ಅಂತಾರಾಷ್ಟ್ರೀಯ ಬುಧವಾರ ತನ್ನ ನೂತನ ಐಸಿಸಿ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಈ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಭಾರತೀಯ ಆಟಗಾರರು ಲಾಭ ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನ ಬ್ಯಾಟರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಉಪನಾಯಕ ಶುಭಮನ್ ಗಿಲ್, ಭರ್ಜರಿ ಏರಿಕೆ ಕಂಡಿದ್ದಾರೆ. ಇನ್ನು ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಅಯ್ಯರ್ ಸಹ ರ್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ.
ಟೀಮ್ ಇಂಡಿಯಾದ ಭರವಸೆಯ ಆಟಗಾರ ಶುಭಮನ್ ಗಿಲ್ ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಶ್ರೇಯಾಂಕವನ್ನು ತಲುಪಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧದ ಎರಡೂ ಏಕದಿನ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಇದರ ಪರಿಣಾಮ ಇವರ ಶ್ರೇಯಾಂಕದ ಮೇಲೆ ಬಿದ್ದಿದೆ. ಶುಭಮನ್ ಗಿಲ್ ಒಟ್ಟು 781 ಅಂಕಗಳನ್ನು ಕಲೆ ಹಾಕಿದ್ದು, ಎರಡನೇ ಸ್ಥಾನದಲ್ಲಿದ್ದಾರೆ.

ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ, ಒಂದು ಸ್ಥಾನ ಕುಸಿತ ಕಂಡಿದ್ದರು. ಇವರು ಕಟಕ್‌ನಲ್ಲಿ ಶತಕ ಸಿಡಿಸಿದರೂ ಸಹ ಇವರ ಶ್ರೇಯಾಂಕದಲ್ಲಿ ಕುಸಿತವಾಗಿದೆ. ಇವರು ಸದ್ಯ 773 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಬಂದಿದ್ದಾರೆ. ಇವರು ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಇವರ ಸ್ಥಾನವನ್ನು ಗಿಲ್ ಪಡೆದುಕೊಂಡಿದ್ದಾರೆ.
ಪಾಕಿಸ್ತಾನದ ಸೂಪರ್ ಸ್ಟಾರ್ ಬ್ಯಾಟರ್ ಬಾಬರ್ ಅಜಮ್ 786 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿರುವ ಬಾಬರ್ ಅಜಮ್ ಹಾಗೂ ಎರಡನೇ ಸ್ಥಾನದಲ್ಲಿರುವ ಗಿಲ್‌ಗೆ ಆರು ಅಂಕಗಳ ವ್ಯತ್ಯಾಸ ಇದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಗಿಲ್ ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ಈ ಸ್ಥಾನವನ್ನು ತಲುಪಬಹುದು.

ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಎರಡು ಸ್ಥಾನ ಕುಸಿತ ಕಂಡಿದ್ದು, ಸದ್ಯ ಆರನೇ ಸ್ಥಾನದಲ್ಲಿದ್ದಾರೆ. ಇವರ ಖಾತೆಯಲ್ಲಿ 728 ಅಂಕಗಳಿವೆ. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇವರು 669 ಅಂಕಗಳೊಂದಿಗೆ ಒಂದು ಸ್ಥಾನ ಏರಿಕೆ ಕಂಡಿದ್ದಾರೆ.
ಟೀಮ್ ಇಂಡಿಯಾದ ರಿಸ್ಟ್ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಇವರು 651 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಇವರು ಮೂರು ಸ್ಥಾನ ಇಳಿಕೆ ಕಂಡಿದ್ದಾರೆ. ಈ ಪಟ್ಟಿಯ ಮೊದಲ ಸ್ಥಾನದಲ್ಲಿ ರಶೀದ್ ಖಾನ್ ಇದ್ದು, ಇವರು 669 ಅಂಕಗಳನ್ನು ಹೊಂದಿದ್ದಾರೆ. ಶ್ರೀಲಂಕಾದ ಮಹೇಶ್ ತೀಕ್ಷಣ ಎರಡನೇ ಸ್ಥಾನ, ನಮಿಬಿಯಾದ ಬರ್ನಾರ್ಡ್ ಸ್ಕೋಲ್ಟ್ಜ್ ಮೂರನೇ ಸ್ಥಾನ, ಪಾಕ್‌ನ ಶಾಹಿನ್ ಶಾ ಆಫ್ರಿದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಭಾರತದ ಪರ ಮೊಹಮ್ಮದ್ ಸಿರಾಜ್ 10, ರವೀಂದ್ರ ಜಡೇಜಾ 11, ಮೊಹಮ್ಮದ್ ಶಮಿ 13ನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ 221 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.