IND vs BAN: ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಶುಭ್‌ಮನ್ ಗಿಲ್‌ಗೆ ವಿಶ್ರಾಂತಿ
ಭಾರತ ಮತ್ತು ಬಂಗ್ಲಾದೇಶ ನಡುವಿನ ಎರಡು ಪಂದ್ಯ ಟೆಸ್ಟ್ ಸರಣಿಗೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದೆ. ಉಭಯ ತಂಡಗಳ ಮೊದಲ ಟೆಸ್ಟ್ ಪಂದ್ಯವೂ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯಲಿದೆ. ಟೆಸ್ಟ್ ಸರಣಿ ಆರಂಭಕ್ಕೂ ಮೊದಲು ಟೀಮ್ ಇಂಡಿಯಾ ಆಟಗಾರು ಚೆನ್ನೈನಲ್ಲಿ ಅಭ್ಯಾಸ ಶಿಬಿರದಲ್ಲಿದ್ದಾರೆ.
ಈಗ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣೊಗೂ ಮುನ್ನ ಕೆಲವು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗುವ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಹಲವು ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲಸದ ಹೊರೆ ನಿರ್ವಹಣಾ ನೀತಿಯ ಅಡಿಯಲ್ಲಿ ಆಟಗಾರಿಗೆ ವಿಶ್ರಾಂತಿ ನೀಡಲು ಬಯಸಿದೆ.

ವಿಶ್ರಾಂತಿ ಪಡೆಯಲಿರುವ ಆಟಗಾರರ ಪೈಕಿ ಟೀಮ್ ಇಂಡಿಯಾ ಉಪನಾಯಕ ಶುಭಮನ್ ಗಿಲ್ ಕೂಡ ಸೇರಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಭಾರತ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಅವರೊಂದಿಗೆ ತಂಡದ ಅಗ್ರ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಈ ಋತುವಿನಲ್ಲಿ ಅವರು 10 ಟೆಸ್ಟ್‌ಗಳನ್ನು ಆಡುವ ನಿರೀಕ್ಷೆಯಿದೆ.
ಶುಭಮನ್ ಗಿಲ್‌ಗೆ ವಿಶ್ರಾಂತಿ ಏಕೆ?
ಬಾಂಗ್ಲಾದೇಶ ವಿರುದ್ಧದ ಸರಣಿ ಮುಗಿದ ಬಳಿಕ ಭಾರತಕ್ಕೆ ನ್ಯೂಜಿಲೆಂಡ್ ಬರಲಿದೆ. ಈ ವೇಳೆ ಟೀಮ್ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್ ಭಾಗವಾಗಿದ್ದು, ಟೀಮ್ ಇಂಡಿಯಾಕ್ಕೆ ಗೆಲ್ಲುವುದು ಪ್ರಮುಖವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಶುಭಮನ್ ಗಿಲ್ ಹೊರತುಪಡಿಸಿ, ಇತರ ಕೆಲವು ಪ್ರಮುಖ ಆಟಗಾರರಿಗೂ ವಿಶ್ರಾಂತಿ ನೀಡಲಾಗುತ್ತಿದೆ.
ಟೀಮ್ ಇಂಡಿಯಾ ಪರ ಗಿಲ್ ಇದುವರೆಗೆ 21 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರ ಹೆಸರಿನಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ. ಅವರು ಸುಮಾರು 140 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಶುಭಮನ್ ಗಿಲ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ನೇಮಿಸಲಾಯಿತು. ಈ ಅವಕಾಶವನ್ನು ಬಳಸಿಕೊಂಡ ಯುವ ಬ್ಯಾಟರ್ ಸರಣಿಯನ್ನು ಭಾರತ 4-1 ಅಂತರದಲ್ಲಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications