Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2ನೇ ಟೆಸ್ಟ್‌ ಗಿಲ್‌ ಆಡುವುದು ಡೌಟ್‌: ಯಾರಿಗೆ ಸ್ಥಾನ? ಯಾರಿಗೆ ಪಟ್ಟ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್‌ ಗುವಾಹಟಿಯಲ್ಲಿ ನಡೆಯಲಿದೆ. ಈಗಾಗಲೇ ಕೋಲ್ಕತ್ತಾ ಟೆಸ್ಟ್‌ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ, ಎರಡನೇ ಟೆಸ್ಟ್‌ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ವೇಳೆ ಟೀಮ್ ಇಂಡಿಯಾಗೆ ಮತ್ತೊಂದು ಶಾಕ್‌ ಎದುರಾಗುವ ಸಾಧ್ಯತೆ ಇದೆ. ನಾಯಕ ಶುಭಮನ್‌ ಗಿಲ್‌ ಎರಡನೇ ಟೆಸ್ಟ್‌ನಲ್ಲಿ ಅಂಗಳಕ್ಕೆ ಇಳಿಯುವುದು ಡೌಟ್ ಎಂಬ ವರದಿಗಳು ಬರುತ್ತಿವೆ. ಒಂದು ವೇಳೆ ಹೀಗೆ ಆದಲ್ಲಿ ತಂಡವನ್ನು ಮುನ್ನಡೆಸುವುದು ಯಾರು? ಅವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಶುಭಮನ್‌ ಗಿಲ್ ಕತ್ತಿನ ಗಾಯಕ್ಕೆ ತುತ್ತಾದರು. ಬಳಿಕ ಸಹಾಯಕ ಸಿಬ್ಬಂದಿ ಮೈದಾನಕ್ಕೆ ಬಂದರು. ಗಾಯ ತೀವ್ರವಾದಗ ಅವರನ್ನು ಮೈದಾನದಿಂದ ಹೊರ ಕರೆದುಕೊಂಡು ಹೋಗಲಾಯಿತು. ಅಲ್ಲದೆ ಬಳಿಕ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಬಿಸಿಸಿಐ ವೈದ್ಯರ ಮೇಲ್ವಿಚಾರಣೆಯಲ್ಲಿ ಗಿಲ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ.

Shubman Gill Doubtful for Guwahati Test vs South Africa Who Will Captain amp amp Replace Him

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟೆಸ್ಟ್‌ ಪಂದ್ಯ ಗುವಾಹಟಿಯಲ್ಲಿ ನವೆಂಬರ್ 22 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಭಾರತ ಇನ್ನೇನು ಕೆಲವೇ ದಿನಗಳಲ್ಲಿ ಗುವಾಹಟಿ ತಲುಪಲಿದೆ. ಆದರೆ ಈ ಪಂದ್ಯದಲ್ಲಿ ಶುಭಮನ್‌ ಗಿಲ್ ಆಡುವುದು ಡೌಟ್ ಎಂದು ನಂಬಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಇನ್ನು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಎರಡನೇ ಟೆಸ್ಟ್‌ಗೆ ಕ್ಯಾಪ್ಟನ್ ಯಾರು?

ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ತಂಡವನ್ನ ಮುನ್ನಡೆಸಿದ್ದ ರಿಷಭ್‌ ಪಂತ್‌ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಬಹುದು. ಈ ಬಗ್ಗೆಯೂ ಇನ್ನು ಅಧಿಕೃತ ಮಾಹಿತಿ ಬರಬೇಕಿದೆ.

ಒಂದು ವೇಳೆ ಶುಭಮನ್‌ ಗಿಲ್‌ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಡೌಟ್ ಎನ್ನಲಾಗುತ್ತಿದೆ. ಇದೇ ವೇಳೆ ಶುಭಮನ್‌ ಗಿಲ್ ಅವರ ಸ್ಥಾನದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಸ್ಥಾನದ ಮೇಲೆ ಇಬ್ಬರು ಆಟಗಾರರು ಕಣ್ಣು ನೆಟ್ಟಿದ್ದಾರೆ. ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಕಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ಸಾಯಿ ಸುದರ್ಶನ್‌ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕೆ ಇಳಿಯಲು ಪ್ಲ್ಯಾನ್ ಮಾಡಿದ್ದಾರೆ. ಆದರೆ ಇವರಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಸಹ ಕಣ್ಣು ನೆಟ್ಟಿದ್ದಾರೆ.

ದೇವದತ್ ಪಡಿಕ್ಕಲ್ ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇವರು ಸಹ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಕನಸು ಕಾಣುತ್ತಿದ್ದಾರೆ. ಗುವಾಹಟಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನಿಜಕ್ಕು ಶುಭಮನ್‌ ಗಿಲ್‌ ಗಾಯದ ಕಾರಣ ಅಂಗಳಕ್ಕೆ ಇಳಿಯದೇ ಇದ್ದರೆ ತಂಡಕ್ಕೆ ದೊಡ್ಡ ಪೆಟ್ಟು ಬೀಳಲಿದೆ.

Story first published: Monday, November 17, 2025, 12:38 [IST]
Other articles published on Nov 17, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+