Shubman Gill: ಹೇಗಿದೆ ಶುಭಮನ್ ಗಿಲ್ ನಾಯಕತ್ವದ ದಾಖಲೆ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಈಗಾಗಲೇ ಸೆಮಿಫೈನಲ್ ಹಂತವನ್ನು ತಲುಪಿವೆ. ಈ ಪಂದ್ಯದಲ್ಲಿ ಜಯ ದಾಖಲಿಸಿದ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆಯುತ್ತದೆ. ಈ ಸ್ಥಾನದ ಮೇಲೆ ಉಭಯ ತಂಡಗಳ ಚಿತ್ತ ನೆಟ್ಟಿದೆ. ಇನ್ನು ಟೀಮ್ ಇಂಡಿಯಾದ ನಿಯಮಿತ ನಾಯಕ ಈ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
ಟೀಮ್ ಇಂಡಿಯಾ ಲೀಗ್ ಹಂತದ ಪಂದ್ಯದಲ್ಲಿ ಬಾಂಗ್ಲಾ ಹಾಗೂ ಪಾಕಿಸ್ತಾನ ವಿರುದ್ಧ 6 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಬದಲಿಗೆ, ಶುಭಮನ್ ಗಿಲ್ ತಂಡವನ್ನು ಮುನ್ನಡೆಸಬಹುದು. ಪಾಕ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಹೀಗಾಗಿ ಇವರಿಗೆ ವಿಶ್ರಾಂತಿ ನೀಡಿ ಗಿಲ್‌ಗೆ ಪಟ್ಟ ಕಟ್ಟುವ ಸಾಧ್ಯತೆ ಇದೆ. ಟೀಮ್ ಇಂಡಿಯಾ ನಾಯಕತ್ವದ ಜವಾಬ್ದಾರಿಯನ್ನು ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ವಹಿಸಿಕೊಳ್ಳಬಹುದು, ಅವರ ಪ್ರಸ್ತುತ ಬ್ಯಾಟಿಂಗ್ ಫಾರ್ಮ್ ಕೂಡ ಉತ್ತಮವಾಗಿದೆ.

ಶುಭಮನ್ ಗಿಲ್ ಈಗಾಗಲೇ ದೇಶೀಯ ಟೂರ್ನಿ ಹಾಗೂ ಐಪಿಎಲ್‌ನಲ್ಲಿ ತಾವು ಪ್ರತಿನಿಧಿಸಿದ ತಂಡವನ್ನು ಮುನ್ನಡೆಸಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ ಇವರು ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆಯನ್ನು ಹಸ ಹೊಂದಿದ್ದಾರೆ. ಇನ್ನು ಐಪಿಎಲ್‌ನಲ್ಲಿ ಇವರ ದಾಖಲೆ ಅಷ್ಟಾಗಿ ಚೆನ್ನಾಗಿಲ್ಲ. ಆದರೆ ಭಾರತ ಪರ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಿದ್ದಾಗ ಸ್ಥಿರ ಅಂಕಿ ಅಂಶಗಳನ್ನು ಹೊಂದಿದ್ದಾರೆ.
ಹೇಗಿದೆ ಶುಭ್‌ಮನ್ ಗಿಲ್ ನಾಯಕತ್ವದ ದಾಖಲೆ?
ಗಿಲ್ ಇದುವರೆಗೆ 5 ಟಿ20 ಪಂದ್ಯಗಳಲ್ಲಿ ಭಾರತದ ನಾಯಕರಾಗಿದ್ದಾರೆ. ಗಿಲ್ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಟಿ20 ಸರಣಿಗಳನ್ನು ಆಡಲು ಜಿಂಬಬ್ವೆಗೆ ಪ್ರವಾಸ ಬೆಳಸಿತ್ತು. ಈ ಸರಣಿಯಲ್ಲಿ ಟೀಮ್ ಇಂಡಿಯಾ ಐಸು ಪಂದ್ಯಗಳ ಸರಣಿಯನ್ನು 4-1 ರಿಂದ ಗೆದ್ದುಕೊಂಡಿತ್ತು. ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗಿಲ್ ನಾಯಕನಾಗಿ ಮೈದಾನಕ್ಕಿಳಿದರೆ, ಏಕದಿನ ಫಾರ್ಮೆಟ್‌ನಲ್ಲಿ ಮೊದಲ ಬಾರಿಗೆ ನಾಯಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಬಿಸಿಸಿಐ ಪ್ರಕಟಿತ ತಂಡದಲ್ಲಿ ಇವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಐಪಿಎಲ್‌ನಲ್ಲಿ ಸಾಧನೆ
ಗುಜರಾತ್ ಜೈಂಟ್ಸ್ ತಂಡವನ್ನು ಕಳೆದ ಋತುವಿನಲ್ಲಿ ತಂಡವನ್ನು ಮುನ್ನಡೆಸಿರುವ ಶುಭಮನ್ ಗಿಲ್, 14 ಪಂದ್ಯಗಳಲ್ಲಿ 5 ಜಯ, 7 ಸೋಲು ಕಂಡಿದ್ದು 12 ಅಂಕಗಳೊಂದಿಗೆ 8ನೇ ಸ್ಥಾನಕ್ಕೆ ತೃಪ್ತಿ ಪಟ್ಟಿತ್ತು. ಈ ವೇಳೆ ಕಳೆದ ಆವೃತ್ತಿಯಲ್ಲಿ ತಂಡ ಐಪಿಎಲ್ ಪ್ಲೇ ಆಫ್‌ಗೆ ಕ್ವಾಲಿಫೈ ಆಗುವಲ್ಲಿ ವಿಫಲವಾಗಿತ್ತು. ಈ ಬಾರಿಯೂ ಐಪಿಎಲ್‌ನಲ್ಲಿ ಶುಭಮನ್ ಗಿಲ್ ಅವರು ಈ ತಂಡವನ್ನು ಮುನ್ನಡೆಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications