ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಇದರ ಪರಿಣಾಮ ದೇಶೀಯ ಟೂರ್ನಿಯಿಂದ ಇವರು ಹಿಂದೆ ಸರಿದಿದ್ದಾರೆ. ವರ್ಷದ ಬಳಿಕ ಶುಭಮನ್ ಗಿಲ್ ಟಿ20 ತಂಡಕ್ಕೆ ಕಂ ಬ್ಯಾಕ್ ಮಾಡಿದ್ದು, ಏಷ್ಯಾ ಕಪ್‌ನಲ್ಲಿ ಮ್ಯಾಜಿಕ್ ಮಾಡಲು ಎದುರು ನೋಡ್ತಾ ಇದ್ದಾರೆ. ಆದರೆ ಇದಕ್ಕೂ ಮೊದಲು ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡುವಂತೆ ಮಾಡಿದೆ.
ಭಾರತದ ಆತಿಥ್ಯದಲ್ಲಿ ಏಷ್ಯಾ ಕಪ್ ಟಿ20 ಟೂರ್ನಿ ಸೆ.9 ರಿಂದ ಆರಂಭವಾಗಲಿದೆ. ಈ ಲೀಗ್‌ನಲ್ಲಿ ಟೀಮ್ ಇಂಡಿಯಾ ಸೆ.10 ರಂದು ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಾದ ಬಳಿಕ ಸೆ.14 ರಂದು ಭಾರತ-ಪಾಕಿಸ್ತಾನ ವಿರುದ್ಧ ಕಾದಾಟವನ್ನು ನಡೆಸಲಿದೆ. ಈ ಬಿಗ್ ಟೂರ್ನಿಗೆ ಮುನ್ನ ಗಿಲ್ ಅನಾರೋಗ್ಯಕ್ಕೆ ತುತ್ತಾಗಿದ್ದು ಚಿಂತೆ ಹೆಚ್ಚಿಸಿದೆ.

ಆದರೆ ಸದ್ಯಕ್ಕೆ ಬರುತ್ತಿರುವ ಮಾಹಿತಿಯ ಪ್ರಕಾರ ಶುಭಮನ್ ಗಿಲ್ ಜ್ವರದಿಂದ ಬಳಲುತ್ತಿದ್ದಾರೆ. ಇವರು ಏಷ್ಯಾ ಕಪ್ ವೇಳೆಗೆ ಚೇತರಿಸಿಕೊಳ್ಳಬಹುದು ಎಂದು ತಿಳಿದು ಬಂದಿದೆ. ಇದೇ ಕಾರಣದಿಂದ ಶುಭಮನ್ ಗಿಲ್ ದುಲೀಪ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ಗಿಲ್ ನಾರ್ತ್ ಜಾನ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು. ಇವರು ಹೊರ ಹೋದ ಬಳಿಕ ಇವರಿಂದ ತೆರವಾದ ಸ್ಥಾನವನ್ನು ಅಂಕಿತ್ ಕುಮಾರ್ ತುಂಬಲಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ಗಿಲ್ ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಅಭ್ಯಾಸವನ್ನು ಆರಂಭಿಸಬಹುದು ಎಂದು ವರದಿ ಮಾಡಿದೆ.
ದುಲೀಪ್ ಟ್ರೋಫಿಯಲ್ಲಿ ತಂಡದ ಉಪನಾಯಕರಾಗಿದ್ದ ಹರಿಯಾಣದ ಅಂಕಿತ್ ಕುಮಾರ್ ಉತ್ತರ ವಲಯದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಉತ್ತರ ವಲಯದ ಪಂದ್ಯ ಇಂದು ಪೂರ್ವ ವಲಯದ ವಿರುದ್ಧ ಆರಂಭವಾಗಲಿದೆ. ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ದುಲೀಪ್ ಟ್ರೋಫಿಯ ಮೊದಲ ಪಂದ್ಯವನ್ನು ಆಡಲಿದ್ದಾರೆ.
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ. ಉಪನಾಯಕನ ಜವಾಬ್ದಾರಿಯನ್ನು ಶುಭಮನ್ ಗಿಲ್ ಅವರಿಗೆ ವಹಿಸಲಾಗಿದೆ. ಇವರು ಒಂದು ವರ್ಷದ ಬಳಿಕ ಟಿ20 ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಇವರಿಗೆ ಬಿಸಿಸಿಐ ನಾಯಕತ್ವದ ಹೊಣೆಯನ್ನು ನೀಡಿದೆ. ಮುಂದಿನ ದಿನಗಳಲ್ಲಿ ಇವರಿಗೆ ನಾಯಕತ್ವ ನೀಡುವ ಸಾಧ್ಯತೆ ಇದೆ.

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಗಾಯದ ಕಾರಣದಿಂದ ರಿಷಭ್ ಪಂತ್ ಆಡುತ್ತಿಲ್ಲ. ಇವರ ಬದಲಿಗೆ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ವಿಕೆಟ್‌ಗಳಾಗಿ ಕಾಣಿಸಿಕೊಂಡಿದ್ದಾರೆ. ವೇಗಿ ಜಸ್ಪ್ರಿತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಏಷ್ಯಾಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್.