ಒಂದೇ ವರ್ಷದಲ್ಲಿ ಬದಲಾಯ್ತು ಟೀಮ್ ಇಂಡಿಯಾ: ಈ ಇಬ್ಬರಿಗೆ ಇನ್ನು ಸಿಗದ ಸ್ಥಾನ
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಅಲ್ಲದೆ ರೋಹಿತ್ ಶರ್ಮಾ ಅವರಿಂದ ತೆರವಾದ ನಾಯಕತ್ವದ ಸ್ಥಾನವನ್ನು ಶುಭಮನ್ ಗಿಲ್ ತುಂಬಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿರುವ 37ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಐಪಿಎಲ್‌ನಲ್ಲಿ ಸದ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ತಂಡ ಸ್ಥಿರ ಪ್ರದರ್ಶನ ನೀಡುತ್ತಿದೆ.
ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಟೀಮ್ ಇಂಡಿಯಾಕ್ಕೂ ಹಾಗೂ ಒಂದು ವರ್ಷದ ಹಿಂದಿನ ಟೀಮ್ ಇಂಡಿಯಾಕ್ಕೂ ದೊಡ್ಡ ವ್ಯತ್ಯಾಸವೇನೂ ಇಲ್ಲ. ಆದರೆ ಆಸ್ಟ್ರೇಲಿಯಾ ಪ್ರವಾಸವನ್ನು ಶ್ರೇಯಸ್ ಅಯ್ಯರ್ ಮಾಡಿರಲಿಲ್ಲ. ಶ್ರೇಯಸ್ ಅಯ್ಯರ್, ಕಳೆದ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಇವರು ಕಳಪೆ ಪ್ರದರ್ಶನ ನೀಡಿದ್ದರಿಂದ ತಂಡದಿಂದ ಹೊರ ನಡೆಯಬೇಕಾಯಿತು. ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದರೂ ಶ್ರೇಯಸ್ ಅಯ್ಯರ್ ಅಬ್ಬರಿಸಿದ್ದರು.

ಶ್ರೇಯಸ್ ಅಯ್ಯರ್ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರ ಫಲವಾಗಿ, ಇವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದರು. ಇವರು ಚಾಂಪಿಯನ್ಸ್ ಟ್ರೋಫಿ ಪ್ರದರ್ಶನದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಎಲ್ಲರ ಅಂದಾಜು ಉಲ್ಟಾ ಆಯಿತು. ಈ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.
ಆಯ್ಕೆ ಸಮಿತಿ ಹೇಳಿದ್ದೇನು?
ಶ್ರೇಯಸ್ ಅಯ್ಯರ್ ಪರ ಮಾತನಾಡಿರುವ ಬಿಸಿಸಿಐ ಅಜಿತ್ ಅಗರ್ಕರ್, ಇವರು ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ದೇಶೀಯ ಟೂರ್ನಿಯಲ್ಲಿ ಇವರು ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರು ಕೆಲವು ಸಮಯದ ವರೆಗೆ ಟೆಸ್ಟ್ ಕ್ರಿಕೆಟ್‌ನಿಂದ ಹೊರಗುಳಿಯುತ್ತಾರೆ. ಶ್ರೇಯಸ್ ಬದಲಿಗೆ ಕರುಣ್ ನಾಯರ್‌ಗೆ ಈ ಸರಣಿಯಲ್ಲಿ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ಇಶಾನ್‌ಗೆ ಇಲ್ಲ ಅವಕಾಶ
2023ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ಇಶಾನ್ ಕಿಶನ್, ಮತ್ತೆ ತಂಡಕ್ಕೆ ಎಂಟ್ರಿ ಪಡೆಯುವ ಕನಸು ಕಾಣುತ್ತಿದ್ದರು. ಅಲ್ಲದೆ ಇವರು ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅಲ್ಲದೆ ಇವರು ಬಿಸಿಸಿಐ ಕೇಂದ್ರ ಗುತ್ತಿಗೆ ಒಪ್ಪಂದಕ್ಕೆ ಸೇರ್ಪಡೆ ಗೊಂಡಿದ್ದರು. ಹೀಗಾಗಿ ಇವರು ಟೀಮ್ ಇಂಡಿಯಾ ಸೇರುವ ಕನಸು ಚಿಗುರಿತ್ತು. ಆದರೆ ಇವರ ಕನಸು ನುಚ್ಚುನೂರಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕೀಪರ್ ಬ್ಯಾಟರ್‌ಗಳಾಗಿ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಇಶನ್ ಇನ್ನು ಕಾಯಲೇ ಬೇಕು.
ಬದಲಾಯ್ತು ಟೀಮ್ ಇಂಡಿಯಾ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಈಗಾಗಲೇ ನಿವೃತ್ತಿ ಪಡೆದಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಸರ್ಫರಾಜ್ ಖಾನ್, ಹರ್ಷಿತ್ ರಾಣಾ ಇಂಗ್ಲೆಂಡ್ ಪ್ರವಾಸ ಬೆಳೆಸುತ್ತಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications