Shubman Gill: ಶುಭಮನ್ ಗಿಲ್ ಅದ್ಭುತ ಸಾಧನೆಗೆ ವಿಶೇಷ ಪ್ರಶಸ್ತಿ
ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿ ಘೋಷಣೆಯಾಗಿದೆ. ಭಾರತ ತಂಡದ ಉಪನಾಯಕ ಶುಭಮನ್ ಗಿಲ್ ಈ ಬಾರಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದಾರೆ. ಶುಭಮನ್ ಗಿಲ್ ಆಸ್ಟ್ರೇಲಿಯಾ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಮತ್ತು ನ್ಯೂಜಿಲೆಂಡ್ ಆಲ್‌ರೌಂಡರ್ ಗ್ಲೆನ್ ಫಿಲಿಪ್ಸ್ ಅವರೊಂದಿಗೆ ಪೈಪೋಟಿ ನಡೆಸುತ್ತಿದ್ದರು. ಈ ಇಬ್ಬರನ್ನು ಹಿಂದಿಕ್ಕುವ ಮೂಲಕ ಗಿಲ್ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಶುಭಮನ್ ಗಿಲ್ ಫೆಬ್ರವರಿ ತಿಂಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅವರು ಐದು ಏಕದಿನ ಪಂದ್ಯಗಳಲ್ಲಿ 101.05ರ ಸರಾಸರಿಯಲ್ಲಿ 406 ರನ್ ಗಳಿಸಿದ್ದರು. ಈ ವೇಳೆ ಅವರ ಸ್ಟ್ರೈಕ್‌ರೇಟ್ 94.19 ಆಗಿತ್ತು. ಈ ಅಮೋಘ ಪ್ರದರ್ಶನಕ್ಕಾಗಿ ಅವರಿಗೆ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ ಸಿಕ್ಕಿದೆ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 3-0 ಅಂತರದಲ್ಲಿ ಗೆದ್ದಿತ್ತು. ಈ ಸರಣಿ ಗೆಲುವಿನಲ್ಲಿ ಶುಭಮನ್ ಗಿಲ್ ಪ್ರಮುಖ ಪಾತ್ರವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಗಿಲ್ 87, 60, 112 ರನ್‌ಗಳನ್ನು ಕ್ರಮವಾಗಿ ಕಲೆ ಹಾಕಿದ್ದರು. ಇದಕ್ಕಾಗಿ ಗಿಲ್ ಅವರಿಗೆ ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಯನ್ನು ನೀಡಲಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ನಂತರ ಚಾಂಪಿಯನ್ಸ್ ಟ್ರೋಫಿ ಆರಂಭವಾಯಿತು. ಈ ಮೆಗಾ ಟೂರ್ನಿಯಲ್ಲಿಯೂ ಶುಭಮನ್ ಗಿಲ್ ಸ್ಥಿರ ಪ್ರದರ್ಶನ ನೀಡಿದರು. ಬಾಂಗ್ಲಾದೇಶ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಗಿಲ್ ಮಿಂಚಿನ ಶತಕ ಬಾರಿಸಿ ಭಾರತ ತಂಡವನ್ನು ಗೆಲುವಿನಿತ್ತ ಕೊಂಡೊಯ್ದರು. ಇದಾದ ಬಳಿಕ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 46 ರನ್‌ಗಳ ಕೊಡುಗೆ ನೀಡಿದ್ದರು.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಟೀಮ್ ಇಂಡಿಯಾ ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ರೋಹಿತ್ ಶರ್ಮಾ ನೇತೃತ್ವದಲ್ಲಿ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದಿದೆ. ಈ ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಸಂಘಟಿತ ಪ್ರದರ್ಶನ ನೀಡಿತು. ಸತತ ಐದು ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಐಸಿಸಿ ಏಕದಿನ ಶ್ರೇಯಾಂಕ
ಇತ್ತೀಚಿನ ಐಸಿಸಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ 3 ಆಟಗಾರರು ಟಾಪ್ -5 ರಲ್ಲಿ ಸ್ಥಾನ ಪಡೆದಿದ್ದಾರೆ. ಸ್ಟಾರ್ ಬ್ಯಾಟರ್‌ಗಳಾದ ಶುಭಮನ್ ಗಿಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಮೊದಲ ಸ್ಥಾನದಲ್ಲಿ ಯುವ ಬ್ಯಾಟರ್ ಶುಭಮನ್ ಗಿಲ್ ಇದ್ದರೆ, ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಐದನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications