Asia Cup T20: ಶುಭಮನ್ ಗಿಲ್‌ಗೆ ಸಿಗಲಿದೆ ಭರ್ಜರಿ ಗಿಫ್ಟ್
ಟೀಮ್ ಇಂಡಿಯಾ ಆಟಗಾರರು ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಈ ವೇಳೆ ಆಟಗಾರರು ದೇಶೀಯ ಟೂರ್ನಿ ಹಾಗೂ ಮುಂಬರುವ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೇಲೆ ಚಿತ್ತ ನೆಟ್ಟಿವೆ. ಈ ವೇಳೆ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್‌ಗೆ ಬಿಗ್ ಗಿಫ್ಟ್ ಸಿಗುವ ಸಾಧ್ಯತೆ ಇದೆ. ಇಂಗ್ಲೆಂಡ್ ಪ್ರವಾಸದಲ್ಲಿ ಯಂಗ್ ಟೀಮ್ ಇಂಡಿಯಾ ನೀಡಿದ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಈ ವೇಳೆ ತಂಡವನ್ನು ಮುನ್ನಡೆಸಿದ ಶುಭಮನ್ ಗಿಲ್ ಅವರಿಗೆ ಈ ಪ್ರವಾಸದ ಹೊಸ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಈ ಜವಾಬ್ದಾರಿ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತದ ಆಶ್ರಯದಲ್ಲಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗುತ್ತಿದೆ. ಈ ಬಾರಿಯ ಏಷ್ಯಾ ಕಪ್ ಟಿ20 ಫಾರ್ಮೆಟ್‌ನಲ್ಲಿ ನಡೆಯಲಿದೆ. ಈ ಪ್ರಶಸ್ತಿಯ ಮೇಲೆ ಭಾರತ ಕಣ್ಣು ನೆಟ್ಟಿದೆ. ಟೀಮ್ ಇಂಡಿಯಾ ಈ ಸರಣಿಯಲ್ಲಿ ಸೆಪ್ಟಂಬರ್ 10 ರಂದು ತನ್ನ ಅಭಿಯಾನವನ್ನು ಆರಂಭಿಸಿಲಿದೆ. ಇನ್ನು ವಿಶ್ವದ ಚಿತ್ತವನ್ನೇ ಕದ್ದಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಪಂದ್ಯ ಸೆ.14 ರಂದು ನಡೆಯಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾ ಈ ತಿಂಗಳ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

ಏಷ್ಯಾ ಕಪ್‌ಗೆ ಟಿ20 ಕ್ರಿಕೆಟ್‌ಗೆ ಪ್ರಕಟವಾಗುವ ತಂಡದಲ್ಲಿ ಶುಭಮನ್ ಗಿಲ್ ಅವರಿಗೂ ತಂಡದಲ್ಲಿ ಸ್ಥಾನ ಲಭಿಸುವ ಚಾನ್ಸ್ ಇದೆ. ಇವರು ಕಳೆದ ಒಂದು ವರ್ಷದಿಂದ ಯಾವುದೇ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿಲ್ಲ. ಇವರು ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರಿಂದ ಇವರಿಗೆ ಮತ್ತೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಇವರು ತಂಡಕ್ಕೆ ಸೇರಿಕೊಳ್ಳುವುದು ಮಾತ್ರವಲ್ಲದೆ ತಂಡದಲ್ಲಿ ಇವರಿಗೆ ವಿಶೇಷ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ. ಟೀಮ್ ಇಂಡಿಯಾದ ಉಪನಾಯಕ ಪಟ್ಟವನ್ನು ಶುಭಮನ್ ಗಿಲ್ ಅವರಿಗೆ ಲಭಿಸುವ ಸಾಧ್ಯತೆ ಇದೆ. ಇವರು ಅಕ್ಷರ್ ಪಟೇಲ್ ಅವರಿಂದ ಉಪನಾಯಕ ಪಟ್ಟವನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ.
ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಗಿಲ್?
ಒಂದು ವೇಳೆ ಟೀಮ್ ಇಂಡಿಯಾಕ್ಕೆ ಶುಭಮನ್ ಗಿಲ್ ಅವರು ಮರಳಿದ್ದೇ ಆದಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ಇವರು ಪ್ರಕಟಿತ ತಂಡದಲ್ಲಿ ಸ್ಥಾನ ಪಡೆದಿದ್ದೇ ಆದಲ್ಲಿ ಇವರನ್ನು ಆಡುವ ಹನ್ನೊಂದರ ಬಳಗದಿಂದ ದೂರ ಇಡಲು ಅಸಾಧ್ಯ. ಆದರೆ ಇವರು ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬ ಪ್ರಶ್ನೆ ಎದ್ದಿವೆ. ಇನ್ನು ಟೀಮ್ ಇಂಡಿಯಾದ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ ಶುಭಮನ್ ಗಿಲ್ ಮೂರನೇ ಅಥವಾ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದನ್ನು ನೋಡಬಹುದಾಗಿದೆ. ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಭಾರತ ತಂಡದ ಸಂಯೋಜನೆ ಹೇಗಿರಲಿದೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications