ಭಾರತದಲ್ಲಿ ಇಂದು ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಲೀಗ್ ಮುಗಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಈಗಾಗಲೇ ಐಪಿಎಲ್‌ನಿಂದ ಹೊರ ಬಿದ್ದಿರುವ ತಂಡಗಳು ಆಟಗಾರರು ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಪ್ರವಾಸದ ವೇಳೆ ಭಾರತ "ಎ" ಇಂಗ್ಲೆಂಡ್ ಲಯನ್ಸ್ ವಿರುದ್ಧ ಅನಧಿಕೃತ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ತಂಡದ ನಾಯಕ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಶುಭಮನ್ ಗಿಲ್ ಈ ತಂಡಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.
ಭಾರತ ಎ ತಂಡದಲ್ಲಿ ನಾಯಕ ಶುಭಮನ್ ಗಿಲ್ ಅವರನ್ನು ಹೊರತು ಪಡಿಸಿ ಗುಜರಾತ್ ಟೈಟಾನ್ಸ್ ಪರ ಐಪಿಎಲ್‌ನಲ್ಲಿ ಬ್ಯಾಟ್ ಮಾಡಿ ಗಮನ ಸೆಳೆದಿದ್ದ ಸಾಯಿ ಸುದರ್ಶನ್ ಅವರಿಗೂ ಅವಕಾಶ ನೀಡಲಾಗಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ ಗಿಲ್ ಹಾಗೂ ಸುದರ್ಶನ್ ಭಾರತ "ಎ" ತಂಡವನ್ನು ಸೇರಿಕೊಳ್ಳುವುದು ಡೌಟ್ ಎಂದು ಹೇಳಲಾಗುತ್ತಿದೆ. ಈ ಇಬ್ಬರೂ ಆಟಗಾರರು ಜೂನ್ 6 ರಂದು ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್ ಹಂತದಲ್ಲೇ ಐಪಿಎಲ್‌ಗೆ ಗುಡ್ ಬಾಯ್ ಹೇಳಿದ್ದು ಕೆಎಲ್ ರಾಹುಲ್ ಭಾರತ "ಎ" ಪರ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ಭಾರತ "ಎ" ತಂಡ ಡ್ರಾಸಾಧಿಸಿದೆ. ಈ ವೇಳೆ ಕರುಣ್ ನಾಯರ್ ದ್ವಿಶತಕ ಬಾರಿಸಿ ಮಿಂಚಿದ್ದರು. ಧ್ರುವ್ ಜುರೆಲ್ ಮತ್ತು ಸರ್ಫರಾಜ್ ಖಾನ್ ಭಾರತ ಪರ ಬ್ಯಾಟಿಂಗ್ ಕ್ಷಮತೆಯನ್ನು ಪ್ರದರ್ಶಿಸಿದ್ದರು. ಏಳು ವರ್ಷಗಳಿಂದ ಭಾರತ ತಂಡದಿಂದ ದೂರ ಉಳಿದಿದ್ದ ಕರುಣ್ ನಾಯರ್ ಅವರ ಪ್ರದರ್ಶನ ನೋಡಿದರೆ, ಅವರು ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡುವುದು ಬಹುತೇಕ ಖಚಿತವಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಬಳಿಕ ಬೆನ್ನು ನೋವಿನಿಂದ ಬಳಲುತ್ತಿದ್ದ ವೇಗದ ಬೌಲರ್ ಆಕಾಶ್ ದೀಪ್ ಕೆಲ ತಿಂಗಳು ಮೈದಾನದಿಂದ ದೂರ ಉಳಿದರು. ಏಪ್ರಿಲ್‌ನಲ್ಲಿ ಅವರು ಫಿಟ್ ಆದ ಬಳಿಕ ಅವರು ಮತ್ತೆ ಅಂಗಳ ಪ್ರವೇಶಿಸಿದರು. ಇವರು ಮೊದಲ ಪಂದ್ಯದಲ್ಲಿ ಬೌಲಿಂಗ್ ನಡೆಸಿರಲಿಲ್ಲ. ಹೀಗಾಗಿ ಇವರು ಎರಡನೇ ಪಂದ್ಯದಲ್ಲಿ ಬೌಲಿಂಗ್ ಮಾಡುವುದನ್ನು ಕಾಣಬಹುದಾಗಿದೆ.

ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರಿಂದ, ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಸಹ ಎದ್ದಿದ್ದವು. ಈಗ ಶುಭಮನ್ ಗಿಲ್ ನಾಯಕರಾಗಿ ಕಾಣಿಸಿಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿ ಆಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.