರು?

ಆಸ್ಟ್ರೇಲಿಯಾ ವಿರುದ್ಧ ಗಾಬಾದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶುಭಮನ್‌ ಗಿಲ್‌, ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ. ಆರಂಭದಲ್ಲಿ ಓಪನಿಂಗ್ ಮಾಡುತ್ತಿದ್ದ ಗಿಲ್, ಈಗ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಾರೆ. ಚೇತೇಶ್ವರ್ ಪೂಜಾರ ಅವರ ಬದಲಿಗೆ ಇವರು ಮೂರನೇ ಸ್ಥಾನದಲ್ಲಿ ಆಡಲಿದ್ದಾರೆ. ಹೀಗಾಗಿ ಇವರ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ತಂಡದಲ್ಲಿ ಸುಲಭವಾಗಿ ಸ್ಥಾಣ ಪಡೆಯುತ್ತಾರೆ. ಇವರು ಅಡಿಲೇಡ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Story first published: Wednesday, November 27, 2024, 12:46 [IST]
Other articles published on Nov 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+