ಟಿ20 ವಿಶ್ವಕಪ್ ಸಂಭ್ರಮಾಚರಣೆ ಫೋಟೊದಲ್ಲಿ ಸಂಜು ಸ್ಯಾಮ್ಸನ್ ಔಟ್: ಇದರಲ್ಲಿ ಶುಭ್ಮನ್ ಗಿಲ್ ಕರಾಮತ್ತು ನಿಜವೇ?
ಅಹಮದಾಬಾದ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ ಜಯ ಸಾಧಿಸಿತು. ಈ ಮೂಲಕ ಚುಟುಕು ವಿಶ್ವಕಪ್ ಅತಿ ಹೆಚ್ಚು ಬಾರಿ ಗೆದ್ದ ದೇಶ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಂಡಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾರತ 96 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟಕೇರಿತು. ಇದೇ ವೇಳೆ ಹಲವು ಮಾಜಿ ಹಾಗೂ ಹಾಲಿ ಆಟಗಾರರು ಟೀಮ್ ಇಂಡಿಯಾದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್ ಸಹ ತಂಡಕ್ಕೆ ಅಭಿನಂದನೆ ತಿಳಿಸಿ ಒಂದು ಪೋಸ್ಟ್ ಹಾಕಿದ್ದರು. ಈಗ ಈ ಪೋಸ್ಟ್ ಸಖತ್ ಸದ್ದು ಮಾಡುತ್ತಿದೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇವರು ಟಿ20 ವಿಶ್ವಕಪ್‌ನ ಮಹತ್ವದ ಪಂದ್ಯದಲ್ಲಿ ತಂಡ ಸೇರಿ ಅಬ್ಬರಿಸಿದ್ದಾರೆ. ಸೂಪರ್ 8 ಹಂತದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97, ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 89, ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 89 ರನ್ ಸಿಡಿಸಿದ್ದ ಸಂಜು ಆರ್ಭಟಿಸಿದ್ದರು. ಸಂಜು ಸ್ಯಾಮ್ಸನ್ ಅವರ ಆಟಕ್ಕೆ ಸರಣಿ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತ್ತು.

ಶುಭಮನ್ ಗಿಲ್ ಅವರು ಸಂಜು ಸ್ಯಾಮ್ಸನ್ ಅವರನ್ನು ಏಷ್ಯಾ ಕಪ್ ಟಿ20 ಸರಣಿಯಲ್ಲಿ ರಿಪ್ಲೇಸ್ ಮಾಡಿದ್ದರು. ಆದರೆ ಕಳಪೆ ಪ್ರದರ್ಶನದ ಫಲವಾಗಿ ಗಿಲ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು.
ಗಿಲ್ ಪೋಸ್ಟ್‌ನಲ್ಲಿ ಏನಿದೆ?
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಶುಭ್ಮನ್ ಗಿಲ್ ಸಹ ತಂಡಕ್ಕೆ ಅಭಿನಂದಿಸಿದರು. ಅವರು ಬಳಸಿದ ಒಂದು ಚಿತ್ರ ಈಗ ಚರ್ಚೆಗೆ ಗ್ರಾಸವಾಗಿದೆ. ಶುಭ್ಮನ್ ಶುಭ ಕೋರಿದ್ದ ಚಿತ್ರದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಎಡಿಟ್ ಮಾಡಲಾಗಿದೆ ಎಂದು ಅಭಿಮಾನಿಗಳು ಗಂಭೀರ ಆರೋಪವನ್ನು ಮಾಡಿದ್ದಾರೆ.
ಟಿ20 ವಿಶ್ವಕಪ್‌ಗೂ ಮುನ್ನ ನಡೆದ ನ್ಯೂಜಿಲೆಂಡ್ ವಿರುದ್ಧ ಸರಣಿಯಲ್ಲೂ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದರು. ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಕ್ಕೆ ಗಿಲ್ ಅಸೂಯೆ ಪಟ್ಟಿದ್ದಾರೆ. ಇದೇ ಕಾರಣಕ್ಕಾಗಿ ಅಭಿನಂದನಾ ಪೋಸ್ಟ್‌ನಲ್ಲಿ ಸಂಜು ಚಿತ್ರವನ್ನು ತೆಗೆದುಹಾಕಲಾಗಿದೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ.
ಅಭಿಮಾನಿಗಳು ಸೂರ್ಯಕುಮಾರ್ ಯಾದವ್ ಮಾಡಿದ ಪೋಸ್ಟ್ ಹಾಗೂ ಶುಭಮನ್ ಗಿಲ್ ಮಾಡಿದ ಪೋಸ್ಟ್‌ನ್ನು ಹೋಲಿಕೆ ಮಾಡಿದ್ದಾರೆ. ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.
ಏನಿದರ ಅಸಲಿಯತ್ತು?
ಟಿ20 ವಿಶ್ವಕಪ್ ಗೆದ್ದ ತಂಡಕ್ಕೆ ಶುಭಕೋರಿದ ಫೋಟೊ ಎಡಿಟ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಟಿ20 ವಿಶ್ವಕಪ್ ಸಂಭ್ರಮಾಚರಣೆಯ ಹಲವು ಫೋಟೋಗಳನ್ನು ಕ್ಲಿಕ್ ಮಾಡಲಾಗಿತ್ತು. ಯಶಸ್ವಿ ಜೈಸ್ವಾಲ್ ಕೂಡ ತಮ್ಮ ಅಭಿನಂದನಾ ಪೋಸ್ಟ್‌ನಲ್ಲಿ ಅದೇ ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದರರ್ಥ ಗಿಲ್ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಚಿತ್ರ ಎಡಿಟ್ ಮಾಡಿಲ್ಲ. ಕ್ಲಿಕ್ಕಿಸಿದ ಹಲವು ಚಿತ್ರಗಳಲ್ಲಿ ಒಂದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications