Shubman Gill: ಟೈಟಾನ್ಸ್ ನಾಯಕನಿಗೆ 12 ಲಕ್ಷ ದಂಡ
19ನೇ ಆವೃತ್ತಿ ಐಪಿಎಲ್‌ನ 14ನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ತನ್ನದಾಗಿಸಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರ್‌ಗಳಲ್ಲಿ 210 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 1 ರನ್‌ಗಳಿಂದ ಪಂದ್ಯವನ್ನು ಕೈ ಚೆಲ್ಲಿತು. ಕೊನೆಯವರೆಗೂ ಅಮೋಘ ಬ್ಯಾಟಿಂಗ್ ನಡೆಸಿದ ಡೇವಿಡ್ ಮಿಲ್ಲರ್ ತಂಡಕ್ಕೆ ಜಯದ ಮಾಲೆ ತೊಡಿಸುವಲ್ಲಿ ವಿಫಲರಾದರು. ಈ ಪಂದ್ಯದಲ್ಲಿ ಜಯ ಸಾಧಿಸಿದರೂ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ ದಂಡದ ಬರೆ ಬಿದ್ದಿದೆ.
ಶುಭಮನ್ ಗಿಲ್ ಅವರ ಮುಂದಾಳತ್ವದ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿತು. ಹೀಗಾಗಿ ಕೊನೆಯ ಓವರ್‌ನಲ್ಲಿ ಒಬ್ಬ ಎಕ್ಸ್‌ಟ್ರಾ ಫಿಲ್ಡರ್ ಅನ್ನು 30 ಯಾರ್ಡ್ ಸರ್ಕಲ್‌ನಲ್ಲಿ ನಿಲ್ಲಿಸಿಕೊಂಡಿತು. ಆದರೆ ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡಿದ್ದರಿಂದ ಟೈಟಾನ್ಸ್ ನಾಯಕ ಗಿಲ್ ಅವರಿಗೆ ದಂಡದ ಬಿಸಿ ಬಿದ್ದಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅಡಿಯಲ್ಲಿ ಇದು ಅವರ ಮೊದಲ ಅಪರಾಧವಾಗಿದ್ದು, ಇವರಿಗೆ 12 ಲಕ್ಷ ದಂಡವನ್ನು ವಿಧಿಸಲಾಗಿದೆ.

ಇದೇ ತಪ್ಪನ್ನು ಈ ಲೀಗ್‌ನಲ್ಲಿ ಗಿಲ್ ಮತ್ತೆ ಪುನರಾವರ್ತಿಸಿದರೆ ಅವರಿಗೆ 24 ಲಕ್ಷ ರೂಪಾಯಿಯ ದಂಡವನ್ನು ವಿಧಿಸಲಾಗುತ್ತದೆ. ಅಲ್ಲದೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಎಲ್ಲ ಆಟಗಾರರಿಗೂ12 ಲಕ್ಷ ದಂಡವನ್ನು ವಿಧಿಸಲಾಗುತ್ತದೆ. ಇದೇ ತಪ್ಪನ್ನು ಮೂರು ಬಾರಿ ಮಾಡಿದ್ದೇ ಆದಲ್ಲಿ ನಾಯಕನ ಮೇಲೆ ಒಂದು ಪಂದ್ಯದ ನಿಷೇಧ ಹೇರಲಾಗುತ್ತದೆ.
ರಶೀದ್ ಪಂದ್ಯ ಶ್ರೇಷ್ಠ ಆಟಗಾರ
ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಸುಲಭವಾಗಿ ಗೆಲ್ಲಬಹುದಿತ್ತು. ಈ ಪಂದ್ಯದಲ್ಲಿ ಡೆಲ್ಲಿ 10 ಓವರ್‌ಗಳಲ್ಲಿ 100 ರನ್ ಗಡಿ ದಾಟಿತ್ತು. ಅಲ್ಲದೆ ತಂಡ ಗೆಲುವಿನ ಹಾದಿಯಲ್ಲಿತ್ತು. ಆದರೆ ಕೊನೆಯಲ್ಲಿ ಡೇವಿಡ್ ಮಿಲ್ಲರ್ ಅವರು ಮಾಡಿದ ಆ ಒಂದು ತಪ್ಪಿನಿಂದ ಡೆಲ್ಲಿ ಸೋಲು ಕಾಣುವಂತೆ ಆಯಿತು. ಈ ಪಂದ್ಯದಲ್ಲಿ ಟೈಟಾನ್ಸ್ ಪರ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್, ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಮಾತ್ರ ಸ್ಪಿನ್ ಬೌಲರ್ ರಶೀದ್ ಖಾನ್ ಅವರಿಗೆ ನೀಡಲಾಯಿತು. ಈ ಪಂದ್ಯದಲ್ಲಿ ರಶೀದ್ 3 ವಿಕೆಟ್ ಕಬಳಿಸಿದ್ದರು. ಗುಜರಾತ್ ಲೀಗ್‌ನಲ್ಲಿ ಮೊದಲ ಗೆಲುವಿನ ನಗೆ ಬೀರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications