50 ರನ್ ಬಾರಿಸುತ್ತಲೇ ದಾಖಲೆ ಬರೆಯಲಿರುವ ಶುಭಮನ್ ಗಿಲ್
ಶನಿವಾರದಿಂದ ನ್ಯೂ ಚಂಡೀಗಢ ಮೈದಾನದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುವ ವಿಶ್ವಾಸವನ್ನು ಹೊಂದಿದೆ. ಟೀಮ್ ಇಂಡಿಯಾವನ್ನು ಈ ಪಂದ್ಯದಲ್ಲಿ ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಇವರು ಇತ್ತೀಚಿಗೆ ಭಾರತದಲ್ಲಿ ನಡೆದ ಐಪಿಎಲ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಅಬ್ಬರಿಸಿದ್ದಾರೆ. ಇದೇ ಪ್ರದರ್ಶನವನ್ನು ಇವರು ಟೆಸ್ಟ್ ಪಂದ್ಯದಲ್ಲಿ ಮುನ್ನಡೆಸುವ ಕನಸು ಕಾಣುತ್ತಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಶುಭಮನ್ ಗಿಲ್ 50 ರನ್ ಬಾರಿಸುತ್ತಿದ್ದಂತೆ ದೊಡ್ಡ ದಾಖಲೆಯನ್ನು ಬರೆಯಬಹುದಾಗಿದೆ. ದಾಖಲೆ ಯಾವುದು? ಎಂಬ ಬಗ್ಗೆ ವರದಿ ಇಲ್ಲಿದೆ.
ಐಪಿಎಲ್ ಬಳಿಕ ಭಾರತದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಸರಣಿ ಇದಾಗಿದ್ದರಿಂದ ಈ ಟೆಸ್ಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಶುಭಮನ್ ಗಿಲ್ ಮುಂದಾಳತ್ವದ ತಂಡಕ್ಕೆ ತವರಿನಲ್ಲಿ ಅಫ್ಘಾನಿಸ್ತಾನದ ಸ್ಪಿನ್ ಬೌಲರ್‌ಗಳ ಸವಾಲು ಎಸೆಯಲಿದ್ದಾರೆ. ಈ ಸವಾಲನ್ನು ಮೆಟ್ಟಿನಿಲ್ಲಲು ಭಾರತ ಸಹ ಪ್ಲ್ಯಾನ್ ಮಾಡಿಕೊಂಡಿದೆ. ಈ ವೇಳೆ ಶುಭಮನ್ ಗಿಲ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಟೀಮ್ ಇಂಡಿಯಾದ ನಾಯಕ ಸ್ಥಾನವನ್ನು ವಹಿಸಿಕೊಂಡ ಬಳಿಕ ಶುಭಮನ್ ಗಿಲ್ ಸಹ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಗಿಲ್ 10 ಇನ್ನಿಂಗ್ಸ್‌ಗಳಲ್ಲಿ 75.4 ರ ಸರಾಸರಿಯಲ್ಲಿ 754 ರನ್ ಗಳಿಸಿದ್ದಾರೆ. ಈ ವರೆಗೆ ಗಿಲ್ ಟೆಸ್ಟ್ ನಾಯಕನಾಗಿ ಎಂಟು ಟೆಸ್ಟ್ ಪಂದ್ಯಗಳಲ್ಲಿ 14 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ್ದು, 79.16 ಸರಾಸರಿಯಲ್ಲಿ 950 ರನ್ ಗಳಿಸಿದ್ದಾರೆ.
ಶುಭಮನ್ ಗಿಲ್ ದಾಖಲೆ
ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 50 ರನ್ ಬಾರಿಸುವಲ್ಲಿ ಸಫಲರಾದರೆ, ನಾಯಕನಾಗಿ 1,000 ಟೆಸ್ಟ್ ರನ್‌ಗಳನ್ನು ಪೂರೈಸಿದ ಸಾಧನೆಯನ್ನು ಮಾಡಲಿದ್ದಾರೆ. ಕಡಿಮೆ ಇನ್ನಿಂಗ್ಸ್‌ಗಳಲ್ಲಿ 1,000 ಟೆಸ್ಟ್ ರನ್‌ಗಳನ್ನು ತಲುಪಿದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ನಾಯಕರಾಗಿ ಕಡಿಮೆ ಟೆಸ್ಟ್ ಪಂದ್ಯದಲ್ಲಿ 1000 ರನ್ ಪೂರೈಸಿದ ಹೆಗ್ಗಳಿಕೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. ಇವರು 14 ಇನಿಂಗ್ಸ್‌ಳಲ್ಲಿ ಈ ಸಾಧನೆ ಮಾಡಿದ್ದಾರೆ.
ನಾಯಕನಾಗಿ ಹೆಚ್ಚು ರನ್ ಬಾರಿಸಿದ ಭಾರತೀಯ ಆಟಗಾರ ಯಾರು?
ಈ ಸಾಧನೆಯನ್ನು ಗಿಲ್ ಮಾಡಿದಲ್ಲಿ ಟೆಸ್ಟ್ ನಾಯಕನಾಗಿ 1,000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ 11 ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಲಿದ್ದಾರೆ. ಈ ಸ್ವರೂಪದಲ್ಲಿ ಟೀಮ್ ಇಂಡಿಯಾದ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ, ಅವರು 68 ಪಂದ್ಯಗಳ 113 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡುವಾಗ 5864 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್ ಧೋನಿ ಇದ್ದು, ಇವರು 3454 ರನ್ ಸಿಡಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಸುನಿಲ್ ಗವಾಸ್ಕರ್ ಇದ್ದು, ಇವರು 3449 ರನ್ ಕಲೆ ಹಾಕಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications